🔥 TRENDING చర్ల బస్టాండ్ సెంటర్లో ట్రాఫిక్ ఇబ్బంద... Rohit Sharma’s Run‑Out Turns the Tide... ભાવનગર માં એર શો નુ આયોજન Telangana Today Publishes Editorial "B... लोरमी न्यायालय ने शासकीय जमीन की हेराफ... BJD Delegation Visits Landslide-Affect...
05 Nov 2026•
ગુજરાતી मराठी ਪੰਜਾਬੀ বাংলা

ರಾಯಚೂರಿನಲ್ಲಿ ನಶಾ ಮುಕ್ತ ರಾಯಚೂರು ಹಾಗೂ ತಂಬಾಕು ಮುಕ್ತ ಯುವ ಅಭಿಯಾನ 4.0 ಅಂಗವಾಗಿ ಜಾಗೃತಿ ನಡಿಗೆ - ಜಿಲ್ಲಾಧಿಕಾರಿ ಪೂವಿತಾ ಎಸ್. ಚಾಲನೆ

✍️ Reporter: Ningappa 🗓 05 Nov 2026, 04:15 PM 👁 8
Share: 💬 WhatsApp 📘 Facebook 𝕏 Post

ರಾಯಚೂರು ಜಿಲ್ಲೆಯನ್ನು ಮಾದಕ ವಸ್ತುಗಳಿಂದ ಮುಕ್ತಗೊಳಿಸಲು ನಶಾ ಮುಕ್ತ ರಾಯಚೂರು ಹಾಗೂ ತಂಬಾಕು ಮುಕ್ತ ಯುವ ಅಭಿಯಾನ 4.0 ಅಂಗವಾಗಿ ಜಾಗೃತಿ ನಡಿಗೆ - ತೀನ್ ಕಂದಿಲ್ ಸರ್ಕಲ್ ನಿಂದ ಕೇಂದ್ರ ಬಸ್ ನಿಲ್ದಾಣದವರೆಗೆ ನಡಿಗೆ - ಜಿಲ್ಲಾಧಿಕಾರಿ ಪೂವಿತಾ ಎಸ್. ಚಾಲನೆ - ವ್ಯಸನಮುಕ್ತಿಗಾಗಿ ರಿಮ್ಸ್ ನಲ್ಲಿ ಕೌನ್ಸಿಲಿಂಗ್, ಸಹಾಯವಾಣಿ 14416

ರಾಯಚೂರಿನಲ್ಲಿ ನಶಾ ಮುಕ್ತ ರಾಯಚೂರು ಹಾಗೂ ತಂಬಾಕು ಮುಕ್ತ ಯುವ ಅಭಿಯಾನ 4.0 ಅಂಗವಾಗಿ ಜಾಗೃತಿ ನಡಿಗೆ

ರಾಯಚೂರು, ನ. 5: ರಾಯಚೂರು ಜಿಲ್ಲೆಯನ್ನು ಮಾದಕ ವಸ್ತುಗಳ ದುಷ್ಪರಿಣಾಮಗಳಿಂದ ಮುಕ್ತಗೊಳಿಸುವ ಹಾಗೂ ಯುವಜನತೆಯಲ್ಲಿ ತಂಬಾಕು ಸೇವನೆಯ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳು, ವೈದ್ಯಕೀಯ ಹಾಗೂ ಶಿಕ್ಷಣ ಸಂಸ್ಥೆಗಳು ಮತ್ತು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಶಾ ಮುಕ್ತ ರಾಯಚೂರು ಹಾಗೂ ತಂಬಾಕು ಮುಕ್ತ ಯುವ ಅಭಿಯಾನ 4.0 ಅಂಗವಾಗಿ ಜಾಗೃತಿ ನಡಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್. ಅವರು ತೀನ್ ಕಂದಿಲ್ ಸರ್ಕಲ್ ನಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಮಾದಕ ವಸ್ತುಗಳು, ಮದ್ಯಪಾನ ಹಾಗೂ ತಂಬಾಕು ಉತ್ಪನ್ನಗಳ ಸೇವನೆಯು ವ್ಯಕ್ತಿಯ ಆರೋಗ್ಯ ಮತ್ತು ವ್ಯಕ್ತಿತ್ವದ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೆ, ಕುಟುಂಬ ಮತ್ತು ಸಮಾಜದ ಮೇಲೆಯೂ ದುಷ್ಪರಿಣಾಮ ಉಂಟುಮಾಡುತ್ತದೆ. ವಿಶೇಷವಾಗಿ ಯುವಜನತೆ ಇಂತಹ ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಮಾದಕ ವಸ್ತುಗಳ ಸೇವನೆಯಿಂದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಯಕೃತ್ತಿನ ಸಮಸ್ಯೆಗಳು ಹಾಗೂ ಮಾನಸಿಕ ಆರೋಗ್ಯದ ತೊಂದರೆಗಳು ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ಶಾಲಾ-ಕಾಲೇಜು ಹಂತದಿಂದಲೇ ಜಾಗೃತಿ ಮೂಡಿಸುವುದು ಹಾಗೂ ವ್ಯಸನಮುಕ್ತ ಜೀವನಕ್ಕೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ವ್ಯಸನಮುಕ್ತಿಗಾಗಿ ಕೌನ್ಸಿಲಿಂಗ್ ನೆರವು ಬಯಸುವವರು ರಿಮ್ಸ್ ಆಸ್ಪತ್ರೆಯ ಬಿ-ಬ್ಲಾಕ್ ನ ಕೊಠಡಿ ಸಂಖ್ಯೆ 27 ರಲ್ಲಿ ಸಂಪರ್ಕಿಸಬಹುದು. ಅಲ್ಲದೆ, ಉಚಿತ ಮಾನಸಿಕ ಆರೋಗ್ಯ ಸಹಾಯವಾಣಿ 14416 ಮೂಲಕವೂ ನೆರವು ಪಡೆಯಬಹುದಾಗಿದೆ.

ತೀನ್ ಕಂದಿಲ್ ಸರ್ಕಲ್ ನಿಂದ ಕೇಂದ್ರ ಬಸ್ ನಿಲ್ದಾಣದವರೆಗೆ ನಡೆದ ಜಾಗೃತಿ ನಡಿಗೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ವೈದ್ಯಕೀಯ ಮತ್ತು ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು, ಎನ್ ಎಸ್ ಎಸ್ ಸ್ವಯಂಸೇವಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸದಸ್ಯರು ಭಾಗವಹಿಸಿದ್ದರು. ನಡಿಗೆಯ ಮಾರ್ಗಮಧ್ಯೆ ಎರಡು ಸ್ಥಳಗಳಲ್ಲಿ ಬೀದಿ ನಾಟಕಗಳ ಮೂಲಕ ಮಾದಕ ವಸ್ತುಗಳು ಮತ್ತು ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಸರ್, ಫೋಟೋಗೆ Caption ಹೀಗೆ ಹಾಕಿ ಸರ್:
ರಾಯಚೂರಿನಲ್ಲಿ ನಶಾ ಮುಕ್ತ ರಾಯಚೂರು ಹಾಗೂ ತಂಬಾಕು ಮುಕ್ತ ಯುವ ಅಭಿಯಾನ 4.0 ಅಂಗವಾಗಿ ಜಾಗೃತಿ ನಡಿಗೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಪೂವಿತಾ ಎಸ್.
📲Get App