🔥 TRENDING ખેડબ્રહ્મા તાલુકા પંચાયતમાં રાજકીય ઉથલ... एटा एवं अवागढ़ में भव्य शोभायात्रा का... Deep Depression Over South Odisha Weak... Red warning issued for four districts... પોલીસ જવાનોના ઉત્સાહ સાથે માઁ અંબાના જ... Two Hostel Superintendents Suspended i...
24 Sep 2026
ગુજરાતી मराठी ਪੰਜਾਬੀ বাংলা

ನೀರು ಇದ್ದರಷ್ಟೇ ತಮಿಳುನಾಡಿಗೆ ನೀರು: ಸಿಎಂ ಡಿ.ಕೆ.ಶಿವಕುಮಾರ್

✍️ Reporter: ಮಂಜುನಾಥ ಹೂಡೇಂ 🗓 24 Sep 2026, 08:38 PM 👁 11
Share: 💬 WhatsApp 📘 Facebook 𝕏 Post

ಕಾವೇರಿ ನೀರು ವಿಚಾರದಲ್ಲಿ ರಾಜ್ಯದ ಹಿತ ಕಾಪಾಡಲು ಬದ್ಧ; ಬರ ಪರಿಹಾರಕ್ಕೆ ಕೇಂದ್ರದ ನೆರವು ಕೋರಿಕೆ

ಚಿತ್ರದುರ್ಗ: ರಾಜ್ಯದಲ್ಲಿ ಮಳೆ ಕೊರತೆಯಿಂದ ಜಲಾಶಯಗಳಿಗೆ ಒಳಹರಿವು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ, ಲಭ್ಯವಿರುವ ನೀರಿನ ಪರಿಸ್ಥಿತಿಯನ್ನು ಪರಿಶೀಲಿಸಿಯೇ ತಮಿಳುನಾಡಿಗೆ ಕಾವೇರಿ ನೀರು ಬಿಡುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಚಿತ್ರದುರ್ಗಕ್ಕೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮಳೆ ಕೊರತೆಯಿಂದ ಸಂಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದೆ. ಜಲಾಶಯಗಳಿಗೆ ಒಳಹರಿವು ನಿಂತಿದ್ದು, ನೀರಿನ ಲಭ್ಯತೆ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ರಾಜ್ಯದ ಪರಿಸ್ಥಿತಿಯನ್ನು ಪರಿಗಣಿಸಬೇಕಾಗಿದೆ ಎಂದು ಹೇಳಿದರು. ನೀರು ಲಭ್ಯವಿದ್ದರೆ ಮಾತ್ರ ತಮಿಳುನಾಡಿಗೆ ನೀರು ಬಿಡಲಾಗುವುದು ಎಂದು ಸ್ಪಷ್ಟಪಡಿಸಿದರು.
📲Get App