🔥 TRENDING Punjab’s Small Factories Boost Employm... Madhya Pradesh Resident Airlifted from... Banknotes to Adorn Annpurna Temple’s S... Sharda Kumari Rana Wins Jalore Panchay... Hit-and-run in India revealed as South... MS Dhoni Criticises CSK's Confusing Tr...
06 Nov 2026•
ગુજરાતી मराठी ਪੰਜਾਬੀ বাংলা

ತಿಡಿಗೋಳ ಗ್ರಾಮದಲ್ಲಿ ದೇವಸ್ಥಾನ ಪ್ರವೇಶ ಸಮಸ್ಯೆಗೆ ಸೌಹಾರ್ದಯುತ ಇತ್ಯರ್ಥ - ದಲಿತ ಸಮುದಾಯಕ್ಕೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ - ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ

✍️ Reporter: Ningappa 🗓 06 Nov 2026, 09:18 AM 👁 11
Share: 💬 WhatsApp 📘 Facebook 𝕏 Post

ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದೇವಸ್ಥಾನ ಪ್ರವೇಶ ಸಮಸ್ಯೆಗೆ ಜಿಲ್ಲಾಡಳಿತದ ಮಧ್ಯಸ್ಥಿಕೆಯಲ್ಲಿ ಸೌಹಾರ್ದಯುತ ಇತ್ಯರ್ಥ - ಜಿಲ್ಲಾಧಿಕಾರಿ ಪೂವಿತಾ ಎಸ್. ಅಧ್ಯಕ್ಷತೆಯಲ್ಲಿ ಶಾಂತಿ ಸಭೆ - ದಲಿತ ಸಮುದಾಯಕ್ಕೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ - ಶಿಕ್ಷಣ, ಉದ್ಯೋಗ, ಮೂಲಭೂತ ಸೌಕರ್ಯ ಕಲ್ಪಿಸಲು ಭರವಸೆ

ತಿಡಿಗೋಳ ಗ್ರಾಮದಲ್ಲಿ ದೇವಸ್ಥಾನ ಪ್ರವೇಶ ಸಮಸ್ಯೆಗೆ ಸೌಹಾರ್ದಯುತ ಇತ್ಯರ್ಥ

ರಾಯಚೂರು: ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದೇವಸ್ಥಾನ ಪ್ರವೇಶಕ್ಕೆ ಸಂಬಂಧಿಸಿದಂತೆ ಉಂಟಾಗಿದ್ದ ಸಮಸ್ಯೆಯನ್ನು ಜಿಲ್ಲಾಡಳಿತದ ಮಧ್ಯಸ್ಥಿಕೆಯಲ್ಲಿ ಸೌಹಾರ್ದಯುತವಾಗಿ ಇತ್ಯರ್ಥಪಡಿಸಲಾಗಿದೆ.

ಈ ಸಂಬಂಧ ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್. ರವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಶಾಂತಿ ಸಭೆಯಲ್ಲಿ ಗ್ರಾಮದ ಮುಖಂಡರು, ದಲಿತ ಸಮುದಾಯದ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಸಮಸ್ಯೆಯ ಕುರಿತು ಸಮಗ್ರವಾಗಿ ಚರ್ಚಿಸಿ, ಗ್ರಾಮದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮಾಜಿಕ ಸಾಮರಸ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಸಮಾಲೋಚನೆ ನಡೆಸಲಾಯಿತು.

ಸಭೆಯ ನಿರ್ಧಾರದಂತೆ ತಿಡಿಗೋಳ ಗ್ರಾಮದ ದಲಿತ ಸಮುದಾಯದವರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಯಿತು. ಈ ಮೂಲಕ ಸಂವಿಧಾನ ಪ್ರತಿಪಾದಿಸಿರುವ ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಪ್ರತಿಯೊಬ್ಬ ನಾಗರಿಕನ ಘನತೆಯ ಹಕ್ಕುಗಳನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಇದೇ ಸಂದರ್ಭದಲ್ಲಿ ದಲಿತ ಸಮುದಾಯದ ಶೈಕ್ಷಣಿಕ ಪ್ರಗತಿ, ಉದ್ಯೋಗಾವಕಾಶಗಳ ವಿಸ್ತರಣೆ ಹಾಗೂ ಗ್ರಾಮದಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕಲ್ಪನೆ ಕುರಿತು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಚರ್ಚಿಸಿದರು. ಈ ಸಂಬಂಧ ಸಂಬಂಧಪಟ್ಟ ಇಲಾಖೆಗಳ ಮೂಲಕ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ರಮವಹಿಸುವ ಕುರಿತು ಭರವಸೆ ನೀಡಲಾಯಿತು.

ಸಮಾಜದ ಎಲ್ಲ ವರ್ಗಗಳಿಗೂ ಸಮಾನ ಹಕ್ಕು, ಗೌರವ ಮತ್ತು ಅಭಿವೃದ್ಧಿಯ ಅವಕಾಶಗಳು ದೊರೆಯುವಂತೆ ಮಾಡುವುದು ಹಾಗೂ ಸಂವಿಧಾನಿಕ ಮೌಲ್ಯಗಳನ್ನು ಅನುಷ್ಠಾನಗೊಳಿಸುವುದು ಜಿಲ್ಲಾಡಳಿತದ ಬದ್ಧತೆಯಾಗಿದೆ.

ಗ್ರಾಮದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಂಡು, ಸಾಮಾಜಿಕ ಸಾಮರಸ್ಯ ಹಾಗೂ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಸಹಕರಿಸುವಂತೆ ಜಿಲ್ಲಾಡಳಿತದಿಂದ ಮನವಿ ಮಾಡಲಾಯಿತು.
📲Get App