🔥 ट्रेंडिंग রাজ্য সভাপতি কী বললেন? रुद्रपुर में मानवता की मिसाल: नाले में... फागी में कांग्रेस प्रत्याशी कैलाश चंद... वाराणसी में वैवाहिक समारोह व बारात के... SIR ವಿರೋಧಿ ಮೂರನೇ ಹಂತದ ಹೋರಾಟಕ್ಕೆ ಸಿದ್ಧತ... चैनपुर पुलिस ने पॉक्सो, हत्या और धोखाध...
20 नव. 2026•
ગુજરાતી मराठी ਪੰਜਾਬੀ বাংলা

ಕೊಪ್ಪಳ ಶ್ರೀ ಗವಿಮಠಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ - ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ದರ್ಶನ, ಆಶೀರ್ವಾದ ಸ್ವೀಕಾರ - ಜನವರಿ 24 ಜಾತ್ರಾ ಮಹೋತ್ಸವಕ್ಕೆ ಆಹ್ವಾನ

✍️ रिपोर्टर: Ningappa 🗓 20 नव. 2026, 10:57 PM 👁 23
शेयर करें: 💬 WhatsApp 📘 Facebook 𝕏 Post

ಕೊಪ್ಪಳ ಶ್ರೀ ಗವಿಮಠಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ - ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ದರ್ಶನ, ಆಶೀರ್ವಾದ ಸ್ವೀಕಾರ - ಗ್ರಾಮೀಣ ಶಾಲೆಗಳ ಅಭಿವೃದ್ಧಿ, ಸರ್ಕಾರಿ ಶಾಲೆಗಳ ಸಬಲೀಕರಣ, ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕುರಿತು ಸಮಾಲೋಚನೆ - ಜನವರಿ 24 ಜಾತ್ರಾ ಮಹೋತ್ಸವಕ್ಕೆ ಆಹ್ವಾನ

ಕೊಪ್ಪಳ ಶ್ರೀ ಗವಿಮಠಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ - ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ದರ್ಶನ, ಆಶೀರ್ವಾದ ಸ್ವೀಕಾರ

ಕೊಪ್ಪಳ: ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಿಮಿತ್ತ ಕೊಪ್ಪಳಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ, ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಹಾಗೂ ಅನ್ನದಾನ ಕ್ಷೇತ್ರವಾದ ಶ್ರೀ ಗವಿಮಠಕ್ಕೆ ಭೇಟಿ ನೀಡಿ, ಪೂಜ್ಯ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಅವರ ದರ್ಶನ ಪಡೆದು ಆಶೀರ್ವಾದ ಹಾಗೂ ಗೌರವವನ್ನು ಸ್ವೀಕರಿಸಲಾಯಿತು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಈ ಪವಿತ್ರ ಭೇಟಿಯ ವೇಳೆ ಪೂಜ್ಯ ಶ್ರೀಗಳು ಗ್ರಾಮೀಣ ಭಾಗದ ಶಾಲೆಗಳ ಸಮಗ್ರ ಅಭಿವೃದ್ಧಿ, ಸರ್ಕಾರಿ ಶಾಲೆಗಳ ಸಬಲೀಕರಣ ಹಾಗೂ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಸಮಾಲೋಚನೆ ನಡೆಸಿ, ಹಲವು ಮೌಲ್ಯಯುತ ಸಲಹೆಗಳನ್ನು ನೀಡಿದರು. ಶಿಕ್ಷಣ ಕ್ಷೇತ್ರದ ಬಗೆಗಿನ ಶ್ರೀಗಳ ಕಾಳಜಿ ಮತ್ತು ದೂರದೃಷ್ಟಿ ನಮಗೆಲ್ಲರಿಗೂ ಸದಾ ಪ್ರೇರಣಾದಾಯಕ.

ಇದೇ ಸಂದರ್ಭದಲ್ಲಿ, ಮುಂಬರುವ ಜನವರಿ 24ರಂದು ನಡೆಯಲಿರುವ ಐತಿಹಾಸಿಕ ಶ್ರೀ ಗವಿಮಠದ ಜಾತ್ರಾ ಮಹೋತ್ಸವಕ್ಕೆ ಆಗಮಿಸಬೇಕೆಂದು ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ ಅವರು ಅತ್ಯಂತ ಆತ್ಮೀಯವಾಗಿ ಆಹ್ವಾನ ನೀಡಿದರು. ಶ್ರೀಗಳ ಆಶೀರ್ವಾದ ಮತ್ತು ಮಾರ್ಗದರ್ಶನ ನಾಡಿನ ಶೈಕ್ಷಣಿಕ ಪ್ರಗತಿಗೆ ಇನ್ನಷ್ಟು ಶಕ್ತಿ ತುಂಬಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.
📲Get App