🔥 TRENDING आज आगियों में दो ट्रकों का टक्कर સાવરકુંડલા માં કોંગ્રેસ નું સ્નેહ મિલન... બાકોરમાં LCBનો મોટો સપાટો: ક્રેટા કારમ... आर.के. रूंगटा चैरिटेबल ट्रस्ट के अध्यक... छत्रपती संभाजीनगरमध्ये वयातील अंतर आणि... आजसू के मिलन समारोह और कार्यकर्ता सम्म...
29 Nov 2026•
ગુજરાતી मराठी ਪੰਜਾਬੀ বাংলা

13 ವರ್ಷ ಕಳೆದರೂ ಪೂರ್ಣಗೊಳ್ಳದ ಜಾಲಹಳ್ಳಿ ವಾಲ್ಮೀಕಿ ಭವನ!ಅಪೂರ್ಣ ಕಾಮಗಾರಿ ಪೂರ್ಣಗೊಳಿಸಲು ಸಚಿವ ಸತೀಶ್ ಜಾರಕಿಹೊಳಿಗೆ ವಾಲ್ಮೀಕಿ ಮಹಾಸಭಾ ಮನವಿ

✍️ Reporter: Khaja Hussain 🗓 29 Nov 2026, 08:35 PM 👁 15
Share: 💬 WhatsApp 📘 Facebook 𝕏 Post
**ದೇವದುರ್ಗ ಬ್ರೇಕಿಂಗ್ ನ್ಯೂಸ್**

# 13 ವರ್ಷ ಕಳೆದರೂ ಪೂರ್ಣಗೊಳ್ಳದ ಜಾಲಹಳ್ಳಿ ವಾಲ್ಮೀಕಿ ಭವನ!

### ಅಪೂರ್ಣ ಕಾಮಗಾರಿ ಪೂರ್ಣಗೊಳಿಸಲು ಸಚಿವ ಸತೀಶ್ ಜಾರಕಿಹೊಳಿಗೆ ವಾಲ್ಮೀಕಿ ಮಹಾಸಭಾ ಮನವಿ

**ಬಂಡೊಳ್ಳಿ, ನ.28:** ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ 2012–13ನೇ ಸಾಲಿನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ (SCSP/TSP) ಯೋಜನೆಯಡಿ ಮಂಜೂರಾದ ವಾಲ್ಮೀಕಿ ಭವನದ ಕಾಮಗಾರಿ 13 ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಅಪೂರ್ಣವಾಗಿರುವ ಭವನದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಮುದಾಯದ ಬಳಕೆಗೆ ಒದಗಿಸಬೇಕೆಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕು ಘಟಕವು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದೆ.

ನ.28ರಂದು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಂಡೊಳ್ಳಿ ಗ್ರಾಮದಲ್ಲಿ ವಾಲ್ಮೀಕಿ ಗುರುಪೀಠದ ಶಾಖಾ ಮಠ ನಿರ್ಮಾಣದ ಭೂಮಿಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವರಿಗೆ ಮಹಾಸಭಾ ಪದಾಧಿಕಾರಿಗಳು ಮನವಿ ಸಲ್ಲಿಸಿ, ಜಾಲಹಳ್ಳಿ ವಾಲ್ಮೀಕಿ ಭವನದ ದೀರ್ಘಕಾಲದ ಸಮಸ್ಯೆಯನ್ನು ವಿವರಿಸಿದರು.

2012–13ನೇ ಸಾಲಿನಲ್ಲಿ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಮಂಜೂರಾಗಿದ್ದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಭವನದ ಕಾಮಗಾರಿ ಪೂರ್ಣಗೊಳಿಸುವಂತೆ ಸಾರ್ವಜನಿಕರು, ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ಹಲವು ಬಾರಿ ಸರ್ಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.

ಭವನ ನಿರ್ಮಾಣಕ್ಕಾಗಿ ಹೋರಾಟ ನಡೆಸಿದ ಸಂದರ್ಭದಲ್ಲಿ 42 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಸಮುದಾಯದ ಹಿತಕ್ಕಾಗಿ ಹೋರಾಟ ನಡೆಸಿದವರೇ ಕಾನೂನು ಪ್ರಕ್ರಿಯೆ ಎದುರಿಸಬೇಕಾಗಿರುವುದು ವಿಷಾದನೀಯ ಎಂದು ಸಂಘಟನೆಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಜಾಲಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಸಮುದಾಯಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆರ್ಥಿಕವಾಗಿ ಹಿಂದುಳಿದ ವಾಲ್ಮೀಕಿ ಸಮುದಾಯದ ಕುಟುಂಬಗಳಿಗೆ ಮದುವೆ, ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಲು ಸೂಕ್ತ ಸ್ಥಳಾವಕಾಶದ ಕೊರತೆಯಿದೆ. ಭವನ ಪೂರ್ಣಗೊಂಡರೆ ಸಮುದಾಯದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಆಡಳಿತಾತ್ಮಕ ನಿರ್ಲಕ್ಷ್ಯ, ಅನುದಾನದ ಸಮರ್ಪಕ ಬಳಕೆಯ ಕೊರತೆ ಹಾಗೂ ಸರ್ಕಾರದ ಮಾರ್ಗಸೂಚಿಗಳ ಪಾಲನೆಯಲ್ಲಿನ ಲೋಪಗಳಿಂದ ಕಾಮಗಾರಿ ವಿಳಂಬವಾಗಿದೆ ಎಂದು ಮಹಾಸಭಾ ಆರೋಪಿಸಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರ ತಕ್ಷಣ ಗಮನಹರಿಸಿ ಅಪೂರ್ಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಮಾನಶಯ್ಯ ನಾಯಕ, ಪ್ರಧಾನ ಕಾರ್ಯದರ್ಶಿ ಭೀಮಣ್ಣ ಗೋಸಲ್, ತಾಲೂಕು ಯುವ ಘಟಕದ ಉಪಾಧ್ಯಕ್ಷ ರಂಗನಾಥ ಮುರಾಳ (ಜಾಲಹಳ್ಳಿ), ತಿಮ್ಮಣ್ಣ ಬಂಕೋಲದೊಡ್ಡಿ, ರಂಗಪ್ಪ ಜೋಳದಡಗಿ, ದುರುಗಪ್ಪ ಚಿಂಚೋಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ**
📲Get App