🔥 TRENDING Jharkhand Government Publishes List of... Jharkhand ambulance services suspended... Virender Sehwag Supports MS Dhoni’s Re... Pakistani Man Disguises as Woman in Au... Manorama News airs Speed News at 9:30 ... Chandrapur Police Bust 54 Organized Cr...
20 Nov 2026•
ગુજરાતી मराठी ਪੰਜਾਬੀ বাংলা

ಮಾದಕ ವಸ್ತುಗಳ ಹಾವಳಿ ತಡೆಗಟ್ಟಲು ಕಠಿಣ ಕ್ರಮಕ್ಕೆ ಆಗ್ರಹ

✍️ Reporter: YALLAPPA RAGATE (PATIL) 🗓 13 Nov 2026, 07:28 PM 👁 64
Share: 💬 WhatsApp 📘 Facebook 𝕏 Post
ಮಾದಕ ವಸ್ತುಗಳ ಹಾವಳಿ ತಡೆಗಟ್ಟಲು ಕಠಿಣ ಕ್ರಮಕ್ಕೆ ಆಗ್ರಹ
ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳು, ಗೃಹ ಸಚಿವರು ಸೇರಿದಂತೆ ಜನಪ್ರತಿನಿಧಿಗಳಿಗೆ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿಯಿಂದ ಮನವಿ
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಯುವಜನತೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿರುವುದನ್ನು ತಡೆಗಟ್ಟಲು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.), ಬೆಂಗಳೂರು ಸಂಘಟನೆಯ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರದ ಪ್ರಮುಖರಿಗೆ ಮನವಿ ಸಲ್ಲಿಸಲಾಯಿತು.
ಸಂಘಟನೆಯ ವಿಜಯಪುರ ಜಿಲ್ಲಾ ಅಧ್ಯಕ್ಷರಾದ ನಾಗರಾಜ ಕಬಾಡೆ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ, ಗೃಹ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ವಿಜಯಪುರ ನಗರ ಶಾಸಕರಿಗೆ ಮನವಿ ಸಲ್ಲಿಸಲಾಯಿತು.
ವಿಜಯಪುರ ಜಿಲ್ಲೆಯಲ್ಲಿ ಯುವಜನತೆ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇದರಿಂದ ಯುವಜನರ ಆರೋಗ್ಯ, ಶಿಕ್ಷಣ, ಕುಟುಂಬ ಜೀವನ ಹಾಗೂ ಭವಿಷ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತಿದೆ. ಆದ್ದರಿಂದ ಮಾದಕ ವಸ್ತುಗಳ ಮಾರಾಟ, ಸಾಗಣೆ, ಸಂಗ್ರಹಣೆ ಮತ್ತು ಬಳಕೆಯನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಒತ್ತಾಯಿಸಿತು.
ಶಾಲಾ-ಕಾಲೇಜುಗಳ ಸುತ್ತಮುತ್ತ ವಿಶೇಷ ಪೊಲೀಸ್ ನಿಗಾ ವಹಿಸಬೇಕು. ಮಾದಕ ವಸ್ತುಗಳ ಅಕ್ರಮ ಜಾಲವನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಯುವಜನರಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವ್ಯಸನಕ್ಕೆ ಒಳಗಾದವರಿಗೆ ಸೂಕ್ತ ಚಿಕಿತ್ಸೆ, ಸಮಾಲೋಚನೆ ಹಾಗೂ ಪುನರ್ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ, ರಾಜ್ಯ ಉಪಾಧ್ಯಕ್ಷ ವಿಜಯಕುಮಾರ ನಿಮಾದಾರ, ಗೌರವ ಅಧ್ಯಕ್ಷ ಕಿರಣಕುಮಾರ ಅಲಿಯಾಬಾದ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ನೀಲಾಂಬಿಕಾ ಕಟ್ಟಿಮನಿ, ಉಪಾಧ್ಯಕ್ಷೆ ಸುಶೀಲಾ ಮೀಣಜಗಿ, ರಾಜ್ಯ ಅಂಗವಿಕಲ ಘಟಕದ ಅಧ್ಯಕ್ಷ ಅರುಣಕುಮಾರ ಗುಜ್ಜರ, ವಿಜಯಪುರ ಜಿಲ್ಲಾ ಅಧ್ಯಕ್ಷ ನಾಗರಾಜ ಕಬಾಡೆ, ಜಿಲ್ಲಾ ಉಪಾಧ್ಯಕ್ಷ ಚಂದ್ರಶೇಖರ ಕಟ್ಟಿಮನಿ, ಮಾಧ್ಯಮ ಘಟಕದ ಜಿಲ್ಲಾ ಅಧ್ಯಕ್ಷ ಸಿದ್ರಾಮಗೌಡ ಪಾಟೀಲ, ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷೆ ಮಹಾದೇವಿ ಕಾಳೆ, ಜ್ಯೋತಿ ಮಿಣಜಗಿ ಉಪಸ್ಥಿತರಿದ್ದರು.
ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಅಧ್ಯಕ್ಷ ಅಬ್ದುಲ್ ಹಕ್ ಇನಾಮದಾರ, ಉಪಾಧ್ಯಕ್ಷ ಸಾಹೇಬಲಾಲ ಹಿಪ್ಪರಗಿ, ನಗರ ಘಟಕದ ಅಧ್ಯಕ್ಷ ಹುಸೇನ್ ಹಿಪ್ಪರಗಿ, ಉಪಾಧ್ಯಕ್ಷರಾದ ಬಾಬರ್ ದಖನಿ, ನಿಯಾಜ್ ಮಕಾನದಾರ, ಮೈನುದ್ದೀನ್ ಜಮಾದಾರ, ರಜಾಕಸಾಬ್ ಮಕಾನದಾರ ಸೇರಿದಂತೆ ಸಂತೋಷ ಕಟ್ಟಿಮನಿ, ಜಾಫರ್ ಇರಾಣಿ, ನಾಗು ಎಸ್. ಪೌನೆ ಹಾಗೂ ಸಂಘಟನೆಯ ಇತರ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು
ಯುವಜನರ ಭವಿಷ್ಯವನ್ನು ರಕ್ಷಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವಿಜಯಪುರ ಜಿಲ್ಲೆಯನ್ನು ಮಾದಕ ವಸ್ತುಗಳ ಹಾವಳಿಯಿಂದ ಮುಕ್ತಗೊಳಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ತಕ್ಷಣ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ ಆಗ್ರಹಿಸಿದೆ.
ಜೈ ಭೀಮ್ | ಜೈ ಭಾರತ | ಜೈ ಸಂವಿಧಾನ
📲Get App