🔥 TRENDING Dhubri initiates eviction on 650 bigha... Jharkhand Minister Warns of Possible U... PM Modi Salutes Forces in Victory Para... Jharkhand Minister Threatens CEC Gyane... Indian Travelers Seek Diverse New Year... Bangladesh Garment Workers Stage Viole...
01 Nov 2026•
ગુજરાતી मराठी ਪੰਜਾਬੀ বাংলা

ಕನ್ನಡ ಭಾಷೆಯ ಹೋರಾಟಗಾರರ ತ್ಯಾಗ, ಹೋರಾಟ ಸ್ಮರಣೀಯ: ಪ್ರಾಂಶುಪಾಲರಾದ ಡಾ. ಶಕುಂತಲಾ. ಎನ್.

✍️ Reporter: Viswanatha D R 🗓 01 Nov 2026, 01:51 PM 👁 12
Share: 💬 WhatsApp 📘 Facebook 𝕏 Post
ಹರಿಹರ ನ 1:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಕುಂತಲಾ. ಎನ್. ಅವರು ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತಾ, ಕನ್ನಡ ಭಾಷೆಯ ಏಕೀಕರಣಕ್ಕಾಗಿ ನಡೆದ ಐತಿಹಾಸಿಕ ಹೋರಾಟಗಳನ್ನು ಸ್ಮರಿಸಿದರು.

1953ರಲ್ಲಿ ಪೊಟ್ಟಿ ಶ್ರೀರಾಮುಲು ಅವರು ನಡೆಸಿದ ಉಪವಾಸ ಸತ್ಯಾಗ್ರಹದ ಫಲವಾಗಿ ಅಕ್ಟೋಬರ್ 1ರಂದು ಆಂಧ್ರ ರಾಜ್ಯ ಅಸ್ತಿತ್ವಕ್ಕೆ ಬಂದ ಮಹತ್ವದ ಘಟನೆಯನ್ನು ಉಲ್ಲೇಖಿಸಿದರು. ಅದೇ ರೀತಿ ಕನ್ನಡ ನಾಡು-ನುಡಿ ಹಾಗೂ ಭಾಷಾವಾರು ಪ್ರಾಂತ್ಯ ರಚನೆಗಾಗಿ ಅನೇಕ ಕನ್ನಡಪರ ಹೋರಾಟಗಾರರು ನಡೆಸಿದ ನಿರಂತರ ಹೋರಾಟದ ಫಲವಾಗಿ 1956ರ ನವೆಂಬರ್ 1ರಂದು ವಿಶಾಲ ಮೈಸೂರು ರಾಜ್ಯ ಅಸ್ತಿತ್ವಕ್ಕೆ ಬಂದಿತು. ನಂತರ 1973ರ ನವೆಂಬರ್ 1ರಂದು ಅಂದಿನ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಆಡಳಿತಾವಧಿಯಲ್ಲಿ ಮೈಸೂರು ರಾಜ್ಯಕ್ಕೆ 'ಕರ್ನಾಟಕ' ಎಂದು ಮರುನಾಮಕರಣ ಮಾಡಲಾಯಿತು ಎಂದು ತಿಳಿಸಿದರು.

ಕನ್ನಡ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರು ಹಾಗೂ ಹೋರಾಟಗಾರರ ತ್ಯಾಗ ಮತ್ತು ಕೊಡುಗೆಗಳನ್ನು ಸ್ಮರಿಸಿದ ಅವರು, ಕನ್ನಡ ಭಾಷೆಯ ಉಳಿವು, ಬೆಳವಣಿಗೆ ಹಾಗೂ ಕನ್ನಡದ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕನ್ನಡ ವಿಭಾಗದ ಮುಖ್ಯಸ್ಥರಾದ ಗೌರಮ್ಮ ಅವರು ಕಾರ್ಯಕ್ರಮವನ್ನು ನಿರೂಪಿಸಿ, ಕೊನೆಯಲ್ಲಿ ವಂದನಾರ್ಪಣೆ ಸಲ್ಲಿಸಿದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
📲Get App