🔥 ट्रेंडिंग असोहा में 19 वर्षीय युवक ने पेंचकस से... જેથી કરી ગામલોકો માં સારી ચાર્રચાર્ક વ... रामायण फिल्म: भारत की सबसे महँगी प्रोड... धुरंधर 2 ने राष्ट्रीय चेन में सर्वकालि... दीवाली से पहले हरियाणा में वायु गुणवत्... हरियाणा सीएम ने गुरुग्राम में चूकों पर...
05 नव. 2026•
ગુજરાતી मराठी ਪੰਜਾਬੀ বাংলা

ರಾಯಚೂರು: ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡನೀಯ - ಬಿಜೆಪಿ ನಾಯಕರು ಕ್ಷಮೆಯಾಚಿಸಲು ಮಾಲೇಶ ಬೊಮ್ಮನಾಳ ಒತ್ತಾಯ

✍️ रिपोर्टर: Ningappa 🗓 05 नव. 2026, 08:18 AM 👁 19
शेयर करें: 💬 WhatsApp 📘 Facebook 𝕏 Post

ರಾಯಚೂರು ಪತ್ರಿಕಾ ಭವನದಲ್ಲಿ ಪರಿಶಿಷ್ಟ ಜಾತಿಗಳ ವಿಭಾಗದ ಮಾಧ್ಯಮ ವಕ್ತಾರ ಮಾಲೇಶ ಬೊಮ್ಮನಾಳ ಸುದ್ದಿಗೋಷ್ಠಿ - ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರ ಹೇಳಿಕೆಗಳಿಗೆ ತೀವ್ರ ಆಕ್ಷೇಪ - ಹೇಳಿಕೆ ಹಿಂಪಡೆದು ಬಹಿರಂಗ ಕ್ಷಮೆ ಕೋರಬೇಕು ಎಂದು ಆಗ್ರಹ - ಗಬ್ಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು 6 ಗಂಟೆ ಕಾಯಿಸಿದರೂ ಎಫ್ಐಆರ್ ದಾಖಲಿಸದ ಬಗ್ಗೆ ಆರೋಪ - ಪಿಎಸ್ಐ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹ

ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡನೀಯ - ಬಿಜೆಪಿ ನಾಯಕರು ಕ್ಷಮೆಯಾಚಿಸಲಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಮತ್ತು ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ. ಇಬ್ಬರೂ ನಾಯಕರು ತಮ್ಮ ಹೇಳಿಕೆಗಳನ್ನು ಹಿಂಪಡೆದು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಪರಿಶಿಷ್ಟ ಜಾತಿಗಳ ವಿಭಾಗದ ಮಾಧ್ಯಮ ವಕ್ತಾರ ಮಾಲೇಶ ಬೊಮ್ಮನಾಳ ಒತ್ತಾಯಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಸಾರ್ವಜನಿಕ ಜೀವನದಲ್ಲಿ ಪರಸ್ಪರ ಗೌರವ ಕಾಪಾಡಿಕೊಳ್ಳುವುದು ಜನಪ್ರತಿನಿಧಿಗಳ ಕರ್ತವ್ಯ. ಆದರೆ ಬಿಜೆಪಿ ನಾಯಕರು ರಾಜಕೀಯ ಟೀಕೆಯ ನೆಪದಲ್ಲಿ ವೈಯಕ್ತಿಕ ನಿಂದನೆಗೆ ಮುಂದಾಗಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸುತ್ತಿದ್ದಾರೆ. ಕಮಿಷನ್ ವ್ಯವಹಾರಕ್ಕೆ ಸಂಬಂಧಿಸಿದ ಆರೋಪಗಳನ್ನು ಎದುರಿಸುತ್ತಿರುವ ಅವರಿಗೆ ಕಾಂಗ್ರೆಸ್ ನಾಯಕರ ನೈತಿಕತೆ ಪ್ರಶ್ನಿಸುವ ನೈತಿಕ ಅರ್ಹತೆಯಿಲ್ಲ ಎಂದು ಟೀಕಿಸಿದರು.

ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಂಬರ್ಥದಲ್ಲಿ ಹೇಳಿಕೆ ನೀಡಿರುವುದು ಗಂಭೀರ ವಿಚಾರ. ಇಂತಹ ಪ್ರಚೋದನಾತ್ಮಕ ಮಾತುಗಳು ಸಮಾಜದಲ್ಲಿ ದ್ವೇಷ ಮತ್ತು ವೈಷಮ್ಯಕ್ಕೆ ಕಾರಣವಾಗುವ ಸಾಧ್ಯತೆಯಿದ್ದು, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿಜಯೇಂದ್ರ ಅವರ ಹೇಳಿಕೆ ಖಂಡಿಸಿ ಗಬ್ಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ತೆರಳಿದ್ದಾಗ ಸುಮಾರು ಆರು ಗಂಟೆಗಳ ಕಾಲ ಕಾಯಿಸಿದರೂ ಎಫ್ಐಆರ್ ದಾಖಲಿಸದೆ ಕೇವಲ ದೂರು ಸ್ವೀಕೃತಿಯ ಹಿಂಬರಹ ನೀಡಿ ಕಳುಹಿಸಲಾಗಿದೆ. ಪೊಲೀಸರು ದೂರು ದಾಖಲಿಸಿಕೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದರು.

ದೂರು ದಾಖಲಿಸಿಕೊಳ್ಳದ ಗಬ್ಬೂರು ಪೊಲೀಸ್ ಠಾಣೆಯ ಪಿಎಸ್ಐ ಅವರನ್ನು ಸೇವೆಯಿಂದ ವಜಾಗೊಳಿಸಬೇಕು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ರಾಜಕೀಯ ನಾಯಕರು ತಮ್ಮ ಮಾತು ಮತ್ತು ನಡವಳಿಕೆಯಿಂದ ಸಮಾಜಕ್ಕೆ ಮಾದರಿಯಾಗಬೇಕು. ಪ್ರಜಾಪ್ರಭುತ್ವದಲ್ಲಿ ಟೀಕೆ ಮತ್ತು ಭಿನ್ನಾಭಿಪ್ರಾಯಗಳಿಗೆ ಅವಕಾಶವಿದ್ದರೂ ಅವಹೇಳನಕಾರಿ ಭಾಷೆ ಹಾಗೂ ಪ್ರಚೋದನಾತ್ಮಕ ಹೇಳಿಕೆಗಳಿಗೆ ಅವಕಾಶ ಇರಬಾರದು ಎಂದರು.

ಸುದ್ದಿಗೋಷ್ಠಿಯಲ್ಲಿ ಪಿಎಲ್ ಡಿಬಿ ನಿರ್ದೇಶಕ ರಾಜಶೇಖರ ಪಾಟೀಲ್ ಹಾಗೂ ಗಿರಿಯಪ್ಪ ಉಪಸ್ಥಿತರಿದ್ದರು.
📲Get App