🔥 ट्रेंडिंग सुमेरपुर पंचायत समिति की नवगठित ग्राम... ದೇವದುರ್ಗದಲ್ಲಿ ಕಾಟಾಚಾರಕ್ಕೆ ರಾಜ್ಯೋತ್ಸವ ಆ... चतरा में जेटेट-2026 परीक्षा शांतिपूर्ण... रैम्पूर, मथुरा सोहरीया: सड़क घोटाले मे... दिल्ली के रामलीला मैदान में INDIA गठबं... विद्या ज्योति स्कूल के संस्थापक तरुण म...
01 नव. 2026•
ગુજરાતી मराठी ਪੰਜਾਬੀ বাংলা

ಜಾಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಧ್ವಜಾರೋಹಣವಿಲ್ಲದೆ ಕನ್ನಡ ರಾಜ್ಯೋತ್ಸವ ಆಚರಣೆ!

✍️ रिपोर्टर: Khaja Hussain 🗓 01 नव. 2026, 07:54 PM 👁 21
शेयर करें: 💬 WhatsApp 📘 Facebook 𝕏 Post
**ಜಾಲಹಳ್ಳಿ | ಬ್ರೇಕಿಂಗ್ ನ್ಯೂಸ್**

# ಜಾಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಧ್ವಜಾರೋಹಣವಿಲ್ಲದೆ ಕನ್ನಡ ರಾಜ್ಯೋತ್ಸವ ಆಚರಣೆ!

### ಕೇವಲ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ಅಧಿಕಾರಿಗಳ ಆದೇಶ; ಧ್ವಜಾರೋಹಣಕ್ಕೆ ಪಟ್ಟು ಹಿಡಿದ ಕರವೇ ಮುಖಂಡರು, ಅಧಿಕಾರಿಗಳ ವಿರುದ್ಧ ಹೋರಾಟದ ಎಚ್ಚರಿಕೆ

**ಜಾಲಹಳ್ಳಿ, ನ. 1:** ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವವನ್ನು ಧ್ವಜಾರೋಹಣ ಮಾಡದೆ, ಕೇವಲ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ಸಹಕಾರ ಸಂಘದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸೂಚನೆಯಂತೆ ಸಂಘದ ಕಾರ್ಯದರ್ಶಿ ಶರಣು ಅವರು ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರಾಜ್ಯೋತ್ಸವ ಆಚರಣೆ ನಡೆಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಖುರ್ಶಿದ್ ಪಟೇಲ್ ಹಾಗೂ ನಿರ್ದೇಶಕರಾದ ಈಶಣ್ಣ ಕಾಟಮಳ್ಳಿ, ವೆಂಕಣ್ಣ ಯರಕಮಟ್ಟಿ ಮತ್ತು ನವೀನ್ ಪಾಟೀಲ್ ಉಪಸ್ಥಿತರಿದ್ದರು.

**ಧ್ವಜಾರೋಹಣಕ್ಕೆ ಕರವೇ ಮುಖಂಡರ ಪಟ್ಟು:**

ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತಾಲೂಕು ಅಧ್ಯಕ್ಷ ನಂದಪ್ಪ ಪಿ. ಮಡ್ಡಿ ಹಾಗೂ ಜಾಲಹಳ್ಳಿ ಹೋಬಳಿ ಅಧ್ಯಕ್ಷ ತಮ್ಮಣ್ಣ ಹೆರುಂಡಿ ಅವರು ಪಟ್ಟು ಹಿಡಿದರು. ಆದರೆ, ಧ್ವಜಾರೋಹಣ ಮಾಡಲು ಯಾವುದೇ ಆದೇಶ ಬಂದಿಲ್ಲ ಎಂದು ಕಾರ್ಯದರ್ಶಿ ಶರಣು ತಿಳಿಸಿದರು.

ಈ ಕುರಿತು ತಾಲೂಕು ವಿಸ್ತರಣಾಧಿಕಾರಿ ಅಮರೇಶ್ ಅವರನ್ನು ಕರವೇ ಮುಖಂಡರು ಪ್ರಶ್ನಿಸಿದಾಗ, ಧ್ವಜಾರೋಹಣಕ್ಕೆ ಸಂಬಂಧಿಸಿದಂತೆ ಯಾವುದೇ ಆದೇಶ ಬಂದಿಲ್ಲ ಎಂದು ದೂರವಾಣಿ ಮೂಲಕ ತಿಳಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮುಖಂಡರು, ಜಿಲ್ಲಾ ಉಪನಿಬಂಧಕರಾದ ಶೈಖ್ ಹುಸೇನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.

ಈ ವೇಳೆ ಜಿಲ್ಲೆಯಲ್ಲಿ ಯಾವುದೇ ಪ್ರಾಥಮಿಕ ಸಹಕಾರ ಸಂಘದಲ್ಲಿ ಧ್ವಜಾರೋಹಣ ಮಾಡುವುದಿಲ್ಲ. ಕೇವಲ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ ಎಂದು ಕರವೇ ಮುಖಂಡರು ಹೇಳಿದರು.

ಬಾಕ್ಸ್ ನಲ್ಲಿ

**ಅಧಿಕಾರಿಗಳ ವಿರುದ್ಧ ದೂರು ದಾಖಲಿಸುವ ಎಚ್ಚರಿಕೆ:**

ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಕರವೇ ತಾಲೂಕು ಅಧ್ಯಕ್ಷ ನಂದಪ್ಪ ಪಿ. ಮಡ್ಡಿ ಹಾಗೂ ಜಾಲಹಳ್ಳಿ ಹೋಬಳಿ ಅಧ್ಯಕ್ಷ ತಮ್ಮಣ್ಣ ಹೆರುಂಡಿ ಅವರು, ಧ್ವಜಾರೋಹಣಕ್ಕೆ ಅವಕಾಶ ನೀಡದಿರುವ ಜಿಲ್ಲಾ ಉಪನಿಬಂಧಕ ಶೈಖ್ ಹುಸೇನ್ ಹಾಗೂ ತಾಲೂಕು ವಿಸ್ತರಣಾಧಿಕಾರಿ ಅಮರೇಶ್ ಅವರ ವಿರುದ್ಧ ದೂರು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ನಡೆಸಲು ಅವಕಾಶ ನೀಡದಿರುವ ಅಧಿಕಾರಿಗಳ ನಡೆ ಖಂಡನೀಯ. ಅಧಿಕಾರಿಗಳ ಈ ಬೇಜವಾಬ್ದಾರಿತನವನ್ನು ಕರವೇ ಸಹಿಸುವುದಿಲ್ಲ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ**
📲Get App