🔥 TRENDING ಜೆಡಿಎಸ್ ಮುಖಂಡ ಅಂಬರೀಶ್ ಬಿ. ಗಣೇಕಲ್ ನೂತನ... ग्राम कारोली पंचायत का थमा विवाद, मुख्... Bihar to Fast‑Track Industrial Clearan... Bihar signs MoUs worth ₹1.72 trillion... Police attacked by inmates at Jehanaba... ભરૂચમાં દબાણો દૂર કરવા વહીવટી તંત્રની...
20 Nov 2026•
ગુજરાતી मराठी ਪੰਜਾਬੀ বাংলা

ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿಗಳನ್ನು ಭೇಟಿಯಾದ ದೇವದುರ್ಗ ಶಾಸಕಿ ಕರಿಯಮ್ಮ ಜಿ ನಾಯಕ - ಕ್ಷೇತ್ರದ ಸಮಗ್ರ ಅಭಿವೃದ್ಧಿ, ಅನುದಾನ ಬಿಡುಗಡೆಗೆ ಮನವಿ - ಸಕಾರಾತ್ಮಕ ಸ್ಪಂದನೆಗೆ ಧನ್ಯವಾದ

✍️ Reporter: Ningappa 🗓 20 Nov 2026, 10:25 PM 👁 17
Share: 💬 WhatsApp 📘 Facebook 𝕏 Post

ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿಗಳನ್ನು ಭೇಟಿಯಾದ ದೇವದುರ್ಗ ಶಾಸಕಿ ಕರಿಯಮ್ಮ ಜಿ ನಾಯಕ - ಕ್ಷೇತ್ರದ ಸಮಗ್ರ ಅಭಿವೃದ್ಧಿ, ಮೂಲಭೂತ ಸೌಕರ್ಯ ಸುಧಾರಣೆ, ಜನರ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆ - ಪ್ರಮುಖ ಯೋಜನೆಗಳಿಗೆ ಅನುದಾನ ಬಿಡುಗಡೆ, ಬಾಕಿ ಕಾಮಗಾರಿಗಳಿಗೆ ವೇಗ ನೀಡಲು ಮನವಿ - ಸಕಾರಾತ್ಮಕ ಸ್ಪಂದನೆ, ಅಗತ್ಯ ಕ್ರಮದ ಭರವಸೆ

ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿಗಳನ್ನು ಭೇಟಿಯಾದ ದೇವದುರ್ಗ ಶಾಸಕಿ ಕರಿಯಮ್ಮ ಜಿ ನಾಯಕ - ಕ್ಷೇತ್ರದ ಸಮಗ್ರ ಅಭಿವೃದ್ಧಿ, ಅನುದಾನ ಬಿಡುಗಡೆಗೆ ಮನವಿ

ಬೆಂಗಳೂರು:
ಇಂದು ಬೆಂಗಳೂರಿನಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳನ್ನು ದೇವದುರ್ಗ ವಿಧಾನ ಸಭಾ ಕ್ಷೇತ್ರದ ಶಾಸಕಿ ಕರಿಯಮ್ಮ ಜಿ ನಾಯಕ ಅವರು ಭೇಟಿಯಾಗಿ ತಮ್ಮ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ, ವಿವಿಧ ಅಭಿವೃದ್ಧಿ ಕಾಮಗಾರಿಗಳು, ಮೂಲಭೂತ ಸೌಕರ್ಯಗಳು ಸುಧಾರಣೆ ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು ಮತ್ತು ಕುಂದುಕೊರತೆಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.

ಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡಿ, ಬಾಕಿ ಇರುವ ಕಾಮಗಾರಿಗಳಿಗೆ ವೇಗ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಮಾನ್ಯ ಉಪಮುಖ್ಯಮಂತ್ರಿಗಳಿಗೆ ದೇವದುರ್ಗ ಕ್ಷೇತ್ರದ ಸಮಸ್ತ ಜನತೆಯ ಪರವಾಗಿ ಶಾಸಕಿ ಕರಿಯಮ್ಮ ಜಿ ನಾಯಕ ಹೃತ್ಪೂರ್ವಕ ಧನ್ಯವಾದಗಳು ಸಲ್ಲಿಸಿದ್ದಾರೆ.

ನಮ್ಮ ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದೇ ನನ್ನ ಮೊದಲ ಆದ್ಯತೆ. ಈ ನಿಟ್ಟಿನಲ್ಲಿ ನನ್ನ ಪ್ರಯತ್ನ ನಿರಂತರವಾಗಿರುತ್ತದೆ ಎಂದರು.
📲Get App