राजनीति
ಜಿಲ್ಲಾ ಸವಿತಾ ಸಮಾಜದ ನೂತನ ಅಧ್ಯಕ್ಷರಾಗಿ ನಾಗರಾಜ್ ಆರ್ಯ ಆಯ್ಕೆ
ಬೀದರ್: ಬೀದರ್ ಜಿಲ್ಲಾ ಸವಿತಾ (ನಾವ್ಹಿ) ಸಮಾಜದ ನೂತನ ಜಿಲ್ಲಾಧ್ಯಕ್ಷರಾಗಿ ನಾಗರಾಜ್ ಆರ್ಯ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಜಿಲ್ಲಾ ಸವಿತಾ ಸಮಾಜದ ಪದಾಧಿಕಾರಿಗಳು ಹಾಗೂ ಹಿರಿಯ ಮುಖಂಡರ ಸಮ್ಮುಖದಲ್ಲಿ ನಡೆದ ಸ
ಜಿಲ್ಲಾ ಸವಿತಾ ಸಮಾಜದ ನೂತನ ಅಧ್ಯಕ್ಷರಾಗಿ ನಾಗರಾಜ್ ಆರ್ಯ ಆಯ್ಕೆ
ಬೀದರ್: ಬೀದರ್ ಜಿಲ್ಲಾ ಸವಿತಾ (ನಾವ್ಹಿ) ಸಮಾಜದ ನೂತನ ಜಿಲ್ಲಾಧ್ಯಕ್ಷರಾಗಿ ನಾಗರಾಜ್ ಆರ್ಯ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಜಿಲ್ಲಾ ಸವಿತಾ ಸಮಾಜದ ಪದಾಧಿಕಾರಿಗಳು ಹಾಗೂ ಹಿರಿಯ ಮುಖಂಡರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸಮಾಜದ ಸಂಘಟನೆ, ಅಭಿವೃದ್ಧಿ ಹಾಗೂ ಸಮಾಜ ಬಾಂಧವರ ಶ್ರೇಯೋಭಿವೃದ್ಧಿಗಾಗಿ ನಿರಂತರವಾಗಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ನಾಗರಾಜ್ ಆರ್ಯ ಅವರಿಗೆ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಲಾಗಿದೆ.
ಆಯ್ಕೆಯ ಬಳಿಕ ಮಾತನಾಡಿದ ನಾಗರಾಜ್ ಆರ್ಯ ಅವರು, ತಮ್ಮ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿ ನೀಡಿದ ಸಮಾಜದ ಹಿರಿಯರು, ಮುಖಂಡರು ಹಾಗೂ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಸಮಾಜದ ಸಂಘಟನೆಯನ್ನು ಬಲಪಡಿಸಿ, ಸಮಾಜದ ಅಭಿವೃದ್ಧಿ ಹಾಗೂ ಬಾಂಧವರ ಏಳಿಗೆಗಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.
ನೂತನ ಜಿಲ್ಲಾಧ್ಯಕ್ಷ ನಾಗರಾಜ್ ಆರ್ಯ ಅವರಿಗೆ ಸಮಾಜದ ಪದಾಧಿಕಾರಿಗಳು, ಯುವ ಮುಖಂಡರು ಹಾಗೂ ಸಮಾಜ ಬಾಂಧವರು ಅಭಿನಂದನೆ ಸಲ್ಲಿಸಿದ್ದಾರೆ ಎಂದು ಹಂಗಾಮಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.