🔥 TRENDING PM Modi to Inaugurate Neetish Setu in... Knife Attack on Police Officer in Jaba... Madhya Pradesh BJP Revamps Structure,... UPSC Sends Three Names for Madhya Prad... Congress rebounds in Rajasthan Panchay... ಗ್ರಾಮ ಸಂಪರ್ಕ ಕಾರ್ಯಕ್ರಮ: ಗಡಿಭಾಗದ ಜನರಿಗೆ...
20 Nov 2026•
ગુજરાતી मराठी ਪੰਜਾਬੀ বাংলা
Local

ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಿದ್ದರಾಜು ಸ್ವಾಮೀಜಿ ಆಯ್ಕೆ: ಹರ್ಷ, ಅಭಿನಂದನೆ

✍️ Reporter: Basavaraj pujari 🗓 20 Nov 2026, 09:40 PM 👁 23
Share: 💬 WhatsApp 📘 Facebook 𝕏 Post

ಬೀದರ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಪಾಲನಹಳ್ಳಿ ಮಠದ ಪೀಠಾಧಿಪತಿಗಳಾದ ಡಾ. ಶ್ರೀ ಶ್ರೀ ಸಿದ್ದರಾಜು ಸ್ವಾಮೀಜಿ ಅವರನ್ನು ನ.21ರಂದು ನಡೆಯಲಿರುವ ಜಿಲ್ಲೆಯ 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವ

ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಿದ್ದರಾಜು ಸ್ವಾಮೀಜಿ ಆಯ್ಕೆ: ಹರ್ಷ, ಅಭಿನಂದನೆ


ಬೀದರ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಪಾಲನಹಳ್ಳಿ ಮಠದ ಪೀಠಾಧಿಪತಿಗಳಾದ ಡಾ. ಶ್ರೀ ಶ್ರೀ ಸಿದ್ದರಾಜು ಸ್ವಾಮೀಜಿ ಅವರನ್ನು ನ.21ರಂದು ನಡೆಯಲಿರುವ ಜಿಲ್ಲೆಯ 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಿರುವುದಕ್ಕೆ ಬೀದರ್‌ನ ಚಂದ್ರ ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಶೈಕ್ಷಣಿಕ ಚಾರಿಟೇಬಲ್ ಟ್ರಸ್ಟ್ ಮತ್ತು ಮಾದಾರ ಚನ್ನಯ್ಯ ಕೊ-ಆಪರೇಟಿವ್ ಬ್ಯಾಂಕ್ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಸಿದ್ದರಾಜು ಸ್ವಾಮೀಜಿಗಳ ಆಯ್ಕೆಯು ಕನ್ನಡ ನಾಡು, ನುಡಿ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಪರಂಪರೆಗೆ ಸಂದ ಗೌರವವಾಗಿದೆ. ಸ್ವಾಮೀಜಿಯವರು ತಮ್ಮ ಆಧ್ಯಾತ್ಮಿಕ ಚಿಂತನೆ, ಸಮಾಜಮುಖಿ ಸೇವೆ, ಕನ್ನಡ ಭಾಷೆ ಮತ್ತು ಸಾಹಿತ್ಯದ ಮೇಲಿನ ಅಪಾರ ಪ್ರೀತಿ ಹಾಗೂ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಿಗೆ ನೀಡಿರುವ ಅಮೂಲ್ಯ ಕೊಡುಗೆಗಳಿಂದ ಸಮಾಜದಲ್ಲಿ ವಿಶಿಷ್ಟ ಗೌರವ ಗಳಿಸಿದ್ದಾರೆ ಎಂದು ಸಂಸ್ಥೆಗಳ ಪದಾಧಿಕಾರಿಗಳು ತಿಳಿಸಿದ್ದಾರೆ.

ಸ್ವಾಮೀಜಿಯವರು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿರುವುದು ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ. ಈ ಮಹತ್ವದ ಗೌರವಕ್ಕೆ ಪಾತ್ರರಾದ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದರ ಜೊತೆಗೆ, ನೆಲಮಂಗಲ ತಾಲ್ಲೂಕಿನ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ಹಾಗೂ ಸರ್ವ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಮಾದಾರ ಚನ್ನಯ್ಯ ಕೊ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸುಮಂತ ಕಟ್ಟಿಮನಿ ಹಾಗೂ ಚಂದ್ರ ಸಾಂಸ್ಕೃತಿಕ, ಸಾಹಿತ್ಯಿಕ ಮತ್ತು ಶೈಕ್ಷಣಿಕ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರವೀಣಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
📲Get App