🔥 TRENDING छत्तीसगढ़ में डीजे बजाने से पहले लेनी... વૈશ્વિક કટોકટી વચ્ચે ભારતનો દબદબો: મૂડ... કચ્છ: માનકુવા પોલીસ સ્ટેશન વિસ્તારમાંથ... Andhra Pradesh SIPB approves IT projec... El Niño heat slashes Kuppam’s flower o... 13.4 lakh pension applications receive...
19 Sep 2026
ગુજરાતી मराठी ਪੰਜਾਬੀ বাংলা

20–30 ವರ್ಷಗಳ ಬೇಡಿಕೆಗೆ ಕೊನೆಗೂ ಮುಕ್ತಿ: ಹನುಮನಹಳ್ಳಿ–ನಾಗರಕಟ್ಟೆ ರಸ್ತೆ ಅಭಿವೃದ್ಧಿಗೆ ಚಾಲನೆ

✍️ Reporter: ಮಂಜುನಾಥ ಹೂಡೇಂ 🗓 19 Sep 2026, 12:14 PM 👁 5
Watch on: ▶️ YouTube
Share: 💬 WhatsApp 📘 Facebook 𝕏 Post

ಜನರ ನಿರೀಕ್ಷೆಗೆ ಸ್ಪಂದಿಸಿದ ಶಾಸಕ ಡಾ. ಎನ್.ಟಿ. ಶ್ರೀನಿವಾಸ್; ಸಂಪರ್ಕ ವ್ಯವಸ್ಥೆ ಸುಧಾರಣೆಯ ನಿರೀಕ್ಷೆ

ಕೂಡ್ಲಿಗಿ, ಸೆ.19:
ವರ್ಷಗಳ ಕಾಲ ರಸ್ತೆ ಅಭಿವೃದ್ಧಿಗಾಗಿ ಕಾಯುತ್ತಿದ್ದ ಹನುಮನಹಳ್ಳಿ ಗ್ರಾಮದ ಜನರ ಬಹುದಿನದ ಬೇಡಿಕೆಗೆ ಇದೀಗ ಅಭಿವೃದ್ಧಿಯ ಸ್ಪರ್ಶ ದೊರೆತಿದೆ. ಸುಮಾರು 20–30 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹನುಮನಹಳ್ಳಿ–ನಾಗರಕಟ್ಟೆ ಸಂಪರ್ಕ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ವರ್ಷಗಳ ಸಮಸ್ಯೆಗೆ ಪರಿಹಾರದ ಹೆಜ್ಜೆ
ಹನುಮನಹಳ್ಳಿ ಹಾಗೂ ನಾಗರಕಟ್ಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರ ದಿನನಿತ್ಯದ ಸಂಚಾರಕ್ಕೆ ಪ್ರಮುಖವಾಗಿರುವ ಈ ರಸ್ತೆ ಹಲವು ವರ್ಷಗಳಿಂದ ಸಮರ್ಪಕ ಅಭಿವೃದ್ಧಿಯಿಲ್ಲದೆ ಸಮಸ್ಯೆ ಎದುರಿಸುತ್ತಿತ್ತು. ರಸ್ತೆ ಹದಗೆಟ್ಟಿದ್ದರಿಂದ ಗ್ರಾಮಸ್ಥರು, ರೈತರು, ವಿದ್ಯಾರ್ಥಿಗಳು ಹಾಗೂ ವಾಹನ ಸವಾರರು ಸಂಚಾರದಲ್ಲಿ ತೊಂದರೆ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರು ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದರು.
ಜನರ ಬೇಡಿಕೆಗೆ ಸ್ಪಂದಿಸಿದ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಮನ್ವಯ ಸಾಧಿಸಿ, ಕಾಮಗಾರಿ ಮಂಜೂರಾತಿಗೆ ಅಗತ್ಯ ಕ್ರಮ ಕೈಗೊಂಡಿದ್ದರು. ಇದೀಗ ಕಾಮಗಾರಿಗೆ ಚಾಲನೆ ದೊರೆತಿರುವುದು ಗ್ರಾಮಸ್ಥರ ಹಲವು ವರ್ಷಗಳ ನಿರೀಕ್ಷೆಗೆ ತೆರೆ ಎಳೆದಂತಾಗಿದೆ.
📲Get App