ನೈತಿಕತೆ ಹೆಸರಿನಲ್ಲಿ ಅಪ್ಪ,ಮಕ್ಕಳ ಗಿಮಿಕ್ ರಾಜಕೀಯ: ಶಾಸಕ ಕೆ. ವೆಂಕಟೇಶ್ ವಾಗ್ದಾಳಿ
Watch on:
📘 Facebook
ಕರಡಿಲಕ್ಕನ ಕೆರೆ ಏತ ನೀರಾವರಿ, ಹಾರಂಗಿ ಬಲದಂಡೆ ನಾಲೆ ಯೋಜನೆಗಳಿಂದ ರೈತರಿಗೆ ಅನುಕೂಲ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ
ಉದಯವಾಣಿ ಸಮಾಚಾರ
ವರದಿ : ಸಿ ಎಸ್ ವಸಂತಕುಮಾರ್.
ಪಿರಿಯಾಪಟ್ಟಣ: ಕ್ಷೇತ್ರದ ಅಭಿವೃದ್ಧಿಯ ವಿಚಾರದಲ್ಲಿ ಪಕ್ಷಭೇದ ಮಾಡದೆ ಎಲ್ಲ ಗ್ರಾಮಗಳಿಗೂ ಆದ್ಯತೆ ನೀಡುತ್ತಿದ್ದೇನೆ. ಆದರೆ, ನೈತಿಕತೆಯ ಹೆಸರಿನಲ್ಲಿ ಅಪ್ಪ,ಮಕ್ಕಳು ಗಿಮಿಕ್ ರಾಜಕೀಯ ಮಾಡುತ್ತಿದ್ದು,ಅವರ ಟೀಕೆಗಳಿಗೆ ಕಾರ್ಯಕರ್ತರು ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದು ಶಾಸಕ ಕೆ. ವೆಂಕಟೇಶ್ ಎಂದು ತಿರುಗೇಟು ನೀಡಿದರು.
ತಾಲೂಕಿನ ಬೆಟ್ಟದಪುರ ಸಮೀಪದ ಸುರಗಳ್ಳಿ ಗ್ರಾಮದಲ್ಲಿ ಶುಕ್ರವಾರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮಾಜಿ ಶಾಸಕ ಕೆ. ಮಹದೇವ್ ಹಾಗೂ ಅವರ ಪುತ್ರ, ಮಾಜಿ ಮೈಮುಲ್ ಅಧ್ಯಕ್ಷ ಪಿ.ಎಂ. ಪ್ರಸನ್ನ ಅವರ ರಾಜಕೀಯ ಟೀಕೆಗಳಿಗೆ ಪ್ರತಿಕ್ರಿಯಿಸಿದರು.
ಟೀಕೆಗಳಿಗೆ ಅಭಿವೃದ್ಧಿಯೇ ಉತ್ತರ:
ನೈತಿಕತೆ ಎಂದರೇನು ಎಂಬುದನ್ನು ಮೊದಲು ಅರಿತುಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಅಪ್ಪ,ಮಕ್ಕಳು ಮಾಡುತ್ತಿರುವ ರಾಜಕೀಯ ಟೀಕೆಗಳನ್ನು ಗಮನಿಸಿದರೆ ನಗು ಬರುತ್ತದೆ. ಕಾರ್ಯಕರ್ತರು ಇಂತಹ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ ಅನಗತ್ಯ ವಿವಾದ ಸೃಷ್ಟಿಸುವ ಬದಲು, ಅವರ ನಡವಳಿಕೆಯನ್ನು ಗಮನಿಸಿ ಸುಮ್ಮನಿರಬೇಕು. ಯಾವುದೇ ಪಕ್ಷದವರೊಂದಿಗೂ ದ್ವೇಷ ಬೆಳೆಸಿಕೊಳ್ಳದೆ ಸೌಹಾರ್ದತೆಯಿಂದ ನಡೆದುಕೊಂಡು ಗ್ರಾಮಗಳ ಅಭಿವೃದ್ಧಿಗೆ ಸಹಕರಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದ್ದೇನೆ. ಕೆಲವರು ಇಲ್ಲಸಲ್ಲದ ಮಾತುಗಳ ಮೂಲಕ ಜನರ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.
ಶಾಶ್ವತ ನೀರಾವರಿ ಯೋಜನೆಗಳಿಗೆ ಆದ್ಯತೆ:
ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದು ಜನರ ಅಗತ್ಯಗಳಿಗೆ ತಕ್ಕಂತೆ ಹಲವು ಕಾಮಗಾರಿಗಳನ್ನು ಕೈಗೊಂಡಿದ್ದೇನೆ. ವಿಶೇಷವಾಗಿ ಕೃಷಿ ಕ್ಷೇತ್ರದ ಬೆಳವಣಿಗೆಗೆ ಶಾಶ್ವತ ನೀರಾವರಿ ಯೋಜನೆಗಳು ಅರಿತ ನಾನು ಮೊದಲಿಗೆ ಕರಡಿಲಕ್ಕನ ಕೆರೆ ಏತ ನೀರಾವರಿ ಯೋಜನೆ ಕೈಗೆತ್ತುಕೊಂಡು ನಂತರ ಹಾರಂಗಿ ಬಲದಂಡೆ ನಾಲೆಯಿಂದ ನೀರು ಹರಿಸುವ ಯೋಜನೆಗಳಿಗೆ ಆದ್ಯತೆ ನೀಡಿದ್ದೇನೆ ಎಂದು ತಿಳಿಸಿದರು.
ಹಿಂದಿನ ಆಡಳಿತಾವಧಿಯಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ನಿರೀಕ್ಷಿತ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗಿರಲಿಲ್ಲ. ನಾನು ಮೊದಲ ಬಾರಿಗೆ ಶಾಸಕರಾದ ಬಳಿಕ ಈ ಶಾಶ್ವತ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಏತ ನೀರಾವರಿ ಯೋಜನೆಯಿಂದ ಸುಮಾರು 45 ಸಾವಿರ ಎಕರೆ ಹಾಗೂ ಹಾರಂಗಿ ಬಲದಂಡೆ ನಾಲೆ ಯೋಜನೆಯಿಂದ 9 ಸಾವಿರ ಎಕರೆ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ ಎಂದರು. ಈ ಯೋಜನೆಗಳಿಗಾಗಿ ರೈತರು ತಮ್ಮ ಭೂಮಿಯನ್ನು ತ್ಯಾಗ ಮಾಡಿದ್ದು, ಅವರ ಸಹಕಾರದಿಂದ ಈ ಭಾಗದ ಕೃಷಿಗೆ ನೆರವಾಗಿದೆ ಎಂದರು.
ಯುವಕರ ಸಂಘಟನೆಗೆ ಭಾರತ್ ಜೋಡೋ ಕಾರ್ಯಕ್ರಮ:
ಸಮಾಜದಲ್ಲಿ ಏಕತೆ, ಸಹಬಾಳ್ವೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವ ದೃಷ್ಟಿಯಲ್ಲಿ ಯುವಕರಲ್ಲಿ ನಾಯಕತ್ವದ ಗುಣ ಬೆಳೆಸುವುದು ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳುವುದು ಭಾರತ್ ಜೋಡೋ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಘಟನೆ ರೂಪಿಸಿ ಯುವಕರು ಹಾಗೂ ಸ್ಥಳೀಯ ಕಾರ್ಯಕರ್ತರನ್ನು ಒಗ್ಗೂಡಿಸುವ ಯೋಜನೆ ರೂಪಿಸಲಾಗಿದೆ. ಈ ಕುರಿತು ಮಾಹಿತಿ ನೀಡಲು ಗ್ರಾಮಗಳಿಗೆ ಭೇಟಿ ನೀಡಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡುತ್ತಿದ್ದೇನೆ ಎಂದರು.
ಗ್ರಾಮಗಳ ಅಭಿವೃದ್ಧಿಗೆ ಕೋಟ್ಯಂತರ ರೂ ಅನುದಾನ:
ಗ್ರಾಮದ ಮುಖಂಡ ಶಂಕರೇಗೌಡ ಮಾತನಾಡಿ, ಶಾಸಕ ಕೆ. ವೆಂಕಟೇಶ್ ಅವರು ಗ್ರಾಮಗಳ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಅನುದಾನ ತಂದು ರಸ್ತೆ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳಿಗೆ ನೆರವಾಗಿದ್ದಾರೆ. ಜನರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತು ಗ್ರಾಮಗಳ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ ಎಂದು ಪ್ರಶಂಸಿಸಿದರು.
ಗ್ರಾಮದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 20 ಲಕ್ಷ ರೂ ಹಾಗೂ ಒಕ್ಕಲಿಗರ ಭವನ ನಿರ್ಮಾಣಕ್ಕೆ 50 ಲಕ್ಷ ರೂ ಅನುದಾನ ನೀಡುವ ಭರವಸೆಯನ್ನು ಶಾಸಕರು ನೀಡಿದ್ದಾರೆ. ಗ್ರಾಮದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದೆ ಎಂದರು.ಇದೇ ವೇಳೆ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ 10 ಲಕ್ಷ ರೂ ಅನುದಾನ ನೀಡುವಂತೆ ಗ್ರಾಮಸ್ಥರು ಶಾಸಕರಿಗೆ ಮನವಿ ಸಲ್ಲಿಸಿದರು.ದೇವಸ್ಥಾನಕ್ಕೆ ಈಗಾಗಲೇ ಅಡಿಪಾಯ ಹಾಕಲಾಗಿದ್ದು,ಮುಂದಿನ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಹಕಾರ ನೀಡುವಂತೆ ಕೋರಿದರು. ಗ್ರಾಮದ ಇನ್ನೂ ಎರಡು ಬೀದಿಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಬಾಕಿಯಿದ್ದು, ಅವುಗಳ ಕಾಮಗಾರಿಯನ್ನೂ ಪೂರ್ಣಗೊಳಿಸಿಕೊಡುವಂತೆ ಮನವಿ ಮಾಡಿದರು. ಪ್ರತಿಕ್ರಿಯಿಸಿದ ಶಾಸಕರು ಮುಂದಿನ ದಿನಗಳಲ್ಲಿ ಎಲ್ಲಾ ಬೇಡಿಕೆಗಳಿಗೂ ಹಂತ ಹಂತವಾಗಿ ಬಗೆ ಹರಿಸಲು ಪ್ರಯತ್ನಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ರಾವಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ. ಸ್ವಾಮಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸೋಯಲ್ ಪಾಷಾ, ಬೆಟ್ಟದಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಹಮತ್ ಜಾನ್ ಬಾಬು, ಎಂಸಿಡಿಸಿಸಿ ಮಾಜಿ ನಿರ್ದೇಶಕ ಈ.ಪಿ. ಲೋಕೇಶ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಹೊಲದಪ್ಪ, ಅಧ್ಯಕ್ಷ ರಾಜಣ್ಣ, ಶೇಖರ್, ಮಹದೇವ್ ಸೇರಿದಂತೆ ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಗೂ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.