🔥 TRENDING সাগরদিঘিতে প্রায় ৬ লক্ষ টাকার জাল নোট... मुख्यमंत्री जन-विश्वास अभियान: पिछोर म... ਸ਼੍ਰੋਮਣੀ ਕਮੇਟੀ ਮੈਂਬਰ ਜਥੇਦਾਰ ਬਲਦੇਵ ਸਿੰਘ... Delhi's Air Quality Improves Dramatica... Truck Collides with Bike on Damoh-Jaba... Three Killed, Child Critical as Vaishn...
30 Oct 2026•
ગુજરાતી मराठी ਪੰਜਾਬੀ বাংলা

ಜಿಪಂ ಸಿಇಒ ಸಾಹಿತ್ಯ ಎಂ. ಆಲದಕಟ್ಟಿಗೆ ಕಸಾಪದಿಂದ ಸನ್ಮಾನ

✍️ Reporter: Viswanatha D R 🗓 29 Oct 2026, 05:28 PM 👁 49
Watch on: 📘 Facebook
Share: 💬 WhatsApp 📘 Facebook 𝕏 Post
ದಾವಣಗೆರೆ, ಅ. 29: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಾಹಿತ್ಯ ಎಂ. ಆಲದಕಟ್ಟಿ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಕುವೆಂಪು ಕನ್ನಡ ಭವನದಲ್ಲಿ ಗುರುವಾರ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಕನ್ನಡ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಅವರು, ಇದೇ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಾಲಯಕ್ಕೆ ಭೇಟಿ ನೀಡಿದರು. ಮೊದಲ ಬಾರಿಗೆ ಕಾರ್ಯಾಲಯಕ್ಕೆ ಆಗಮಿಸಿದ ಅವರನ್ನು ಜಿಲ್ಲಾ ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ ತೊಗಲೇರಿ ಹಾಗೂ ಪದಾಧಿಕಾರಿಗಳು ಸ್ವಾಗತಿಸಿ, ಇತ್ತೀಚೆಗೆ ಸ್ಥಾಪಿಸಿರುವ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುತ್ಥಳಿ ಮುಂಭಾಗದಲ್ಲಿ ಗೌರವಿಸಿದರು.

ಕಾರಣಾಂತರಗಳಿಂದ ಪುತ್ಥಳಿಯ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ ಎಂದು ತಿಳಿಸಿದ ಸಾಹಿತ್ಯ ಎಂ. ಆಲದಕಟ್ಟಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಸಂತಸ ವ್ಯಕ್ತಪಡಿಸಿದರು.

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಬಿ. ದಿಳ್ಯಪ್ಪ, ದಾವಣಗೆರೆ ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್. ವಿಶಾಲಾಕ್ಷಿ ಹಾಗೂ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.
📲Get App