🔥 TRENDING Chhattisgarh Tribes' Unique Culture Dr... ಬೆಲೆ ಏರಿಕೆ, ಕಬ್ಬಿಗೆ ಸೂಕ್ತ ಬೆಲೆ ನಿಗದಿಗೆ... वाराणसी: कोतवाली थाना ने दुष्कर्म के म... Delhi Air Quality Plunges to 'Severe'... Mining Dump Collapse in Bastar: Chhatt... Delhi Air Quality Improves to 220, Sti...
27 Nov 2026•
ગુજરાતી मराठी ਪੰਜਾਬੀ বাংলা
Education

ಜನವಾಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

✍️ Reporter: Basavaraj pujari 🗓 27 Nov 2026, 09:45 AM 👁 15
Share: 💬 WhatsApp 📘 Facebook 𝕏 Post

ಬೀದರ್: ಜನವಾಡ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ತಾಲ್ಲೂಕಿನ ಜನವಾಡ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆಯಿತು. ಪ್ರತಿಭಾ ಕಾರಂಜಿ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವ

ಜನವಾಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

ಬೀದರ್: ಜನವಾಡ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ತಾಲ್ಲೂಕಿನ ಜನವಾಡ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆಯಿತು.
ಪ್ರತಿಭಾ ಕಾರಂಜಿ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಿದರು.
ಕಥೆ ಹೇಳುವುದು, ಚಿತ್ರ ರಚಿಸುವುದು, ಕಂಠ ಪಾಠ, ಅಭಿಯನ ಗೀತೆ, ಭರತನಾಟ್ಯ, ಮಿಮಿಕ್ರಿ, ಗಜಲ್ ಮತ್ತಿತರ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.
ಶಾಲೆಯ ಮುಖ್ಯಶಿಕ್ಷಕಿ ಈರಮ್ಮ ಪ್ರತಿಭಾ ಕಾರಂಜಿಗೆ ಚಾಲನೆ ನೀಡಿದರು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೀದರ್ ತಾಲ್ಲೂಕು ಅಧ್ಯಕ್ಷ ರಾಮಶೆಟ್ಟಿ ಕೆಂಚಾ, ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಸ್ವಾಮಿ, ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಗೋಪಾಲರಾವ್ ಪಡವಲಕರ್, ವಲಯ ಸಂಪನ್ಮೂಲ ವ್ಯಕ್ತಿ ಸಿದ್ರಾಮ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕ ಹೈದರ್ ಅಲಿ, ಶ್ರೀಕಾಂತ, ಭಾಗ್ಯಜ್ಯೋತಿ ಹಾಗೂ ಇತರ ಶಿಕ್ಷಕರು ಇದ್ದರು.
📲Get App