🔥 ट्रेंडिंग अमित शाह ने कहा, छत्तीसगढ़ भारत के प्र... सीजी NEET 2026 स्पेशल स्ट्रे राउंड काउ... AAP ने BJP की पंजाब के किसानों को दिल्... मोहाली में एशियन चैंपियंस ट्रॉफी शुरू,... डायल-112 टीम ने फांसी के फंदे पर लटके... एचबीओ ने 'क्रेजी रिच एशियंस' टीवी सीरी...
04 नव. 2026•
ગુજરાતી मराठी ਪੰਜਾਬੀ বাংলা

ಸರ್ಕಾರಿ ಕನ್ಯಾ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಮೂರು ತಿಂಗಳ ಉಚಿತ ಟ್ಯೂಷನ್ ತರಗತಿ ಆರಂಭ

✍️ रिपोर्टर: Khaja Hussain 🗓 04 नव. 2026, 09:24 AM 👁 19
शेयर करें: 💬 WhatsApp 📘 Facebook 𝕏 Post
ಜಾಲಹಳ್ಳಿ | ಬ್ರೇಕಿಂಗ್ ನ್ಯೂಸ್

### ಸರ್ಕಾರಿ ಕನ್ಯಾ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಮೂರು ತಿಂಗಳ ಉಚಿತ ಟ್ಯೂಷನ್ ತರಗತಿ ಆರಂಭ

### ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ವಿಶೇಷ ಶೈಕ್ಷಣಿಕ ನೆರವು

ಜಾಲಹಳ್ಳಿ, ನ. 3: ಜಾಲಹಳ್ಳಿ ವಲಯದ ಜಾಲಹಳ್ಳಿ ಕಾರ್ಯಕ್ಷೇತ್ರದ ಸರ್ಕಾರಿ ಕನ್ಯಾ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯರಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಮೂರು ತಿಂಗಳ ಉಚಿತ ಟ್ಯೂಷನ್ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯ ಗೋವಿಂದ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಶರಣಪ್ಪ ಅವರು ಭಾಗವಹಿಸಿದ್ದರು. ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಶಂಕರಗೌಡ, ಶಾಲೆಯ ಸಹ ಶಿಕ್ಷಕರು, ವಲಯದ ಮೇಲ್ವಿಚಾರಕರು, ಜ್ಞಾನವಿಕಾಸ ಸಮನ್ವಯಾಧಿಕಾರಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮೂರು ತಿಂಗಳ ಕಾಲ ಉಚಿತ ಟ್ಯೂಷನ್ ತರಗತಿಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿನಿಯರು ಈ ಸೌಲಭ್ಯದ ಸದುಪಯೋಗ ಪಡೆದುಕೊಂಡು ಉತ್ತಮ ಫಲಿತಾಂಶ ಸಾಧಿಸಬೇಕು ಎಂದು ತಿಳಿಸಲಾಯಿತು.

ಅಲ್ಲದೆ, ವೃತ್ತಿಪರ ಶಿಕ್ಷಣವನ್ನು ಮುಂದುವರಿಸುವ ವಿದ್ಯಾರ್ಥಿಗಳಿಗೆ ಲಭ್ಯವಿರುವ ಸುಜ್ಞಾನ ನಿಧಿ ಶಿಷ್ಯವೇತನದ ಅವಕಾಶಗಳ ಬಗ್ಗೆಯೂ ಮಾಹಿತಿ ನೀಡಲಾಯಿತು.

ಮುಖ್ಯ ಅತಿಥಿ ಶರಣಪ್ಪ ಅವರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಿಕ್ಷಣ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಜನಪರ ಕಾರ್ಯಕ್ರಮಗಳ ಕುರಿತು ವಿವರಿಸಿದರು.

ಶಾಲೆಯನ್ನು ಉಚಿತ ಟ್ಯೂಷನ್ ತರಗತಿಗಳಿಗಾಗಿ ಆಯ್ಕೆ ಮಾಡಿಕೊಂಡಿರುವುದಕ್ಕೆ ಮುಖ್ಯೋಪಾಧ್ಯಾಯ ಗೋವಿಂದ ಅವರು ಯೋಜನೆಯ ಪದಾಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸಿದರು.

ಕಾರ್ಯಕ್ರಮವನ್ನು ಸೇವಾ ಪ್ರತಿನಿಧಿ ಯಲ್ಲಪ್ಪ ನಿರೂಪಿಸಿದರು.

ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
📲Get App