🔥 TRENDING ભરૂચમાં બુલેટ ટ્રેન પ્રોજેક્ટથી ખેતરોમ... जमीन धंसने से ट्रक नाले में गिरा, सुवि... विष्वकर्मा पूजा का भव्य आयोजन Gippy Grewal Blasts Canadian Airline O... Punjab & Haryana High Court says fathe... Assam CM Reports 12 Illegal Infiltrato...
17 Sep 2026
ગુજરાતી मराठी ਪੰਜਾਬੀ বাংলা

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅರ್ಥಪೂರ್ಣ ಆಚರಣೆ

✍️ Reporter: ಮಂಜುನಾಥ ಹೂಡೇಂ 🗓 17 Sep 2026, 09:48 AM 👁 8
Watch on: ▶️ YouTube
Share: 💬 WhatsApp 📘 Facebook 𝕏 Post

ಕೂಡ್ಲಿಗಿ ತಾಲೂಕು ಪಂಚಾಯಿತಿಯಲ್ಲಿ ಆಚರಣೆ

ಕೂಡ್ಲಿಗಿ, ಸೆ.17: ಕೂಡ್ಲಿಗಿ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನರಸಪ್ಪ ಅವರು ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ಶುಭಾಶಯ ಕೋರಿದರು.
ನಂತರ ಮಾತನಾಡಿದ ಅವರು, ಸ್ವಾತಂತ್ರ್ಯ ಪಡೆದ ನಂತರವೂ ಕಲ್ಯಾಣ ಕರ್ನಾಟಕ ಪ್ರದೇಶ ಹೈದರಾಬಾದ್ ನಿಜಾಮರ ಆಡಳಿತದ ಅಡಿಯಲ್ಲಿ ಮುಂದುವರಿದಿತ್ತು. ಈ ಸಂದರ್ಭದಲ್ಲಿ ರಜಾಕಾರರ ಚಟುವಟಿಕೆಗಳಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಇದಕ್ಕೆ ಪ್ರತಿಯಾಗಿ ಪ್ರಜಾಪ್ರಭುತ್ವ ಹಾಗೂ ಭಾರತೀಯ ಒಕ್ಕೂಟದ ಪರವಾಗಿದ್ದ ಸ್ವಾತಂತ್ರ್ಯ ಹೋರಾಟಗಾರರ ಹೋರಾಟ ತೀವ್ರಗೊಂಡಿತ್ತು ಎಂದರು.
ಸ್ವಾತಂತ್ರ್ಯ ಹೋರಾಟಗಾರರ ಹೋರಾಟ ಹಾಗೂ ಅಂದಿನ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದಿಟ್ಟ ನಿರ್ಧಾರದ ಹಿನ್ನೆಲೆಯಲ್ಲಿ 1948ರ ಸೆಪ್ಟೆಂಬರ್‌ನಲ್ಲಿ ‘ಆಪರೇಷನ್ ಪೋಲೊ’ ಪೊಲೀಸ್–ಸೈನಿಕ ಕಾರ್ಯಾಚರಣೆ ನಡೆಯಿತು. ಇದರ ಪರಿಣಾಮ ನಿಜಾಮರ ಆಡಳಿತ ಅಂತ್ಯಗೊಂಡು, 1948ರ ಸೆ.17ರಂದು ಹೈದರಾಬಾದ್ ಸಂಸ್ಥಾನ ಭಾರತೀಯ ಒಕ್ಕೂಟಕ್ಕೆ ಸೇರ್ಪಡೆಯಾಯಿತು ಎಂದು ವಿವರಿಸಿದರು.
ಸೆಪ್ಟೆಂಬರ್ 17 ಕಲ್ಯಾಣ ಕರ್ನಾಟಕ ಭಾಗದ ಜನರ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದ್ದು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಧೈರ್ಯ ಮತ್ತು ಜನಸೇವೆಯನ್ನು ಸ್ಮರಿಸುವ ದಿನವಾಗಿದೆ. ಅವರ ತ್ಯಾಗ ವ್ಯರ್ಥವಾಗದಂತೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಿಕೊಂಡು ಸಮಾಜ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೆಂಕಟೇಶ್ ಎಸ್. ಸೇರಿದಂತೆ ತಾಲ್ಲೂಕು ಪಂಚಾಯಿತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
📲Get App