🔥 TRENDING Kherwara police thana Aalo Police Seize 5.67 Grams of Suspec... Buddha Relics Arrive at Tawang Monaste... New National Highway Linking Assam and... New School Year Commences Across Kashm... Jammu Civil Secretariat Reopens as CM...
02 Nov 2026•
ગુજરાતી मराठी ਪੰਜਾਬੀ বাংলা

ಜಿಲ್ಲೆಯ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳು: AIMIM ನಗರಾಧ್ಯಕ್ಷ ಶಬ್ಬೀರ್ ಅಹ್ಮದ್ ಹೌದಡಿ ಆಕ್ರೋಶ

✍️ Reporter: Khaja Hussain 🗓 02 Nov 2026, 11:20 AM 👁 11
Watch on: 📘 Facebook
Share: 💬 WhatsApp 📘 Facebook 𝕏 Post
**ರಾಯಚೂರು | ಬ್ರೇಕಿಂಗ್ ನ್ಯೂಸ್**

# ಜಿಲ್ಲೆಯ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳು: AIMIM ನಗರಾಧ್ಯಕ್ಷ ಶಬ್ಬೀರ್ ಅಹ್ಮದ್ ಹೌದಡಿ ಆಕ್ರೋಶ

### ಕುಡಿಯುವ ನೀರು, ರಸ್ತೆ, ಒಳಚರಂಡಿ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ; ₹200 ಕೋಟಿ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮರುಮನವಿ

**ರಾಯಚೂರು, ನ. 2:** ರಾಯಚೂರು ಜಿಲ್ಲಾದ್ಯಂತ ಸಾರ್ವಜನಿಕರು ಎದುರಿಸುತ್ತಿರುವ ನೂರಾರು ಮೂಲಭೂತ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವಂತೆ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದ್-ಉಲ್-ಮುಸ್ಲಿಮೀನ್ (AIMIM) ಪಕ್ಷದ ರಾಯಚೂರು ನಗರ ಅಧ್ಯಕ್ಷ ಶಬ್ಬೀರ್ ಅಹ್ಮದ್ ಹೌದಡಿ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮರುಮನವಿ ಸಲ್ಲಿಸಿದ್ದಾರೆ.

ಜ. 1, 2026ರಂದು ಉಲ್ಲೇಖ ಸಂಖ್ಯೆ Rcr/53/11/2026ರ ಅಡಿಯಲ್ಲಿ ಸಲ್ಲಿಸಿರುವ ಮನವಿ ಪತ್ರದಲ್ಲಿ, ಈ ಹಿಂದೆ ಆ. 15, 2026ರಂದು ಸಲ್ಲಿಸಿದ್ದ ಮನವಿಗೆ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಕುಡಿಯುವ ನೀರು, ರಸ್ತೆ, ಒಳಚರಂಡಿ, ಸ್ವಚ್ಛತೆ, ಬೀದಿ ದೀಪಗಳು, ಆರೋಗ್ಯ, ಶಿಕ್ಷಣ, ಬೀದಿ ನಾಯಿಗಳ ಹಾವಳಿ, ಉದ್ಯೋಗ ಸೇರಿದಂತೆ ಹಲವು ಸಮಸ್ಯೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಅಲ್ಲದೆ, ಪೊಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆಯಲ್ಲಿ ಸಿಬ್ಬಂದಿ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರು, ರಸ್ತೆ, ಒಳಚರಂಡಿ, ಸ್ವಚ್ಛತೆ ಮತ್ತು ಬೀದಿ ದೀಪಗಳ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

**ಜೆಸ್ಕಾಂ ಅಧಿಕಾರಿಗಳ ವಿರುದ್ಧ ದೂರು:**
ರಾಯಚೂರು ನಗರದ ವಾರ್ಡ್ ನಂ. 14ರ ಮಂಗಳವಾರ ಪೇಟೆಯಲ್ಲಿ ಹಳೆಯ ಕಬ್ಬಿಣದ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಹೊಸ ಕಂಬಗಳನ್ನು ಅಳವಡಿಸುವಂತೆ ಮನವಿ ಮಾಡಲಾಗಿತ್ತು. ಈ ವಿಚಾರವಾಗಿ ಪ್ರಶ್ನಿಸಿದ ಕಿರಿಯ ಅಭಿಯಂತರರ (JE) ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸಿಲ್ಲ ಎಂದು ಆರೋಪಿಸಿದ್ದಾರೆ.

**ವಿದ್ಯಾರ್ಥಿಗಳ ಸುರಕ್ಷತೆಗೆ ಪಾದಚಾರಿ ಮೇಲ್ಸೇತುವೆ:**
ಮಹಾತ್ಮ ಗಾಂಧಿ ಕ್ರೀಡಾಂಗಣದ ಹಿಂಭಾಗದಲ್ಲಿರುವ ಏಳು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ರೈಲ್ವೆ ಹಳಿಗಳನ್ನು ದಾಟುವಾಗ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ರೈಲ್ವೆ ಹಳಿ ಮೇಲೆ ಪಾದಚಾರಿ ಮೇಲ್ಸೇತುವೆ ನಿರ್ಮಿಸಬೇಕೆಂದು ಮನವಿ ಮಾಡಿದ್ದರೂ ರೈಲ್ವೆ ಇಲಾಖೆ ಸ್ಪಂದಿಸಿಲ್ಲ ಎಂದು ತಿಳಿಸಿದ್ದಾರೆ.

**ಸುಂಕಕೇಶ್ವರ ಹಾಳ್ ಗ್ರಾಮದ ಬಸ್ ನಿಲ್ದಾಣ ತೆರವುಗೊಳಿಸಲು ಆಗ್ರಹ:**
ದೇವದುರ್ಗ ತಾಲೂಕಿನ ಸುಂಕಕೇಶ್ವರ ಹಾಳ್ ಗ್ರಾಮದ ಶಿಥಿಲಾವಸ್ಥೆಯಲ್ಲಿರುವ ಹಳೆಯ ಬಸ್ ನಿಲ್ದಾಣ ಕುಸಿದು ಬೀಳುವ ಅಪಾಯವಿದ್ದು, ಅದನ್ನು ತೆರವುಗೊಳಿಸುವಂತೆ ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ದೂರಿದ್ದಾರೆ.

**₹200 ಕೋಟಿ ಅನುದಾನ ಬಿಡುಗಡೆಗೆ ಒತ್ತಾಯ:**
ರಾಜ್ಯ ಬಜೆಟ್ 2026-27ರಲ್ಲಿ ರಾಯಚೂರು ನಗರಕ್ಕೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿಯಲ್ಲಿ ಘೋಷಿಸಿರುವ ₹200 ಕೋಟಿ ಅನುದಾನವನ್ನು ಇದುವರೆಗೆ ಬಿಡುಗಡೆ ಮಾಡಿಲ್ಲ. ಮತ್ತೊಂದೆಡೆ ಮನೆ ತೆರಿಗೆ ಸೇರಿದಂತೆ ಇತರೆ ತೆರಿಗೆಗಳ ಹೆಚ್ಚಳದಿಂದ ಸಾರ್ವಜನಿಕರಿಗೆ ಆರ್ಥಿಕ ಹೊರೆ ಉಂಟಾಗಿದೆ ಎಂದು ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ.

**ವಕ್ಸ್ ಸಲಹಾ ಸಮಿತಿ ಅಧ್ಯಕ್ಷರ ನೇಮಕಕ್ಕೆ ಆಗ್ರಹ:**
ರಾಯಚೂರು ಜಿಲ್ಲಾ ವಕ್ಸ್ ಸಲಹಾ ಸಮಿತಿಗೆ ಅಧ್ಯಕ್ಷರನ್ನು ನೇಮಕ ಮಾಡುವಂತೆ ಈ ಹಿಂದೆ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರು ತುರ್ತು ಸಭೆ ನಡೆಸಿ, ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಕೈಗೊಂಡ ಕ್ರಮಗಳ ಕುರಿತು ಲಿಖಿತ ಉತ್ತರ ನೀಡಬೇಕೆಂದು ಶಬ್ಬೀರ್ ಅಹ್ಮದ್ ಹೌದಡಿ ಅವರು ಮನವಿ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ**
📲Get App