🔥 ट्रेंडिंग उनाकोति जिले ने जजम 2.0 जल आपूर्ति पहल... त्रिपुरा सीएम ने भाजपा की बढ़ती लोकप्र... भारत का पहला संगठित गधे का फार्म खुला,... हिमाचल प्रदेश ने निवेश मंजूरी को आसान... हिमाचल प्रदेश में सड़क माल परिवहन पर प... उत्ताराखण्ड में दो सड़क दुर्घटनाओं में...
20 नव. 2026•
ગુજરાતી मराठी ਪੰਜਾਬੀ বাংলা

ಜಶ್ನ್-ಎ-ಉರ್ದು ಕಾರ್ಯಕ್ರಮ ಯಶಸ್ವಿ ಆಯೋಜನೆ: ಸಚಿವ ಯು.ಟಿ. ಖಾದರ್ ಕಾರ್ಯಕ್ಕೆ ಶ್ಲಾಘನೆಜಶ್ನ್-ಎ-ಉರ್ದು ಕಾರ್ಯಕ್ರಮ ಯಶಸ್ವಿ ಆಯೋಜನೆ: ಸಚಿವ ಯು.ಟಿ. ಖಾದರ್ ಕಾರ್ಯಕ್ಕೆ ಶ್ಲಾಘನೆ

✍️ रिपोर्टर: Khaja Hussain 🗓 10 नव. 2026, 03:42 PM 👁 65
यहाँ देखें: 📘 Facebook
शेयर करें: 💬 WhatsApp 📘 Facebook 𝕏 Post
**ಬೆಂಗಳೂರು ಬ್ರೇಕಿಂಗ್ ನ್ಯೂಸ್**

# ಜಶ್ನ್-ಎ-ಉರ್ದು ಕಾರ್ಯಕ್ರಮ ಯಶಸ್ವಿ ಆಯೋಜನೆ: ಸಚಿವ ಯು.ಟಿ. ಖಾದರ್ ಕಾರ್ಯಕ್ಕೆ ಶ್ಲಾಘನೆ

### ಕರ್ನಾಟಕ ಉರ್ದು ಅಕಾಡೆಮಿಯ ಕಾರ್ಯಕ್ರಮಕ್ಕೆ ಮೆಚ್ಚುಗೆ; ದೇವದುರ್ಗದ ಅಲ್ಪಸಂಖ್ಯಾತ ಮುಖಂಡ ಶಮಶುದ್ದಿನ್ ಹೌದಡಿ ಸಂತಸ

**ದೇವದುರ್ಗ:** ಕರ್ನಾಟಕ ಉರ್ದು ಅಕಾಡೆಮಿ ವತಿಯಿಂದ ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಆಯೋಜಿಸಿದ್ದ ವಾರ್ಷಿಕ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಹಾಗೂ ಜಶ್ನ್-ಎ-ಉರ್ದು (Jashn-e-Urdu) ಕಾರ್ಯಕ್ರಮ ಯಶಸ್ವಿಯಾಗಿ ಜರುಗಿರುವುದಕ್ಕೆ ದೇವದುರ್ಗದ ಅಲ್ಪಸಂಖ್ಯಾತ ಮುಖಂಡ ಶಮಶುದ್ದಿನ್ ಹೌದಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವಲ್ಲಿ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವರಾದ ಯು.ಟಿ. ಖಾದರ್ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉರ್ದು ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ಉರ್ದು ಅಕಾಡೆಮಿ ಕೈಗೊಂಡಿರುವ ಕಾರ್ಯಗಳು ಪ್ರಶಂಸನೀಯವಾಗಿವೆ. ಇಂತಹ ಕಾರ್ಯಕ್ರಮಗಳು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗದೆ, ಸಮಾಜದ ಎಲ್ಲ ವರ್ಗಗಳಿಗೂ ಭಾಷಾ ಸೌಹಾರ್ದತೆ ಹಾಗೂ ಸಾಂಸ್ಕೃತಿಕ ಅರಿವು ಮೂಡಿಸಲು ಸಹಕಾರಿಯಾಗುತ್ತವೆ ಎಂದು ಶಮಶುದ್ದಿನ್ ಹೌದಡಿ ಅಭಿಪ್ರಾಯಪಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 20 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿರುವುದು ಉರ್ದು ಭಾಷೆ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡಿದಂತಾಗಿದೆ. ಇಂತಹ ಕಾರ್ಯಕ್ರಮಗಳು ಮುಂದಿನ ಪೀಳಿಗೆಗೆ ಉರ್ದು ಭಾಷೆಯ ಶ್ರೀಮಂತ ಪರಂಪರೆಯನ್ನು ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸಲಿವೆ ಎಂದು ಅವರು ತಿಳಿಸಿದ್ದಾರೆ.

**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ**
📲Get App