🔥 TRENDING ਪੰਜਾਬ ''ਚ ਇਕ ਹਫਤੇ ਦੀ ਮੌਸਮ ਨੂੰ ਲੈ ਕੇ ਵੱ... ऊंचाहार में पूर्व नगर पंचायत अध्यक्ष क... PVV Infra Secures Two Wayside Amenitie... Three members of Madhya Pradesh-based... Two brothers arrested for allegedly sh... IPL 2027: Deadline for Player Retentio...
02 Nov 2026•
ગુજરાતી मराठी ਪੰਜਾਬੀ বাংলা
Politics

ದಾವಣಗೆರೆ ಜಿಲ್ಲೆಯ ಭತ್ತ ಬೆಳೆಗಾರರ ಹಿತ ಕಾಪಾಡಲು ಆಗ್ರಹ! ದಾವಣಗೆರೆ ಜಿಲ್ಲೆಯಲ್ಲಿ ಒಂದು ಕಡೆ ಭೀಕರ ಬರಗಾಲದ ಪರಿಸ್ಥಿತಿ ಎದುರಗಿದೆ ಮತ್ತೊಂದೆಡೆ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಸಮರ್ಪಕವಾಗಿ ನೀರು ಬಿಡುಗಡೆಯಾಗದ ಕಾರಣ ಭತ್ತದ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ.

✍️ Reporter: ಕೆ ಆರ್ ಸುರೇಶ್ 🗓 02 Nov 2026, 06:07 PM 👁 24
Watch on: 📘 Facebook
Share: 💬 WhatsApp 📘 Facebook 𝕏 Post

ದಾವಣಗೆರೆ ಜಿಲ್ಲೆಯ ಭತ್ತ ಬೆಳೆಗಾರರ ಹಿತ ಕಾಪಾಡಲು ಆಗ್ರಹ! ದಾವಣಗೆರೆ ಜಿಲ್ಲೆಯಲ್ಲಿ ಒಂದು ಕಡೆ ಭೀಕರ ಬರಗಾಲದ ಪರಿಸ್ಥಿತಿ ಎದುರಗಿದೆ ಮತ್ತೊಂದೆಡೆ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಸಮರ್ಪಕವಾಗಿ ನೀರು ಬಿಡುಗಡೆಯಾಗದ ಕಾರಣ ಭತ್ತದ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ.

ದಾವಣಗೆರೆ ಜಿಲ್ಲೆಯ ಭತ್ತ ಬೆಳೆಗಾರರ ಹಿತ ಕಾಪಾಡಲು ಆಗ್ರಹ!

ದಾವಣಗೆರೆ ಜಿಲ್ಲೆಯಲ್ಲಿ ಒಂದು ಕಡೆ ಭೀಕರ ಬರಗಾಲದ ಪರಿಸ್ಥಿತಿ ಎದುರಗಿದೆ ಮತ್ತೊಂದೆಡೆ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಸಮರ್ಪಕವಾಗಿ ನೀರು ಬಿಡುಗಡೆಯಾಗದ ಕಾರಣ ಭತ್ತದ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ.

ಇಂತಹ ಸಂಕಷ್ಟದ ನಡುವೆಯೂ ಕೆಲವು ರೈತರು ಬೋರ್‌ವೆಲ್ ನೀರನ್ನು ಆಶ್ರಯಿಸಿ, ಸಾಕಷ್ಟು ಕಷ್ಟಪಟ್ಟು ಭತ್ತ ಬೆಳೆದಿದ್ದಾರೆ. ರೈತರು ತಮ್ಮ ಬೆಳೆದ ಬೆಳೆಗೆ ಉತ್ತಮ ಬೆಲೆ ದೊರೆಯುವ ನಿರೀಕ್ಷೆಯಲ್ಲಿದ್ದ ಸಂದರ್ಭದಲ್ಲಿ, ಬೇರೆ ರಾಜ್ಯಗಳಿಂದ ಭತ್ತವನ್ನು ತಂದು ಎಪಿಎಂಸಿ ಮಾರುಕಟ್ಟೆಯಲ್ಲಿ ಅನಧಿಕೃತವಾಗಿ ಮಾರಾಟ ಮಾಡುತ್ತಿರುವುದು ಸ್ಥಳೀಯ ರೈತರಿಗೆ ತೀವ್ರ ತೊಂದರೆಯಾಗಿದೆ.

ಇದರಿಂದಾಗಿ ಪ್ರತಿ ಕ್ವಿಂಟಾಲ್‌ಗೆ ₹4,000 ರಿಂದ ₹5,000 ವರೆಗೆ ದೊರೆಯುತ್ತಿದ್ದ ಭತ್ತದ ಬೆಲೆಯಲ್ಲಿ ಏಕಾಏಕಿ ಸುಮಾರು ₹1,000 ಇಳಿಕೆಯಾಗಿದ್ದು, ರೈತರಿಗೆ ಆರ್ಥಿಕ ನಷ್ಟ ಉಂಟಾಗುವುದರ ಜೊತೆಗೆ ತೀವ್ರ ನೋವು ತಂದಿದೆ.

ಈ ಹಿನ್ನೆಲೆಯಲ್ಲಿ ರೈತರ ಹಿತದೃಷ್ಟಿಯಿಂದ ಎಪಿಎಂಸಿ ಅಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಂಡು, ಹೊರರಾಜ್ಯಗಳಿಂದ ಅನಧಿಕೃತವಾಗಿ ಭತ್ತ ತಂದು ಮಾರಾಟ ಮಾಡುವುದನ್ನು ತಡೆಗಟ್ಟಬೇಕು ಹಾಗೂ ಸ್ಥಳೀಯ ರೈತರಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.
📲Get App