🔥 TRENDING উৎসবের আনন্দের মাঝেই শোকের ছায়া! বেলড... एक सर्वेक्षण चल रहा है ग्रामीण की जमीन पर अवैध अतिक्रमण Haryana shifts 32 IFS officers, reshuf... North India Winter Air Pollution Tied... CGBSE Releases 2027 Exam Timetable for...
20 Nov 2026•
ગુજરાતી मराठी ਪੰਜਾਬੀ বাংলা

ರಾತ್ರಿ ಬಸ್‌ಗಾಗಿ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳ ಪ್ರತಿಭಟನೆಸಾರಿಗೆ ಇಲಾಖೆಯ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳಿಗೆ ತೊಂದರೆ ಆರೋಪ; ನ.19ರಂದು ದೇವದುರ್ಗ ಬಸ್ ಡಿಪೋ ಮುತ್ತಿಗೆಹಾಕುವ ಎಚ್ಚರಿಕೆ

✍️ Reporter: Khaja Hussain 🗓 17 Nov 2026, 09:35 PM 👁 30
Share: 💬 WhatsApp 📘 Facebook 𝕏 Post
**ಜಾಲಹಳ್ಳಿ ಬ್ರೇಕಿಂಗ್ ನ್ಯೂಸ್**

# ರಾತ್ರಿ ಬಸ್‌ಗಾಗಿ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳ ಪ್ರತಿಭಟನೆ

### ಸಾರಿಗೆ ಇಲಾಖೆಯ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳಿಗೆ ತೊಂದರೆ ಆರೋಪ; ನ.19ರಂದು ದೇವದುರ್ಗ ಬಸ್ ಡಿಪೋ ಮುತ್ತಿಗೆ ಹಾಕುವ ಎಚ್ಚರಿಕೆ

**ಜಾಲಹಳ್ಳಿ, ನ.17:** ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎಸ್‌ಎಫ್‌ಐ ಹಾಗೂ ಡಿವೈಎಫ್‌ಐ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ಮೇದನಾಪುರ ಹಾಗೂ ಬಾಗೂರು ಗ್ರಾಮಗಳಿಗೆ ತೆರಳುವ ಶಾಲಾ ವಿದ್ಯಾರ್ಥಿಗಳು ಪ್ರತಿದಿನ ಸಂಜೆ 4.30ಕ್ಕೆ ಶಾಲೆ ಮುಗಿಸಿಕೊಂಡು ಬಸ್‌ಗಾಗಿ ಕಾಯಬೇಕಾದ ಪರಿಸ್ಥಿತಿ ಇದೆ. ನಿಗದಿಯಂತೆ ಸಂಜೆ 5 ಗಂಟೆಗೆ ಬರಬೇಕಾದ ಬಸ್ ಒಂದು ವಾರದಿಂದ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಬದಲಾಗಿ ರಾತ್ರಿ 7.30ರಿಂದ 8 ಗಂಟೆಯವರೆಗೆ ತಡವಾಗಿ ಬರುತ್ತಿದೆ. ಇದರಿಂದ ವಿದ್ಯಾರ್ಥಿಗಳು ಮನೆಗೆ ತಲುಪಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸಾರಿಗೆ ಇಲಾಖೆಯ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಶಿಕ್ಷಣ ಹಾಗೂ ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತಿದೆ. ದೇವದುರ್ಗ ಸಾರಿಗೆ ಘಟಕದಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪ್ರತಿದಿನ ಪರದಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಾಕ್ಸ್

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಮುಖಂಡ ಸಂತೋಷ್ ಸ್ಟಾಪ್ಲಿ ಮಾತನಾಡಿ, "ವಿದ್ಯಾರ್ಥಿಗಳು ಸಂಜೆ 5 ಗಂಟೆಗೆ ಮನೆ ಸೇರಬೇಕಾದವರು ಸಾರಿಗೆ ಇಲಾಖೆಯ ನಿರ್ಲಕ್ಷ್ಯದಿಂದ ರಾತ್ರಿ 8 ಗಂಟೆಗೆ ಮನೆ ತಲುಪುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಜನಪ್ರತಿನಿಧಿಗಳು ಸ್ಪಂದಿಸಬೇಕು" ಎಂದು ಒತ್ತಾಯಿಸಿದರು.

ಬಾಕ್ಸ್

ಕಾರ್ಮಿಕ ಸಂಘಟನೆಯ ರಾಜ್ಯ ಮುಖಂಡ ಶಬ್ಬೀರ್ ಜಾಲಹಳ್ಳಿ ಮಾತನಾಡಿ, ದೇವದುರ್ಗ ಸಾರಿಗೆ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಲ್ಲೂಕಿನ ವಿದ್ಯಾರ್ಥಿಗಳು ಹಾಗೂ ಗ್ರಾಮೀಣ ಜನರು ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳ ಬಸ್ ಸಮಸ್ಯೆ ಬಗೆಹರಿಸುವಲ್ಲಿ ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು. ಇಲ್ಲದಿದ್ದರೆ ನವೆಂಬರ್ 19ರಂದು ದೇವದುರ್ಗ ಬಸ್ ಡಿಪೋಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ಬಾಕ್ಸ್

ಎಸ್ ಎಫ್‌ಐ ಜಿಲ್ಲಾ ಮುಖಂಡ ಮಹಾಲಿಂಗ ದೊಡ್ಡಮನಿ ಮಾತನಾಡಿ, ದೇವದುರ್ಗ ತಾಲ್ಲೂಕಿನ ಹಲವು ಗ್ರಾಮಗಳಿಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಲ್ಲಿ ಸಾರಿಗೆ ಇಲಾಖೆ ವಿಫಲವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಕ್ಷಣವೇ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಬೇಕು. ಇಲ್ಲದಿದ್ದರೆ ನ.19ರಂದು ಬಸ್ ಡಿಪೋ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಡಿವೈಎಫ್‌ಐ ಜಿಲ್ಲಾಧ್ಯಕ್ಷ ರಾಜು ನಾಯಕ್, ರಿಯಾಜ್ ಅರ್ತಿ, ಭೂತಪ್ಪ ದೇವರಮನಿ, ಅಮೀರ್ ಪಟೇಲ್, ಕೊಂಡಯ್ಯ, ಮಲ್ಲು, ಹೈದರಸಾಬ್ ಮುಲ್ಲಾ, ಮನ್ಸೂರ್, ಮೆಹಬೂಬ್ ಬಲಿಗಾರ್, ನಬಿ ಟೈಲರ್, ರಂಗನಾಥ್, ರಿಯಾಜ್ ಸೇರಿದಂತೆ ಸಂಘಟನೆಗಳ ಮುಖಂಡರು, ಶಾಲಾ ವಿದ್ಯಾರ್ಥಿಗಳು, ಪಾಲಕರು ಹಾಗೂ ಬಾಗೂರು ಗ್ರಾಮದ ನಿವಾಸಿಗಳು ಉಪಸ್ಥಿತರಿದ್ದರು.

**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ**
📲Get App