🔥 TRENDING Junior National Badminton Semi-Finals... Trump cites India's 7% growth to urge... ₹4.67 crore fraud uncovered involving... ਨੇਵਲ ਡੌਕਯਾਰਡ ’ਚ ਵੱਡੀ ਸੰਨ੍ਹ: ਗੁਪਤ ਟਿਕਾਣ... *"ಬೀದರ ಜಿಲ್ಲಾ ಪೊಲೀಸ್, ಸಾರ್ವಜನಿಕರ ಭದ್ರತ... बोकारो में सीआईएसएफ सहायक कमांडेंट पर...
21 Nov 2026•
ગુજરાતી मराठी ਪੰਜਾਬੀ বাংলা

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಶಿಥಿಲ ಕಟ್ಟಡಗಳ ದುರಸ್ತಿಗೆ ಆಗ್ರಹದೇವದುರ್ಗ ತಾಲೂಕಿನ 105 ಶಾಲೆಗಳಲ್ಲಿ ಕಾಯಂ ಶಿಕ್ಷಕರಿಲ್ಲ; ಶಿಕ್ಷಣ ಸಚಿವರಿಗೆ AIMIM ಮನವಿ

✍️ Reporter: Khaja Hussain 🗓 21 Nov 2026, 09:58 AM 👁 9
Share: 💬 WhatsApp 📘 Facebook 𝕏 Post
**ರಾಯಚೂರು ಬ್ರೇಕಿಂಗ್ ನ್ಯೂಸ್**

# ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಶಿಥಿಲ ಕಟ್ಟಡಗಳ ದುರಸ್ತಿಗೆ ಆಗ್ರಹ

### ದೇವದುರ್ಗ ತಾಲೂಕಿನ 105 ಶಾಲೆಗಳಲ್ಲಿ ಕಾಯಂ ಶಿಕ್ಷಕರಿಲ್ಲ; ಶಿಕ್ಷಣ ಸಚಿವರಿಗೆ AIMIM ಮನವಿ

**ರಾಯಚೂರು, ನ. 20:** ರಾಯಚೂರು ಜಿಲ್ಲೆ, ವಿಶೇಷವಾಗಿ ದೇವದುರ್ಗ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ತೀವ್ರವಾಗಿರುವ ಶಿಕ್ಷಕರ ಕೊರತೆ ನೀಗಿಸುವುದರ ಜೊತೆಗೆ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳ ದುರಸ್ತಿ ಹಾಗೂ ನೂತನ ಕೊಠಡಿಗಳ ನಿರ್ಮಾಣಕ್ಕೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ AIMIM ರಾಯಚೂರು ನಗರ ಘಟಕದ ವತಿಯಿಂದ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪಅವರಿಗೆ ರಾಯಚೂರು ನಲ್ಲಿ ಮನವಿ ಸಲ್ಲಿಸಲಾಗಿದೆ.

AIMIM ರಾಯಚೂರು ನಗರಾಧ್ಯಕ್ಷ ಶಬ್ಬೀರ್ ಅಹ್ಮದ್ ಹೌದಡಿ ಅವರು ಸಲ್ಲಿಸಿರುವ ಮನವಿಯಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಗಳ ಶೈಕ್ಷಣಿಕ ಪರಿಸ್ಥಿತಿ, ಶಿಕ್ಷಕರ ಕೊರತೆ ಹಾಗೂ ಮೂಲಭೂತ ಸೌಕರ್ಯಗಳ ಅಭಾವದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.

2026ರ ಮಾಹಿತಿಯ ಪ್ರಕಾರ ರಾಯಚೂರು ಜಿಲ್ಲೆಯಲ್ಲಿ ಒಟ್ಟು 3,687 ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ದೇವದುರ್ಗ ತಾಲೂಕಿನ 105 ಸರ್ಕಾರಿ ಶಾಲೆಗಳಲ್ಲಿ ಕಾಯಂ ಶಿಕ್ಷಕರೇ ಇಲ್ಲದಿರುವುದು ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, 2025ರ ವರದಿಯಂತೆ ಜಿಲ್ಲೆಯ ಏಳು ತಾಲೂಕುಗಳಲ್ಲಿ ಒಟ್ಟು 930 ಪ್ರಾಥಮಿಕ ಶಾಲಾ ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆ. ದೇವದುರ್ಗ ತಾಲೂಕಿನಲ್ಲಿ 191 ಪ್ರಾಥಮಿಕ ಶಾಲಾ ಕೊಠಡಿಗಳು ಹಾಗೂ 18 ಪ್ರೌಢಶಾಲಾ ಕೊಠಡಿಗಳು ಶಿಥಿಲಗೊಂಡಿದ್ದು, ವಿದ್ಯಾರ್ಥಿಗಳ ಸುರಕ್ಷತೆಗೆ ಅಪಾಯ ಉಂಟಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.

ಜಿಲ್ಲೆಯ ಸುಮಾರು 2,009 ತರಗತಿ ಕೊಠಡಿಗಳಿಗೆ ಪ್ರಮುಖ ದುರಸ್ತಿ ಅಗತ್ಯವಿದ್ದು, ದೇವದುರ್ಗ ಬ್ಲಾಕ್‌ನ 345 ಶಾಲೆಗಳ ಪೈಕಿ 50 ಶಾಲೆಗಳು 'C' ಗ್ರೇಡ್ ಹಾಗೂ ಒಂದು ಶಾಲೆ 'D' ಗ್ರೇಡ್ ಹೊಂದಿವೆ. ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸಂಪರ್ಕ, ಆಟದ ಮೈದಾನ ಹಾಗೂ ಕಾಂಪೌಂಡ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯೂ ಇದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

**ಮನವಿಯ ಪ್ರಮುಖ ಬೇಡಿಕೆಗಳು:**

- ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಬೇಕು.
- ಅಗತ್ಯವಿರುವ ಶಾಲೆಗಳಿಗೆ ತಕ್ಷಣ ಶಿಕ್ಷಕರನ್ನು ನಿಯೋಜಿಸಬೇಕು.
- ದೇವದುರ್ಗ ತಾಲೂಕಿನ ಸರ್ಕಾರಿ ಶಾಲೆಗಳ ಕಟ್ಟಡಗಳ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ಸಮಗ್ರ ಸ್ಥಳ ಪರಿಶೀಲನೆ ನಡೆಸಬೇಕು.
- ಅಪಾಯಕಾರಿ ಹಾಗೂ ಶಿಥಿಲಗೊಂಡ ಶಾಲಾ ಕಟ್ಟಡಗಳನ್ನು ತಕ್ಷಣ ದುರಸ್ತಿಗೊಳಿಸಬೇಕು ಅಥವಾ ಹೊಸ ಕೊಠಡಿಗಳನ್ನು ನಿರ್ಮಿಸಬೇಕು.
- ಎಲ್ಲಾ ಶಾಲೆಗಳಿಗೆ ಶೌಚಾಲಯ, ಕುಡಿಯುವ ನೀರು, ವಿದ್ಯುತ್, ಆಟದ ಮೈದಾನ ಹಾಗೂ ಕಾಂಪೌಂಡ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು.
- ಶಿಕ್ಷಕರ ಕೊರತೆ ಹಾಗೂ ಶಾಲಾ ಕಟ್ಟಡಗಳ ದುಸ್ಥಿತಿಯ ಕುರಿತು ತಾಲೂಕುವಾರು ವರದಿ ಸಿದ್ಧಪಡಿಸಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು.

ಸರ್ಕಾರ ಈ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ರಾಯಚೂರು ಜಿಲ್ಲೆಯ ವಿದ್ಯಾರ್ಥಿಗಳಿಗೆ ಸುರಕ್ಷಿತ ಹಾಗೂ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸಬೇಕು ಎಂದು AIMIM ಪಕ್ಷದ ಪರವಾಗಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಶಬ್ಬೀರ್ ಅಹ್ಮದ್ ಹೌದಡಿ ಒತ್ತಾಯಿಸಿದ್ದಾರೆ.

**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ**
📲Get App