🔥 TRENDING High‑speed truck kills 10‑year‑old, in... Official Trailer of Punjabi Film 'Kadi... मनोहर सिंह भाटी ने बताया Madhya Pradesh CM Mohan Yadav urges fa... Director Niranjan's 'Mr Bhaarath' slat... Times of India Unveils Official Traile...
07 Nov 2026•
ગુજરાતી मराठी ਪੰਜਾਬੀ বাংলা

ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ: ಶಾಸಕ ಬಿ.ಪಿ. ಹರೀಶ್ ಭಾನುವಳ್ಳಿಯಲ್ಲಿ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮ ಉದ್ಘಾಟನೆ

✍️ Reporter: Viswanatha D R 🗓 07 Nov 2026, 04:44 PM 👁 22
Watch on: 📘 Facebook
Share: 💬 WhatsApp 📘 Facebook 𝕏 Post
ಹರಿಹರ: ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸಿ, ಜನರಿಗೆ ಅಗತ್ಯವಿರುವ ಸರ್ಕಾರಿ ಸೌಲಭ್ಯ ಹಾಗೂ ಸೇವೆಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಶಾಸಕ ಬಿ.ಪಿ. ಹರೀಶ್ ಸೂಚಿಸಿದರು.

ನವೆಂಬರ್ 7, 2026ರಂದು ಭಾನುವಳ್ಳಿ ಗ್ರಾಮದ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ಹರಿಹರ ತಾಲ್ಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದಾಗ ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹರಿಹರ ತಹಶೀಲ್ದಾರ್ ಸಂತೋಷ್ ಜಿ., ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಮಲತಾ, ಹರಿಹರ ವೃತ್ತ ನಿರೀಕ್ಷಕ ಸುರೇಶ್ ಸಗರಿ, ಮಲೇಬೆನ್ನೂರು ಪುರಸಭೆ ಮುಖ್ಯಾಧಿಕಾರಿ ರವಿಪ್ರಕಾಶ್ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
📲Get App