🔥 TRENDING ફુલવાળા ચોક થયું ઇનામ વિતરણ Nagaland State Lottery Sambad Draws at... Manipur observes Mera Hou Chongba with... Manipur CM Visits Families of Nongshum... Manipur Violence Disrupts BJP's Electi... Villagers in Muzaffarpur detain three...
26 Oct 2026•
ગુજરાતી मराठी ਪੰਜਾਬੀ বাংলা

ಶಾಲೆ ಆರಂಭಕ್ಕೂ ಮುನ್ನವೇ ಕ್ರಿಕೆಟ್ ಪಂದ್ಯ ಮುಗಿಸಲು ಸಿದ್ಧ: ಎಚ್‌ಪಿಎಲ್ ಪಂದ್ಯಾವಳಿಗೆ ಅಡ್ಡಿಪಡಿಸದಂತೆ ಸ್ಥಳೀಯರ ಆಗ್ರಹ

✍️ Reporter: Khaja Hussain 🗓 26 Oct 2026, 01:20 PM 👁 21
Share: 💬 WhatsApp 📘 Facebook 𝕏 Post
**ಜಾಲಹಳ್ಳಿ | ಬ್ರೇಕಿಂಗ್ ನ್ಯೂಸ್**

# ಶಾಲೆ ಆರಂಭಕ್ಕೂ ಮುನ್ನವೇ ಕ್ರಿಕೆಟ್ ಪಂದ್ಯ ಮುಗಿಸಲು ಸಿದ್ಧ: ಎಚ್‌ಪಿಎಲ್ ಪಂದ್ಯಾವಳಿಗೆ ಅಡ್ಡಿಪಡಿಸದಂತೆ ಸ್ಥಳೀಯರ ಆಗ್ರಹ

### ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಪಂದ್ಯಾವಳಿ ಮುಕ್ತಾಯಗೊಳಿಸುವ ಭರವಸೆ; ಆಯೋಜನೆಯಲ್ಲಿ ಭಾಗಿಯಾಗಿದ್ದವರೇ ಈಗ ವಿರೋಧಿಸುತ್ತಿದ್ದಾರೆ ಎಂಬ ಸ್ಥಳೀಯರ ಆರೋಪ

**ಜಾಲಹಳ್ಳಿ:** ಪಟ್ಟಣದ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಮೈದಾನದಲ್ಲಿ ಸ್ಥಳೀಯರು ಪ್ರತಿವರ್ಷದ ಸಂಪ್ರದಾಯದಂತೆ ಎಚ್‌ಪಿಎಲ್ (ಹೊರಟ್ಟಿ ಪ್ರೀಮಿಯರ್ ಲೀಗ್) ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸುತ್ತಾ ಬಂದಿದ್ದಾರೆ. ಅದರಂತೆ ಈ ವರ್ಷವೂ ಯುವಕರಲ್ಲಿ ಕ್ರೀಡಾಸಕ್ತಿ ಬೆಳೆಸುವುದು, ದೈಹಿಕ ಕ್ಷಮತೆಯನ್ನು ಉತ್ತೇಜಿಸುವುದು ಹಾಗೂ ಸ್ಥಳೀಯ ಕ್ರೀಡಾ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.

ಆದರೆ, ಪಂದ್ಯಾವಳಿಗೆ ಕೆಲವರು ಅಡ್ಡಿಪಡಿಸುತ್ತಿದ್ದಾರೆ ಎಂದು ಸ್ಥಳೀಯರು ಹಾಗೂ ಕ್ರೀಡಾಪಟುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿದ ಇಸಿಒ ನರೇಶ್ ಅವರಿಗೆ ಸ್ಥಳೀಯರು ಹಾಗೂ ಕ್ರೀಡಾಪಟುಗಳು ಮನವಿ ಸಲ್ಲಿಸಿ, ಪಂದ್ಯಾವಳಿಯನ್ನು ಮುಂದುವರಿಸಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿದರು. ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ, ಬೆಳಿಗ್ಗೆ ಶಾಲೆ ಆರಂಭವಾಗುವ ಮೊದಲೇ ಕ್ರಿಕೆಟ್ ಪಂದ್ಯಗಳನ್ನು ಮುಕ್ತಾಯಗೊಳಿಸುವುದಾಗಿ ಭರವಸೆ ನೀಡಿದರು. ಹೀಗಾಗಿ ಪಂದ್ಯಾವಳಿಗೆ ಅಡ್ಡಿಪಡಿಸದೆ ಸಹಕರಿಸಬೇಕು ಎಂದು ಮನವಿ ಮಾಡಿದರು.

### ಟೂರ್ನಿ ಆಯೋಜನೆಯಲ್ಲಿ ಭಾಗಿಯಾಗಿದ್ದವರಿಂದಲೇ ವಿರೋಧ: ಸ್ಥಳೀಯರ ಆರೋಪ

ಶಾಲಾ ಮೈದಾನದಲ್ಲಿ ಖಾಸಗಿ ವ್ಯಕ್ತಿಗಳು ಕ್ರಿಕೆಟ್ ಪಂದ್ಯಾವಳಿ ನಡೆಸುತ್ತಿದ್ದಾರೆ ಎಂದು ದೂರು ನೀಡಿರುವ ಬಾಲರಾಜ ಮತ್ತು ಉದಯಕುಮಾರ ಅವರೇ ಈ ಹಿಂದೆ ಎಚ್‌ಪಿಎಲ್ ಟೂರ್ನಿ ಆಯೋಜನೆಗಾಗಿ ಸಭೆ ಕರೆದಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸಭೆಯ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಸಂದೇಶ ಹಂಚಿಕೊಂಡು ಸಭೆ ನಡೆಸಲಾಗಿತ್ತು. ಅಲ್ಲದೆ, ಟೂರ್ನಿಯ ಬಹುಮಾನಗಳ ವಿವರಗಳನ್ನು ಒಪ್ಪಿಕೊಂಡು ಗ್ರೂಪ್‌ನಲ್ಲಿ ಪ್ರಕಟಿಸಲಾಗಿತ್ತು. ಆಟಗಾರರ ಅರ್ಜಿಗಳನ್ನು ಸ್ವೀಕರಿಸುವ ಪ್ರಕ್ರಿಯೆಯಲ್ಲಿಯೂ ಅವರು ಭಾಗಿಯಾಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಆದರೆ, ಇದೀಗ ಆಟಗಾರರು ತಮ್ಮ ನಿರೀಕ್ಷೆಯಂತೆ ನಡೆದುಕೊಳ್ಳುತ್ತಿಲ್ಲ ಎಂಬ ಕಾರಣಕ್ಕೆ ಟೂರ್ನಿಯನ್ನು ನಿಲ್ಲಿಸಲು ಅಧಿಕಾರಿಗಳ ಮೂಲಕ ಪ್ರಯತ್ನಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಕುರಿತು ಸಂಬಂಧಪಟ್ಟವರ ಸ್ಪಷ್ಟನೆ ಲಭ್ಯವಾದಲ್ಲಿ ವರದಿಯಲ್ಲಿ ಪ್ರಕಟಿಸಲಾಗುವುದು.

### ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ಅವಕಾಶ ಕಲ್ಪಿಸಲು ಆಗ್ರಹ

ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ಕ್ರಿಕೆಟ್ ಪಂದ್ಯಾವಳಿ ನಡೆಸಲು ಅವಕಾಶ ನೀಡಬೇಕು. ಸ್ಥಳೀಯ ಯುವಕರ ಕ್ರೀಡಾಸಕ್ತಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕ್ರೀಡಾಪಟುಗಳು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ದುರುಗಪ್ಪ ಹೊರಟ್ಟಿ, ಬಡವರ ನಾಯಕ ಲಿಂಗದಹಳ್ಳಿ, ಮೌನೇಶ್ ದಾಸರ, ಹನುಮಂತ ಮಡಿ
ವಾಳ, ಅಮ್ಮಣ್ಣ, ರಂಗನಾಥ ವಂದಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ ಖಾಜಾ ಹುಸೇನ್ ಬಾಬಾ
ಜಾಲಹಳ್ಳಿ
📲Get App