🔥 TRENDING West Bengal Board Announces HS 3rd Sem... পিয়ালি রাশ ও গ্রামীন মেলা প্রশাসনিক স... Severe Cyclonic Storm Akvan Nears Indi... Tejashwi Yadav Slams Bihar Government... Bihar Law Department Opens 2026 Recrui... Bihar Launches New Police Data Centre,...
20 Nov 2026•
ગુજરાતી मराठी ਪੰਜਾਬੀ বাংলা

ಅಂಗನವಾಡಿ ಆಹಾರ ಸೇವಿಸಿ ಮಕ್ಕಳು ಅಸ್ವಸ್ಥಗೊಂಡ ಪ್ರಕರಣ ವರದಿ ಇನ್ನೂ ಕೈ ಸೇರಿಲ್ಲ: ತಹಶೀಲ್ದಾ‌ರ್

✍️ Reporter: Mallikarjun Gabbur 🗓 15 Nov 2026, 07:40 AM 👁 57
Share: 💬 WhatsApp 📘 Facebook 𝕏 Post

ತಾಲೂಕಿನ ಮಸಬಿನಾಳ ಗ್ರಾಮದ ಗೌರಿಶಂಕರ ದೇವಸ್ಥಾನದ ಆವರಣದಲ್ಲಿ ತಾಲೂಕಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಪ್ರಜಾಸೇವಾ ಆಂದೋಲನದಲ್ಲಿ ಅರ್ಜಿದಾರ ಹನುಮಂತ ನಡುವಿನಮನಿ ಅವರು ಅಂಗನವಾಡಿ ಮಕ್ಕಳ ಅಸ್ವಸ್ಥ ಪ್ರಕರಣದ ಕುರಿತು ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ತಹಶೀಲ್ದಾರ್, ಪ್ರಕರಣದ ವರದಿ ಇನ್ನೂ ಕೈ ಸೇರಿಲ್ಲ. ವರದಿ ಬಂದ ನಂತರ ಮುಂದಿನ ಮಾಹಿತಿ ನೀಡಲಾಗುವುದು ಎಂದರು.

ತಹಶೀಲ್ದಾರ್ ಯಮನಪ್ಪ ಸೋಮನಕಟ್ಟಿ ಮಾತನಾಡಿ, ಸರ್ಕಾರವು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಜಾರಿಗೊಳಿಸಿದೆ. ಈ ಕಾರ್ಯಕ್ರಮಕ್ಕೆ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಬಸವನಬಾಗೇವಾಡಿ, ಉಕ್ಕಲಿ ಹಾಗೂ ಬಾಕ್ಕೋಡ ಗ್ರಾಮಗಳಲ್ಲಿ ಈಗಾಗಲೇ ಯಶಸ್ವಿಯಾಗಿ ಕಾರ್ಯಕ್ರಮ ನಡೆಸಲಾಗಿದೆ ಎಂದರು.
ಮಸಬಿನಾಳ ಗ್ರಾಮದಲ್ಲಿ ತಾಲೂಕಾಡಳಿತದಿಂದ ಹಮ್ಮಿಕೊಂಡಿದ್ದ ಪ್ರಜಾಸೇವೆ ಕಾರ್ಯಕ್ರಮವನ್ನು ತಹಶೀಲ್ದಾರ ಯಮನಪ್ಪ ಸೋಮನಕಟ್ಟಿ ಉದ್ಘಾಟಿಸಿದರು.
ಕಾನೂನು ಬದ್ಧವಾಗಿರುವ ಅರ್ಜಿಗಳಿಗೆ ನ್ಯಾಯ ಒದಗಿಸಲು ತಾಲೂಕಾಡಳಿತ ಕ್ರಮ ಕೈಗೊಳ್ಳಲಿದೆ. ಇದರಿಂದ ಜನರು ವಿವಿಧ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ. ಅರ್ಜಿಗಳು ಕಾನೂನು ನಿಯಮಾವಳಿಗಳ ವ್ಯಾಪ್ತಿಗೆ ಒಳಪಟ್ಟಿದ್ದರೆ, ಸಂಬಂಧಪಟ್ಟ ಅಧಿಕಾರಿಗಳು ಅರ್ಜಿದಾರರಿಗೆ ಸೂಕ್ತ ಮಾಹಿತಿ ನೀಡಿ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ರೇಷ್ಮೆ ಇಲಾಖೆ ತಾಲೂಕಾಧಿಕಾರಿ ಹಾಗೂ ಗ್ರಾಪಂ ಆಡಳಿತಾಧಿಕಾರಿ ಸುರೇಶ ಗೊಲಗೊಂಡ ಮಾತನಾಡಿ, ಆಡಳಿತಾಧಿಕಾರಿಯಾಗಿ ತಾವು ಅಧಿಕಾರ ವಹಿಸಿಕೊಂಡ ಬಳಿಕ ಗ್ರಾಮದಲ್ಲಿ ಎರಡು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಸಲಾಗುತ್ತಿದೆ. ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಲು ಕೂಡ ಆದ್ಯತೆ ನೀಡಿ ಅಗತ್ಯ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು.
ಗ್ಯಾರಂಟಿ ತಾಪಂ ಇಒ ವೆಂಕಟೇಶ ವಂದಾಲ, ಪಂಚ ಯೋಜನೆಗಳ ತಾಲೂಕಾಧ್ಯಕ್ಷ ಮಹಿಬೂಬ ನಾಯ್ಯೋಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರೇಡ್-2 ತಹಶೀಲ್ದಾರ್ ಎಸ್. ಎಚ್. ಅರಕೇರಿ, ಕಂದಾಯ ನಿರೀಕ್ಷಕ ಸಂತೋಷ ದೇಸಾಯಿ, ಗ್ರಾಮ ಆಡಳಿತಾಧಿಕಾರಿ ಸಂತೋಷ ಕುಂಟೋಜಿ, ಪಿಡಿಒ ಜಯಲಕ್ಷ್ಮೀ ದಶವಂತ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ವಿರೇಶ ಗುಡಲಮನಿ ಕಾರ್ಯಕ್ರಮ ನಿರ್ವಹಿಸಿದರು.
📲Get App