🔥 TRENDING Video: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರ... ਗਲੀ ਵਿੱਚ ਖੇਡਦਾ ਹੋਇਆ ਢਾਈ ਸਾਲਾ ਬੱਚਾ ਸ਼ੱਕ... દાણીલીમડા વિસ્તારમાં લૂંટમાં આરોપીઓ ઝડ... BJP Criticizes Himachal CM Sukhu Over... Jauljibi Mela 2026 Opens, CM Dhami Unv... Uttarakhand Rises as Growing Hub for M...
14 Nov 2026•
ગુજરાતી मराठी ਪੰਜਾਬੀ বাংলা

ಜಾಲಹಳ್ಳಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನಕ್ಕೆ ಶಾಸಕಿ ಕರೆಮ್ಮ ಜಿ. ನಾಯಕ ಚಾಲನೆ - 63 ಅರ್ಜಿ ಸ್ವೀಕಾರ

✍️ Reporter: Ningappa 🗓 14 Nov 2026, 07:49 PM 👁 27
Share: 💬 WhatsApp 📘 Facebook 𝕏 Post

ಜಾಲಹಳ್ಳಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನಕ್ಕೆ ಶಾಸಕಿ ಕರೆಮ್ಮ ಜಿ. ನಾಯಕ ಚಾಲನೆ - ಗಿಡಕ್ಕೆ ನೀರುಣಿಸುವ ಮೂಲಕ ಚಾಲನೆ - 63 ಅರ್ಜಿ ಸ್ವೀಕಾರ - ರೈಲ್ವೆ ಮಾರ್ಗ ನಿರ್ಮಾಣಕ್ಕೆ ಪತ್ರಕರ್ತರಿಂದ ಮನವಿ - ಶೀಘ್ರದಲ್ಲೇ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸುವ ಭರವಸೆ

ಜಾಲಹಳ್ಳಿ: ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನಕ್ಕೆ ಶಾಸಕಿ ಕರೆಮ್ಮ ಜಿ. ನಾಯಕ ಚಾಲನೆ

ದೇವದುರ್ಗ: ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ವತಿಯಿಂದ ಜಾಲಹಳ್ಳಿಯ ಅಂಬಿಗರ ಚೌಡಯ್ಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ-2026ಕ್ಕೆ ಶಾಸಕಿ ಕರೆಮ್ಮ ಜಿ. ನಾಯಕ ಅವರು ಗಿಡಕ್ಕೆ ನೀರುಣಿಸುವ ಮೂಲಕ ಚಾಲನೆ ನೀಡಿದರು.

ಕರ್ನಾಟಕ ಸರ್ಕಾರದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಪ್ರಾರ್ಥನಾ ಗೀತೆ ಹಾಡಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಡಿ. ರಾಜಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕಿ ಕರೆಮ್ಮ ಜಿ. ನಾಯಕ, ಪ್ರತಿ ಶನಿವಾರ ತಮ್ಮ ನೇತೃತ್ವದಲ್ಲಿ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಹಮ್ಮಿಕೊಳ್ಳಲಾಗುತ್ತಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸ್ಥಳದಲ್ಲಿಯೇ ಪರಿಹಾರ ಪಡೆದುಕೊಳ್ಳಲು ಈ ಕಾರ್ಯಕ್ರಮ ಅವಕಾಶ ಕಲ್ಪಿಸುತ್ತದೆ. ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಪ್ರಜಾಸೇವಾ ಆಂದೋಲನವು ಸನ್ಮಾನ ಮಾಡಿಸಿಕೊಳ್ಳುವ ವೇದಿಕೆಯಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವುಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವ ವೇದಿಕೆಯಾಗಿದೆ. ಜನರ ಸೇವೆ ಮಾಡುವುದೇ ನನ್ನ ಮುಖ್ಯ ಉದ್ದೇಶವಾಗಿದೆ. ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸಿ, ವಿಳಂಬ ಮಾಡದೆ ಪರಿಹಾರ ಒದಗಿಸಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ತಾಲೂಕು ಆಡಳಿತದ ವತಿಯಿಂದ ಶಾಸಕಿ ಕರೆಮ್ಮ ಜಿ. ನಾಯಕ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿದ್ದ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಸಹ ಸನ್ಮಾನಿಸಿ ಗೌರವಿಸಲಾಯಿತು.

ಪ್ರಜಾಸೇವಾ ಆಂದೋಲನದಲ್ಲಿ 63 ಅರ್ಜಿ ಸ್ವೀಕಾರ; ಜಾಲಹಳ್ಳಿಯಲ್ಲಿ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಒಟ್ಟು 63 ಅರ್ಜಿಗಳು ಸಲ್ಲಿಕೆಯಾಗಿದ್ದು,ಜನ ನಿರೀಕ್ಷೆಗೆ ತಕ್ಕಷ್ಟು ಭಾಗವಹಿಸದೇ ಇರುವುದರಿಂದ ವೇದಿಕೆ ಕಾರ್ಯಕ್ರಮ ಅಧಿಕಾರಿಗಳಿಗೆ ಸೀಮಿತವಾಗಿತ್ತು.

ವೇದಿಕೆ ಮೇಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹನುಮಂತಿ ಶಿವಬಸಪ್ಪ ರಾಂಪಳ್ಳಿ, ಉಪಾಧ್ಯಕ್ಷ ಈರಪ್ಪ ಅರಕೇರಾ, ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಡಿ. ರಾಜಕುಮಾರ್, ಸಿಡಿಪಿಒ ಮಹೇಶ್ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ರಾಧಾದೇವಿ, ತಾಲೂಕು ಯೋಜನಾಧಿಕಾರಿ ಅಮರೇಶ್ ಕುಂಬಾರ, ತಾಲೂಕು ಆರೋಗ್ಯಾಧಿಕಾರಿ ಡಾ. ಬನದೇಶ್ವರ, ಅಬಕಾರಿ ಅಧಿಕಾರಿ ವಿಠ್ಠಲ್, ಜಾಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ವೈಶಾಲಿ ಜಳಕಿ, ಜಾಲಹಳ್ಳಿ ಕಂದಾಯ ನಿರೀಕ್ಷಕಿ ದೇವಿ ರೆಡ್ಡಿ, ಉಪತಹಸೀಲ್ದಾರ್ ಗೋವಿಂದಪ್ಪ ಸೇರಿದಂತೆ ತಾಲೂಕು ಆಡಳಿತದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
📲Get App