National
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಮಿತ ಸೋಲಪೂರ ಅವರಿಗೆ ಹಿರೇಮಠ ಸಂಸ್ಥಾನ ಭಾಲ್ಕಿ ವತಿಯಿಂದ ಸನ್ಮಾನ
ಭಾಲ್ಕಿ: ಕನ್ನಡ ರಾಜ್ಯೋತ್ಸವ, ಚಿನ್ಮಯ ಜ್ಞಾನಿ ಚನ್ನಬಸವಣ್ಣನವರ ಜಯಂತಿ ಹಾಗೂ 327ನೇ ಮಾಸಿಕ ಶರಣ ಸಂಗಮ ಕಾರ್ಯಕ್ರಮದ ಅಂಗವಾಗಿ ಶಿಕ್ಷಣ ಪ್ರೇಮಿ, ಶಿಕ್ಷಕ ಹಾಗೂ ಸಮಾಜ ಸೇವಕ ಅಮಿತ ಸೋಲಪೂರ ಅವರಿಗೆ ಹಿರೇಮಠ ಸಂಸ್ಥಾನ ಭಾಲ್
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಮಿತ ಸೋಲಪೂರ ಅವರಿಗೆ ಹಿರೇಮಠ ಸಂಸ್ಥಾನ ಭಾಲ್ಕಿ ವತಿಯಿಂದ ಸನ್ಮಾನ
ಭಾಲ್ಕಿ: ಕನ್ನಡ ರಾಜ್ಯೋತ್ಸವ, ಚಿನ್ಮಯ ಜ್ಞಾನಿ ಚನ್ನಬಸವಣ್ಣನವರ ಜಯಂತಿ ಹಾಗೂ 327ನೇ ಮಾಸಿಕ ಶರಣ ಸಂಗಮ ಕಾರ್ಯಕ್ರಮದ ಅಂಗವಾಗಿ ಶಿಕ್ಷಣ ಪ್ರೇಮಿ, ಶಿಕ್ಷಕ ಹಾಗೂ ಸಮಾಜ ಸೇವಕ ಅಮಿತ ಸೋಲಪೂರ ಅವರಿಗೆ ಹಿರೇಮಠ ಸಂಸ್ಥಾನ ಭಾಲ್ಕಿ ವತಿಯಿಂದ ವಿಶೇಷ ಗೌರವ ಸನ್ಮಾನ ನೀಡಲಾಯಿತು.
ಪೂಜ್ಯ ಡಾ. ಬಸವಲಿಂಗ ಪಟ್ಟದ್ದೇವರ ದಿವ್ಯ ಸಾನ್ನಿಧ್ಯದಲ್ಲಿ, ಪೂಜ್ಯ ಗುರುಬಸವ ಪಟ್ಟದ್ದೇವರ ದಿವ್ಯ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪಂಚಾಯಿತಿ ಬೀದರ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾಧವ ವಿಠಲರಾವ್ ಉದ್ಘಾಟನಾ ಗೀತೆ ಕಾರ್ಯಕ್ರಮ ನೆರವೇರಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಗಭೂಷಣ ಮಾಮಡಿ ಅಧ್ಯಕ್ಷತೆ ವಹಿಸಿದ್ದರು.
ಪೂಜ್ಯ ಗುರುಬಸವ ಪಟ್ಟದ್ದೇವರು ಮಾತನಾಡಿ, ಕನ್ನಡ ಸೇವೆ ಮಾಡುವ ಮನಸ್ಸುಗಳಿಗೆ ಮಠ ಸದಾ ಬೆಂಬಲ ನೀಡುತ್ತ ಬಂದಿದೆ. ಕನ್ನಡ ಭಾಷೆಯ ಉಳಿವಿಗಾಗಿ ಶ್ರೀ ಚನ್ನಬಸವ ಪಟ್ಟದ್ದೇವರು ಉರ್ದು ಬೋರ್ಡ್ ಹಾಕಿ, ಒಳಗಡೆ ಕನ್ನಡ ಕಲಿಸಿದ ಹೆಮ್ಮೆ ನಮ್ಮ ಮಠಕ್ಕಿದೆ ಎಂದರು.
ಕನ್ನಡ ಮಾಧ್ಯಮದ ಬಡ ವಿದ್ಯಾರ್ಥಿಗಳಿಗೆ ಉಚಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುತ್ತಾ, ಕನ್ನಡ ಭಾಷೆಯ ಉಳಿವಿಗಾಗಿ ಶ್ರಮಿಸುತ್ತಿರುವ ಅಮಿತ ಸೋಲಪೂರ ಅವರ ಸೇವೆ ಶ್ಲಾಘನೀಯ. ಗಣಿತ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಅವರು, ಸ್ಪರ್ಧಾಗುರು ಐಎಎಸ್ ಮತ್ತು ಕೆಎಎಸ್ ಸ್ಟಡಿ ಸೆಂಟರ್ ಸ್ಥಾಪಿಸಿ ಜಿಲ್ಲೆಯ ಬಡ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾರೆ. ಜಿಲ್ಲೆಯಲ್ಲಿ ಇಂತಹ ಸಾಹಸಕ್ಕೆ ಮುಂದಾಗಿರುವುದು ಹೆಮ್ಮೆಯ ಸಂಗತಿ ಎಂದು ಪ್ರಶಂಸಿಸಿದರು.
ಶಿಕ್ಷಕ ವೃತ್ತಿಯ ಮೂಲಕ ಸಮಾಜ ಸೇವೆ ಮಾಡುತ್ತಿರುವ ಅಮಿತ ತಂದೆ ನಿರಂಜಪ್ಪ ಸೋಲಪೂರ ಅವರಿಗೆ ಚಿಕ್ಕ ವಯಸ್ಸಿನಲ್ಲೇ ಜಿಲ್ಲಾ ಆಡಳಿತದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ ಮಠದ ವತಿಯಿಂದ ವಿಶೇಷ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಕ್ಕಳು, ಮಠದ ಭಕ್ತರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.