🔥 TRENDING PM Modi to Inaugurate Neetish Setu in... Knife Attack on Police Officer in Jaba... Madhya Pradesh BJP Revamps Structure,... UPSC Sends Three Names for Madhya Prad... Congress rebounds in Rajasthan Panchay... ಗ್ರಾಮ ಸಂಪರ್ಕ ಕಾರ್ಯಕ್ರಮ: ಗಡಿಭಾಗದ ಜನರಿಗೆ...
20 Nov 2026•
ગુજરાતી मराठी ਪੰਜਾਬੀ বাংলা

ಮುದಗಲ್‌ನಲ್ಲಿ ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಕಲೋತ್ಸವ - ಯುವ ನಾಯಕ ಅಭಿಷೇಕ್ ಎಸ್. ಪಾಟೀಲ್ ಬಯ್ಯಾಪುರ ಉದ್ಘಾಟನೆ - ಸುಪ್ತ ಪ್ರತಿಭೆಗೆ ವೇದಿಕೆ ಕಲ್ಪಿಸುವ ಕಾರ್ಯಕ್ರಮ

✍️ Reporter: Ningappa 🗓 20 Nov 2026, 09:55 PM 👁 12
Share: 💬 WhatsApp 📘 Facebook 𝕏 Post

ಮುದಗಲ್‌ನಲ್ಲಿ ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಕಲೋತ್ಸವ - ಯುವ ನಾಯಕ ಅಭಿಷೇಕ್ ಎಸ್. ಪಾಟೀಲ್ ಬಯ್ಯಾಪುರ ಉದ್ಘಾಟನೆ - ಸಸಿಗೆ ನೀರೆರೆದು ಸಾಂಕೇತಿಕ ಉದ್ಘಾಟನೆ - ಮಕ್ಕಳಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ, ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ವೇದಿಕೆ - ಕಲೆ, ಸಾಹಿತ್ಯ, ಸಂಸ್ಕೃತಿ, ಕ್ರೀಡೆಗಳಲ್ಲಿ ತೊಡಗಿಕೊಳ್ಳಲು ಕರೆ

ಮುದಗಲ್‌ನಲ್ಲಿ ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಕಲೋತ್ಸವ - ಯುವ ನಾಯಕ ಅಭಿಷೇಕ್ ಎಸ್. ಪಾಟೀಲ್ ಬಯ್ಯಾಪುರ ಉದ್ಘಾಟನೆ

ಮುದಗಲ್:
ಇಂದು ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮದಲ್ಲಿ ಯುವ ನಾಯಕರು ಹಾಗೂ ಯುವಜನತೆಯ ಕಣ್ಮಣಿಯಾದ ಶ್ರೀ ಅಭಿಷೇಕ್ ಎಸ್. ಪಾಟೀಲ್ ಬಯ್ಯಾಪುರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಅವುಗಳಿಗೆ ಸೂಕ್ತ ವೇದಿಕೆ ಕಲ್ಪಿಸುವಲ್ಲಿ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ. ಇಂತಹ ವೇದಿಕೆಗಳು ಮಕ್ಕಳಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವುದರ ಜೊತೆಗೆ ಅವರ ಭವಿಷ್ಯದ ಸಾಧನೆಗೆ ಭದ್ರ ಬುನಾದಿಯಾಗುತ್ತವೆ. ಶಿಕ್ಷಣದ ಜೊತೆಗೆ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಕ್ರೀಡೆಗಳಲ್ಲಿಯೂ ಮಕ್ಕಳು ಆಸಕ್ತಿಯಿಂದ ತೊಡಗಿಸಿಕೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಸುಜಾತ ಮೇಡಂ, ಶಾಲೆಯ ಮುಖ್ಯ ಗುರುಗಳು, ಎಸ್‌ಟಿಎಂಸಿ ಅಧ್ಯಕ್ಷರು, ವಿವಿಧ ಶಾಲೆಗಳ ಶಿಕ್ಷಕ ವೃಂದದವರು ಹಾಗೂ ಪ್ರತಿಭಾ ಕಾರಂಜಿಯಲ್ಲಿ ಉತ್ಸಾಹದಿಂದ ಭಾಗವಹಿಸಿದ ಮುದ್ದು ಮಕ್ಕಳು ಉಪಸ್ಥಿತರಿದ್ದರು.
📲Get App