ಹಾವು ಕಡಿತದ ಬಗ್ಗೆ ಆತಂಕ ಬೇಡ, ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆಯಿರಿ: ಡಾ. ಷಣ್ಮುಖ ನಾಯ್ಕ್
ಮರಿಯಮ್ಮನಹಳ್ಳಿ: ಮೂಢನಂಬಿಕೆಗಳಿಗೆ ಒಳಗಾಗದೆ ಸೂಕ್ತ ಚಿಕಿತ್ಸೆ ಪಡೆಯಲು ಕರೆ
ಮರಿಯಮ್ಮನಹಳ್ಳಿ: ಹಾವು ಕಡಿತಕ್ಕೊಳಗಾದ ಸಂದರ್ಭದಲ್ಲಿ ಸಾರ್ವಜನಿಕರು ಆತಂಕಕ್ಕೊಳಗಾಗದೆ, ಯಾವುದೇ ಮೂಢನಂಬಿಕೆಗಳಿಗೆ ಒಳಗಾಗದೇ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಷಣ್ಮುಗ ನಾಯ್ಕ್ ತಿಳಿಸಿದರು.
ಮರಿಯಮ್ಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಹಾವು ಕಡಿತ ಜಾಗೃತಿ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಹಾವು ಕಡಿತದ ಸಂದರ್ಭದಲ್ಲಿ ವಿಳಂಬ ಮಾಡುವುದು ಅಪಾಯಕಾರಿಯಾಗಬಹುದು. ಆದ್ದರಿಂದ ಗಾಯಗೊಂಡ ವ್ಯಕ್ತಿಯನ್ನು ಶಾಂತವಾಗಿರಿಸಿ, ಸಾಧ್ಯವಾದಷ್ಟು ಬೇಗ ಆಸ್ಪತ್ರೆಗೆ ಕರೆದೊಯ್ದು ವೈದ್ಯರ ಸಲಹೆಯಂತೆ ಚಿಕಿತ್ಸೆ ಕೊಡಿಸಬೇಕು. ಹಾವು ಕಡಿತಕ್ಕೆ ಸಂಬಂಧಿಸಿದಂತೆ ಜನರಲ್ಲಿ ಇರುವ ತಪ್ಪು ಕಲ್ಪನೆಗಳು ಹಾಗೂ ಮೂಢನಂಬಿಕೆಗಳನ್ನು ದೂರ ಮಾಡಿ ವೈಜ್ಞಾನಿಕ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.
ಪಶುಸಂಗೋಪನಾ ಇಲಾಖೆಯ ವೈದ್ಯಾಧಿಕಾರಿ ಡಾ. ಅಖ್ತರ್ ಅವರು ಮಾತನಾಡಿ, ಹಾವು ಕಡಿತದಿಂದ ಮುನ್ನೆಚ್ಚರಿಕೆ ವಹಿಸುವ ವಿಧಾನಗಳು, ಹಾವುಗಳಿಂದ ರಕ್ಷಣೆ ಪಡೆಯುವ ಕ್ರಮಗಳು ಹಾಗೂ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಪ್ರಾಥಮಿಕ ಚಿಕಿತ್ಸಾ ಕ್ರಮಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಹಾವು ಹಿಡಿಯುವವರು ಭಾಗವಹಿಸಿ, ಹಾವುಗಳ ಸ್ವಭಾವ, ಅವುಗಳಿಂದ ಸುರಕ್ಷಿತವಾಗಿರುವ ವಿಧಾನಗಳು ಹಾಗೂ ಹಾವು ಕಡಿತದ ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಚನಾ, ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.