🔥 TRENDING পুরুলিয়ায় বিজেপি শ্রমিক সংগঠনের নতুন... जयपुर जिले की पंचायत समिति किशनगढ़ रेन... Union Minister Alleges CJP Backed by '... Delhi's Toxic Winter Air Returns: Is t... ICC Lists Six Key Players to Watch at... India vs Nepal U19 Asia Cup 2026: Wher...
06 Nov 2026•
ગુજરાતી मराठी ਪੰਜਾਬੀ বাংলা

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರೋಧಿಸಿ ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ - 'ವೋಟ್ ಬಚಾವ್, ದೇಶ ಬಚಾವ್' ಘೋಷಣೆ - ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾ, ಎಸ್‌ಐಆರ್ ರದ್ದಿಗೆ ಆಗ್ರಹ

✍️ Reporter: Ningappa 🗓 06 Nov 2026, 12:39 PM 👁 10
Share: 💬 WhatsApp 📘 Facebook 𝕏 Post

ರಾಯಚೂರಿನಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟ, ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಬೃಹತ್ ಪ್ರತಿಭಟನೆ - ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಚುನಾವಣಾ ಆಯುಕ್ತರ ಅಣಕು ಪ್ರದರ್ಶನ - ಎಸ್‌ಐಆರ್ ರದ್ದು, ಹಿಂದಿನ ಪಟ್ಟಿಯಲ್ಲೇ ಜಿ.ಪಂ, ತಾ.ಪಂ ಚುನಾವಣೆಗೆ ಆಗ್ರಹ - ಮಾಜಿ ಸಚಿವ ಎನ್.ಎಸ್.ಬೋಸರಾಜು, ಜಿಲ್ಲಾಧ್ಯಕ್ಷ ಕೆ. ಶಾಂತಪ್ಪ ಭಾಗಿ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರೋಧಿಸಿ ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ

ರಾಯಚೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರೋಧಿಸಿ, 'ವೋಟ್ ಬಚಾವ್, ದೇಶ ಬಚಾವ್' ಘೋಷವಾಕ್ಯದಡಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟ, ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದರು.

ಈ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಅಣಕು ಪ್ರದರ್ಶನ ನಡೆಸಿ, ಘೋಷಣೆಗಳನ್ನು ಕೂಗುವ ಮೂಲಕ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಹಿಂದಿನ ಮತದಾರರ ಪಟ್ಟಿಯ ಆಧಾರದಲ್ಲಿಯೇ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಅಧಿಕಾರ ಪಡೆಯುವ ಉದ್ದೇಶದಿಂದ ಬಿಜೆಪಿ ಈ ಪ್ರಕ್ರಿಯೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
📲Get App