🔥 TRENDING રાજકોટમાં ખાનગી થિયેટરે દારૂ સાથે બર્થ... 3 सूत्री मांगों को लेकर पटवारी हड़ताल... गोरखपुर में बुलडोजर टक्कर से मरे 14 वर... चंद्रपूरमध्ये पोलीस अधीक्षक आयुष नोपान... Jammu & Kashmir Forecasts Lower Peak P... J&K High Court Transfers 84 Judicial O...
19 Nov 2026•
ગુજરાતી मराठी ਪੰਜਾਬੀ বাংলা
Local

ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಚಿರತೆ ಸೆರೆಹಿಡಿದು ರೈತರ ನೆಮ್ಮದಿ

✍️ Reporter: YALLAPPA RAGATE (PATIL) 🗓 19 Nov 2026, 10:35 AM 👁 43
Share: 💬 WhatsApp 📘 Facebook 𝕏 Post

ಚಡಚಣ ತಾಲ್ಲೂಕಿನ ತದ್ದೇವಾಡಿ ಗ್ರಾಮ ಸುತ್ತಮುತ್ತಲಿನ ಹೊಲಗಳಲ್ಲಿ ಎರಡು ವರ್ಷಗಳಿಂದ ದಾಳಿ ಮಾಡುತ್ತಿದ್ದ ಚಿರತೆಯನ್ನು ರೈತರು ಹಾಗೂ ಅರಣ್ಯ ಅಧಿಕಾರಿಗಳು ಸೇರಿ ಸೆರೆಹಿಡಿದಿದ್ದಾರೆ.

ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ತದ್ದೇವಾಡಿ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಸುಮಾರು ಎರಡು ವರ್ಷಗಳಿಂದ ರೈತರ ಹೊಲಗಳಲ್ಲಿ ಸಾವರ್ಜನಿಕರ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಯನ್ನು ರೈತರು ಹಾಗೂ ಅರಣ್ಯ ಅಧಿಕಾರಿಗಳು ಸೇರಿ ಸೆರೆಹಿಡಿದಿದ್ದಾರೆ.

ಚಿರತೆಯ ಆತಂಕದಿಂದ ಭಯಭೀತರಾಗಿದ್ದ ಗ್ರಾಮಸ್ಥರು ಹಾಗೂ ರೈತರು ಇದೀಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಹಿಡಿಯಲು ವಿಶೇಷ ಯೋಜನೆ ರೂಪಿಸಿ, ಗ್ರಾಮಸ್ಥರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿದರು. ಸೆರೆಹಿಡಿದ ನಂತರ ಚಿರತೆಯನ್ನು ಸೂಕ್ತವಾದ ಸಂರಕ್ಷಣಾ ಕೇಂದ್ರಕ್ಕೆ ವರ್ಗಾಯಿಸಲಾಗಿದೆ.

ಈ ಘಟನೆಯಿಂದ ರೈತರ ಭಯ ನಿವಾರಣೆಯಾಗಿ ಕೃಷಿ ಕಾರ್ಯಗಳು ಸಾಮಾನ್ಯವಾಗಿ ಮುಂದುವರಿಯುವ ನಿರೀಕ್ಷೆ ಇದೆ.
📲Get App