कृषि
ಬರ ಪೀಡಿತ ತಾಲೂಕುಗಳ ಪಟ್ಟಿಗೆ ಕಾಗವಾಡ ಸೇರ್ಪಡೆ: ರೈತರ ಹೋರಾಟಕ್ಕೆ ಸಿಕ್ತು ಜಯ
ಮಾಜಿ ಸಚಿವರಾದ ಶ್ರೀಮಂತ ಪಾಟೀಲರ ನೇತೃತ್ವದ ರೈತರ ಹೋರಾಟಕ್ಕೆ ಮಣಿದ ಸರ್ಕಾರ, ಕಾಗವಾಡ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಸಂಭ್ರಮಾಚರಣೆ ನಡೆಸಿದರು.
ಮಾಜಿ ಸಚಿವರಾದ ಶ್ರೀಮಂತ (ತಾತ್ಯಾ) ಪಾಟೀಲ ಅವರ ನೇತೃತ್ವದಲ್ಲಿ ನಡೆದ ರೈತರ ಬೃಹತ್ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ. ಕಾಗವಾಡ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸುವಂತೆ ರೈತರು ನಡೆಸಿದ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ, ಇದೀಗ ಅಧಿಕೃತವಾಗಿ ಕಾಗವಾಡ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿದೆ.
ಈ ಆದೇಶದಿಂದಾಗಿ ಸ್ಥಳೀಯ ರೈತರು ಹಾಗೂ ಬಿಜೆಪಿ ಕಾಗವಾಡ ಮಂಡಲ ಅಧ್ಯಕ್ಷರು ಹಾಗೂ ಕಾರ್ಯಕರ್ತರು ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ. ಕಾಗವಾಡ ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಅವರು, ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು. ಸರ್ಕಾರದ ಈ ನಿರ್ಧಾರವು ಬರಗಾಲದಿಂದ ತತ್ತರಿಸಿದ್ದ ರೈತ ಸಮುದಾಯಕ್ಕೆ ದೊಡ್ಡ ನೆಮ್ಮದಿ ತಂದಿದೆ.
ರೈತರ ಬೇಡಿಕೆಯನ್ನು ಈಡೇರಿಸುವಲ್ಲಿ ಮಾಜಿ ಸಚಿವರಾದ ಶ್ರೀಮಂತ ಪಾಟೀಲ ಅವರ ಪಾತ್ರ ಮಹತ್ವದಾಗಿದೆ. ಅವರ ನಿರಂತರ ಪ್ರಯತ್ನ ಹಾಗೂ ರೈತರ ಪರವಾದ ಹೋರಾಟಕ್ಕೆ ಇದೀಗ ಸರ್ಕಾರ ಸ್ಪಂದಿಸಿದೆ. ಬರಗಾಲದ ಪರಿಹಾರ ಹಾಗೂ ಇನ್ನಿತರ ಸೌಲಭ್ಯಗಳು ಕಾಗವಾಡ ತಾಲೂಕಿನ ರೈತರಿಗೆ ದೊರಕುವಂತಾಗಲು ಈ ಘೋಷಣೆ ಸಹಕಾರಿಯಾಗಲಿದೆ.