ಜಾಲಹಳ್ಳಿಯಲ್ಲಿ ನ.25ರಂದು ಅದ್ಧೂರಿಯಾಗಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ಅಂಬೇಡ್ಕರ್ ವೃತ್ತದಿಂದ ಭವ್ಯ ಮೆರವಣಿಗೆ; ವಿವಿಧ ಕ್ಷೇತ್ರಗಳ ಗಣ್ಯರಿಗೆ ಸನ್ಮಾನ
ನೀಡ್ 24 ನ್ಯೂಸ್
ಜಾಲಹಳ್ಳಿ, ನ.23: ಕನ್ನಡ ನಾಡು, ನುಡಿ, ಭಾಷೆ ಹಾಗೂ ಸಂಸ್ಕೃತಿಯ ವೈಭವವನ್ನು ಸಾರುವ ಉದ್ದೇಶದಿಂದ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣದಲ್ಲಿ ನವೆಂಬರ್ 25ರಂದು 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ದೇವದುರ್ಗ ತಾಲೂಕು ಅಧ್ಯಕ್ಷ ನಂದಪ್ಪ ಪಿ. ಮಡ್ಡಿ ತಿಳಿಸಿದರು.
ಈ ಕುರಿತು ಸೋಮವಾರ ಜಾಲಹಳ್ಳಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕನ್ನಡ ಭಾಷೆಯ ಶ್ರೀಮಂತ ಪರಂಪರೆ, ನಾಡಿನ ಸಂಸ್ಕೃತಿ ಹಾಗೂ ಕನ್ನಡಿಗರ ಏಕತೆಯನ್ನು ಸಾರುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕನ್ನಡ ನಾಡು, ನುಡಿ ಹಾಗೂ ನೆಲದ ಗೌರವವನ್ನು ಎತ್ತಿಹಿಡಿಯುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ಆದ್ದರಿಂದ ಕನ್ನಡಾಭಿಮಾನಿಗಳು, ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕನ್ನಡ ಹಬ್ಬವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಅಂದು ಬೆಳಿಗ್ಗೆ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಕನ್ನಡ ಬಾವುಟಗಳೊಂದಿಗೆ ಭವ್ಯ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯು ಭಗೀರಥ ವೃತ್ತ, ಶ್ರೀ ಲಕ್ಷ್ಮೀರಂಗನಾಥ ದೇವಸ್ಥಾನ ಹಾಗೂ ವಾಲ್ಮೀಕಿ ವೃತ್ತದ ಮೂಲಕ ಸಾಗಿ ಸಮುದಾಯ ಆರೋಗ್ಯ ಕೇಂದ್ರದ ಸಮೀಪದಲ್ಲಿರುವ ಧ್ವಜ ಕಟ್ಟೆಯನ್ನು ತಲುಪಲಿದೆ. ಬಳಿಕ ಧ್ವಜಾರೋಹಣ ನೆರವೇರಿಸಿ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.
ಕನ್ನಡಿಗರಿಗೆ ಆತ್ಮೀಯ ಆಹ್ವಾನ
ಕರ್ನಾಟಕ ರಕ್ಷಣಾ ವೇದಿಕೆಯ ಜಾಲಹಳ್ಳಿ ಹೋಬಳಿ ಅಧ್ಯಕ್ಷ ತಮ್ಮಣ್ಣ ಹೆರುಂಡಿ ಮಾತನಾಡಿ, ಕನ್ನಡ ರಾಜ್ಯೋತ್ಸವ ಕೇವಲ ಒಂದು ದಿನದ ಆಚರಣೆಯಾಗದೆ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಪರಂಪರೆಯ ಮೇಲಿನ ಅಭಿಮಾನವನ್ನು ಮತ್ತಷ್ಟು ಬಲಪಡಿಸುವ ಹಬ್ಬವಾಗಿದೆ. ಸಮಸ್ತ ಕನ್ನಡಿಗರು, ನಾಡಿನ ನಾಗರಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಗುರು-ಹಿರಿಯರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕನ್ನಡದ ಹಬ್ಬವನ್ನು ಸಂಭ್ರಮದಿಂದ ಆಚರಿಸಬೇಕು ಎಂದು ಆತ್ಮೀಯವಾಗಿ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಕರವೇ ದೇವದುರ್ಗ ತಾಲೂಕು ಅಧ್ಯಕ್ಷ ನಂದಪ್ಪ ಪಿ. ಮಡ್ಡಿ, ಜಾಲಹಳ್ಳಿ ಹೋಬಳಿ ಅಧ್ಯಕ್ಷ ತಮ್ಮಣ್ಣ ಹೆರುಂಡಿ, ಪ್ರಧಾನ ಕಾರ್ಯದರ್ಶಿ ಬಸವರಾಜ ಹೆರುಂಡಿ, ಭೀಮರಾಯ ಮಕಾಶಿ, ವಿಕಲಚೇತನರ ಹೋಬಳಿ ಅಧ್ಯಕ್ಷ ರಂಗಪ್ಪ ಬಂಡಿ, ಯುವ ಮುಖಂಡ ಭೀಮಣ್ಣ ನಾಯಕ, ದೇವದುರ್ಗ ತಾಲೂಕು ಸಂಚಾಲಕ ವೆಂಕಟೇಶ, ಹೋಬಳಿ ಉಪಾಧ್ಯಕ್ಷ ಅಮರೇಶ, ಮಲ್ಲು ಹಡಪದಿ, ಗುರುನಾಥ ರೆಡ್ಡಿ ಸೇರಿದಂತೆ ಕರವೇಯ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.