🔥 ट्रेंडिंग पटना सिटी के मंगल तालाब में चौथी जिला... PET परीक्षा संपन्न Awantipora Police arrests Drug peddler दिल्ली के रामलीला मैदान में राहुल गांध... वाराणसी में सारनाथ पुलिस ने जापानी महि... दारू थाना क्षेत्र के मेढकुरी गाँव में...
01 नव. 2026•
ગુજરાતી मराठी ਪੰਜਾਬੀ বাংলা

ಜಾಲಹಳ್ಳಿ ನಾಡಕಚೇರಿಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

✍️ रिपोर्टर: Khaja Hussain 🗓 01 नव. 2026, 07:16 PM 👁 19
शेयर करें: 💬 WhatsApp 📘 Facebook 𝕏 Post
**ಜಾಲಹಳ್ಳಿ | ಬ್ರೇಕಿಂಗ್ ನ್ಯೂಸ್**

# ಜಾಲಹಳ್ಳಿ ನಾಡಕಚೇರಿಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

### ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದ ಉಪ ತಹಸೀಲ್ದಾರ್ ಗೋವಿಂದಪ್ಪ ನಾಯಕ

**ಜಾಲಹಳ್ಳಿ, ನ. 1:** ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣದ ನಾಡಕಚೇರಿಯಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಬಳಿಕ ಉಪ ತಹಸೀಲ್ದಾರ್ ಗೋವಿಂದಪ್ಪ ನಾಯಕ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮಕ್ಕಳು ರಾಷ್ಟ್ರಗೀತೆ ಹಾಗೂ ನಾಡಗೀತೆಯನ್ನು ಹಾಡಿ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಗೌರವವನ್ನು ಸಾರಿದರು.

ಕಾರ್ಯಕ್ರಮದಲ್ಲಿ ಉಪ ತಹಸೀಲ್ದಾರ್ ಗೋವಿಂದಪ್ಪ ನಾಯಕ, ಗ್ರಾಮ ಆಡಳಿತ ಅಧಿಕಾರಿ ಹನುಮಂತರಾಯ, ಮುತ್ತು ಸೇರಿದಂತೆ ನಾಡಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.

**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ**
📲Get App