🔥 TRENDING No rain alert for Diwali and Dhanteras... West Bengal to Fill 7,190 Panchayat Va... Andhra Pradesh and Kerala Lead Ease of... Hindu groups rally in Damoh demanding... Floral Tribute Paid to Former CM Arjun... दीपावली पर प्रतिबंधित पटाखों और कार्बा...
05 Nov 2026•
ગુજરાતી मराठी ਪੰਜਾਬੀ বাংলা
Sports

ಪ್ರಥಮ ದಲಿತ ಬಂಡಾಯ ಸಮ್ಮೇಳನದ ಬಿತ್ತಿಪತ್ರ ಬಿಡುಗಡೆ

✍️ Reporter: Basavaraj pujari 🗓 05 Nov 2026, 06:15 AM 👁 22
Share: 💬 WhatsApp 📘 Facebook 𝕏 Post

ಬೀದರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಲಾಗುತ್ತಿರುವ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನದ ಬಿತ್ತಿಪತ್ರವನ್ನು ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕುಮಾರ್ ಅಪ್ಪೆ ಅವರು ಜಿಲ್ಲಾ ಕ

ಪ್ರಥಮ ದಲಿತ ಬಂಡಾಯ ಸಮ್ಮೇಳನದ ಬಿತ್ತಿಪತ್ರ ಬಿಡುಗಡೆ

ಬೀದರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಲಾಗುತ್ತಿರುವ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನದ ಬಿತ್ತಿಪತ್ರವನ್ನು ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕುಮಾರ್ ಅಪ್ಪೆ ಅವರು ಜಿಲ್ಲಾ ಕನ್ನಡ ಭವನದಲ್ಲಿ ಬಿಡುಗಡೆಗೊಳಿಸಿದರು.

ಸಮ್ಮೇಳನದ ನಿಯೋಜಿತ ಸರ್ವಾಧ್ಯಕ್ಷ ಮಾರುತಿ ಬೌದ್ಧೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚೆನ್ನಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮ್ಮೇಳನದ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ವಯಂಸೇವಕರು ಭಾಗವಹಿಸಿದ್ದರು.

ಬಿತ್ತಿಪತ್ರ ಬಿಡುಗಡೆ ಬಳಿಕ ಮಾತನಾಡಿದ ಸುರೇಶ ಚೆನ್ನಶೆಟ್ಟಿ ಅವರು, ಸಮ್ಮೇಳನದ ಯಶಸ್ಸಿಗಾಗಿ ವಿವಿಧ ಸಮಿತಿಗಳ ಮೂಲಕ ಕೈಗೊಂಡಿರುವ ಸಿದ್ಧತೆಗಳು ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಮಾಹಿತಿ ನೀಡಿದರು. ಎಲ್ಲ ಸಮಿತಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ನಿಯೋಜಿತ ಸರ್ವಾಧ್ಯಕ್ಷ ಮಾರುತಿ ಬೌದ್ಧೆ ಮಾತನಾಡಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನದ ಆಯೋಜನೆಗಾಗಿ ನಡೆಸುತ್ತಿರುವ ಪ್ರಯತ್ನಗಳನ್ನು ಶ್ಲಾಘಿಸಿದರು. ದಲಿತ ಬಂಡಾಯ ಚಳವಳಿಯ ಆಶಯ, ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಶೋಷಿತ ಸಮುದಾಯಗಳ ಧ್ವನಿಯನ್ನು ಸಾಹಿತ್ಯದ ಮೂಲಕ ಬಲಪಡಿಸಲು ಈ ಸಮ್ಮೇಳನ ಮಹತ್ವದ ವೇದಿಕೆಯಾಗಲಿದೆ ಎಂದರು.

ಬಿತ್ತಿಪತ್ರ ಬಿಡುಗಡೆಗೊಳಿಸಿದ ವಿನೋದ್ ಕುಮಾರ್ ಅಪ್ಪೆ ಮಾತನಾಡಿ, ಕನ್ನಡ ಸಾಹಿತ್ಯ ಲೋಕದಲ್ಲಿ ದಲಿತ ಬಂಡಾಯ ಸಾಹಿತ್ಯದ ಸಾಮಾಜಿಕ ಆಶಯಗಳಿಗೆ ಪ್ರತ್ಯೇಕ ವೇದಿಕೆ ಕಲ್ಪಿಸಿರುವುದು ಅಭಿನಂದನೀಯ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಈ ವಿನೂತನ ಪ್ರಯೋಗ ಮುಂದಿನ ದಿನಗಳಲ್ಲಿ ಇತರ ಜಿಲ್ಲೆಗಳಿಗೂ ಮಾದರಿಯಾಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಮ್ಮೇಳನದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಸಮ್ಮೇಳನವು ಸಮಾನತೆ, ಸ್ವಾಭಿಮಾನ ಹಾಗೂ ಸಾಮಾಜಿಕ ನ್ಯಾಯದ ಕುರಿತ ಚರ್ಚೆ ಮತ್ತು ಸಂವಾದಕ್ಕೆ ಮಹತ್ವದ ವೇದಿಕೆಯಾಗಲಿದೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ವಿಠಲದಾಸ ಪ್ಯಾಗೆ, ಫರ್ನಾಂಡೀಸ್ ಹಿಪ್ಪಳಗಾಂವ, ಗಾಲಿಬ್ ಹಾಸ್ಮಿ, ಪ್ರಶಾಂತ ದೊಡ್ಡಿ, ಬಾಬುರಾವ ದಾನಿ, ಶಂಭುಲಿಂಗ ವಾಲ್ದೊಡ್ಡಿ, ಸುಂದರರಾಜ ಮಾಳೆಗಾಂವ, ವಿಜಯಕುಮಾರ್ ಸೋನಾರೆ, ವಿನಯಕುಮಾರ ಮಾಳಗೆ, ಶಿವಶಂಕರ ಟೋಕರೆ, ಮಹೇಶ ಗೋರನಾಳಕರ್, ಡಾ.ದೇವಿದಾಸ ತುಮಕುಂಟೆ, ಸುಬ್ಬಣ್ಣ ಕರಕನಳ್ಳಿ, ದಾನಿ ಬಾಬುರಾವ್, ಸುಮಂತ್ ಕಟ್ಟಿಮನಿ,ಸಂತೋಷ ಜೋಳದಾಬಕೆ, ವಿಜಯಕುಮಾರ ಗಾಯಕವಾಡ, ಝರೆಪ್ಪಾ ಬೆಲ್ದಾರ, ಜಗದೀಶ್ವರ ಬಿರಾದರ, ಅರುಣ ಪಟೇಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
📲Get App