ಅಧಿಕಾರಿಗಳು ಸಮನ್ವತೆಯಿಂದ ಕಾರ್ಯನಿರ್ವಹಣೆ ಮಾಡಲಿ ತಾಪಂ ಸಾಮಾನ್ಯ ಸಭೆಯಲ್ಲಿ ವೆಂಕಟೇಶ ವಂದಾಲ ಸೂಚನೆ
Watch on:
📘 Facebook
ಈ ವರ್ಷ ಮಳೆಯ ಕೊರತೆಯಿಂದ ಬರಗಾ ಲದ ಛಾಯೆ ಆವರಿಸಿದರಿಂದ ಸರ್ಕಾರ ಕಾಲಕಾಲಕ್ಕೆ ನೀಡುವ ನಿರ್ದೇಶನಗಳನ್ನು ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವತೆ ಯಿಂದ ಕಾರ್ಯನಿರ್ವಹಿಸುವ ಮೂಲಕ ಜ್ವಲಂತ ಬರಗಾಲದಲ್ಲಿ ಜನರಿಗೆ ಸ್ಪಂದಿಸಬೇ む ಎಂದು ಬಸವನಬಾಗೇವಾಡಿ, ನಿಡಗುಂದಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ ವಂದಾಲ ಹೇಳಿದರು.
ಪಟ್ಟಣದ ತಾಲೂಕು ಪಂಚಾಯತಿಯ ಸಭಾಭವನದ ಲ್ಲಿ ಶುಕ್ರವಾರ ಜರುಗಿದ ಬಸವನಬಾಗೇವಾಡಿ ಮತ್ತು ನಿಡಗುಂದಿ ತಾಲೂಕು ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ಇಲಾಖೆಯ ಮುಖ್ಯಸ್ಥರು ತಮ್ಮ ಇಲಾಖೆಗೆ ಬಂದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು. ಯಾವುದೇ ಕಾರಣಕ್ಕೂ ಪ್ರಗತಿ ಕುಂಠಿತವಾಗದಂತೆ ನೋಡಿಕೊಳ್ಳಬೇಕು. ಯಾವುದೇ ಸಂದರ್ಭದಲ್ಲಿ ಸಭೆ ಕರೆದಾಗ ಆಯಾ ಇಲಾಖೆಯ ಮುಖ್ಯಸ್ಥರು ಭಾಗವಹಿಸುವಂತಾಗಬೇಕು ಎಂದರು.
ಸದ್ಯ ಆಲಮಟ್ಟಿ ಜಲಾಶಯದಲ್ಲಿ ನೀರು ಲಭ್ಯವಿರುವುದರಿಂದಾಗಿ ಕುಡಿಯುವ ನೀರಿಗೆ ಅಭಾವ ಉಂಟಾಗುವುದಿಲ್ಲ. ನೀರು ಪೋಲಾಗದಂತೆ ಜನರು ಬಳಕೆ ಮಾಡಲು ಪ್ರತಿಯೊಂದು ಗ್ರಾಮಗಳಲ್ಲಿ ಅಧಿಕಾರಿಗಳು ಜಾಗೃತಿ ಮೂಡಿಸಬೇಕು. ಈಗಾಗಲೇ ಅರಣ್ಯ ಇಲಾಖೆಯವರು ರಸ್ತೆ ಬದಿ ಸೇರಿದಂತೆ ವಿವಿಧೆಡೆ ಹಚ್ಚಿರುವ ಸಸಿಗಳಿಗೆಮಳೆ ಅಭಾವ ಉಂಟಾಗಿರುವದರಿ ಂದಾಗಿ ಆ ಸಸಿಗಳಿಗೆ ನೀರುಣಿಸಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಜನರ ಆರೋಗ್ಯ ರಕ್ಷಣೆಗೆ ಬೇಕಾದ ಮುನ್ನಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಬೇಕು. ವಿದ್ಯುತ್ ಇಲಾಖೆಯವರು ಸಮರ್ಪಕ ವಾದ ವಿದ್ಯುತ್ ಪೂರೈಸುವಂತೆ ಸೂಚಿಸಿದರು.
ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ
ವಿದ್ಯಾರ್ಥಿಗಳ ಶಿಷ್ಯವೇತನ ಮಂಜೂರಾತಿ ಯಾಗುವಂತೆ ನೋಡಿಕೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭವನ, ಡಾ.ಅಂಬೇಡ್ಕರ್ ಡಾ.ಬಾಬುಜಗಜೀವನರಾಮ ಭವನಗಳು ಸದ್ಬಳಕೆಯಾಗುವಂತೆ ಗಮನ ಹರಿಸಬೇಕು. ಆಯಾ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಂ ತಾಗಬೇಕು ಎಂದು ತಿಳಿಸಿದರು.
ಕೃಷಿ ಇಲಾಖೆಯ ಚಿದಾನಂದ ಹಿರೇಮಠ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ಕ್ಷೇತ್ರದಲ್ಲಿ 49,594 ಹೆಕ್ಟೇರ್ಪ್ರದೇಶದಲ್ಲಿ ಬೆಳೆ ಹಾನಿ ಯಾಗಿದೆ. ಈಗಾಗಲೇ ಜೋಳ ಬಿತ್ತನೆ ಹಂಗಾಮು ಮುಗಿದಿದೆ. ಮಳೆಯಾದರೇ ಕಡಲೆ, ಅಕ್ಟೋಬರ್ಕೊನೆಯವರೆಗೂ ಗೋಧಿ ಬಿತ್ತನೆ ಮಾಡಬಹುದು. ಈ ಸಲ ಮಳೆ ತುಂಬಾ ಕೊರತೆಯ ಉಂಟಾಗಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ತೋಟಗಾರಿಕೆ, ಲೋಕೋ ಪಯೋಗಿ ಇಲಾಖೆ, ಹೆಸ್ಕಾಂ ಇಲಾಖೆ, ಮೀನುಗಾರಿಕೆ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಹಿಂದುಳಿದ ವರ್ಗದ ಕಲ್ಯಾಣಾಧಿಕಾರಿಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾ ಖೆ. ರೇಷ್ಮೆ ಇಲಾಖೆ, ಕಾರ್ಮಿಕ ಇಲಾಖೆ, ಪಶು ಇಲಾಖೆ ಸೇರಿದಂತೆ ವಿವಿಧ ಇಲಾ ಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿಯ ಕುರಿತು ಮಾಹಿತಿ ನೀಡಿದರು.
ನಿಡಗುಂದಿ ತಾಲೂಕು ಪಂಚಾಯತಿ ಆಡಳಿತಾಧಿಕಾರಿ, ಆಲಮಟ್ಟಿ ಕೃಷ್ಣಾ ಭಾಗ್ಯ ಜಲ ನಿಗಮದ ಅಧೀಕ್ಷಕ ಅಭಿಯಂತರ ಬಿ.ಎಸ್.ಪಾಟೀಲ ಅಧ್ಯಕ್ಷತೆ ವಹಿಸಿದ್ದರು