🔥 TRENDING हाथीडोल और बुढ़ार में सड़क पर रखे बड़े... दीपावली का त्यौहार मनाने के लिए हर कोई... Delhi steps up road‑cleaning drive as... शहडोल पुलिस का बड़ा खुलासा: 8 लाख 71 ह... Nirbhai Singh का निधन बिहार विधान परिषद भर्ती: 43 अभ्यर्थियो...
07 Nov 2026•
ગુજરાતી मराठी ਪੰਜਾਬੀ বাংলা

ಗಬ್ಬೂರಿನಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ - ಸಾರ್ವಜನಿಕರ ಸಮಸ್ಯೆಗಳಿಗೆ ಒಂದೇ ಸೂರಿನಡಿ ಪರಿಹಾರ ಕಲ್ಪಿಸುವುದು ಉದ್ದೇಶ - ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ

✍️ Reporter: Ningappa 🗓 07 Nov 2026, 04:03 PM 👁 19
Share: 💬 WhatsApp 📘 Facebook 𝕏 Post

ದೇವದುರ್ಗ ತಾಲೂಕಿನ ಗಬ್ಬೂರು ನಾಡಕಚೇರಿ ಆವರಣದಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ - ತಹಶೀಲ್ದಾರ್ ನಾಗಮ್ಮ ಎಂ. ಕಟ್ಟಿಮನಿ, ತಾಲೂಕು ಪಂಚಾಯತ್ ಇಒ ರಾಜೇಂದ್ರಕುಮಾರ್ ಅವರಿಂದ ಸಸಿಗೆ ನೀರೆಯುವ ಮೂಲಕ ಉದ್ಘಾಟನೆ - ವಿವಿಧ ಇಲಾಖೆಗಳ ಸೇವೆ ಒಂದೇ ವೇದಿಕೆಯಲ್ಲಿ, ಸ್ಥಳದಲ್ಲಿಯೇ ಪರಿಹಾರಕ್ಕೆ ಭರವಸೆ

ಗಬ್ಬೂರಿನಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ

ರಾಯಚೂರು: ಕರ್ನಾಟಕ ಸರ್ಕಾರದ ತಾಲೂಕು ಆಡಳಿತ ಹಾಗೂ ದೇವದುರ್ಗ ತಾಲೂಕು ಪಂಚಾಯತ್ ವತಿಯಿಂದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮವನ್ನು ಗಬ್ಬೂರು ನಾಡಕಚೇರಿ ಆವರಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ತಹಶೀಲ್ದಾರ್ ನಾಗಮ್ಮ ಎಂ. ಕಟ್ಟಿಮನಿ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರಕುಮಾರ್ ಅವರು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರಕುಮಾರ್, ಕರ್ನಾಟಕ ಸರ್ಕಾರ ಇಂತಹ ಜನಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಹೋಬಳಿ ವ್ಯಾಪ್ತಿಯ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದರು.

ತಹಶೀಲ್ದಾರ್ ನಾಗಮ್ಮ ಎಂ. ಕಟ್ಟಿಮನಿ ಮಾತನಾಡಿ, ತಾಲೂಕಿನಲ್ಲಿ ಈಗಾಗಲೇ ಮೂರು ಪ್ರಜಾಸೇವಾ ಆಂದೋಲನ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಸಾರ್ವಜನಿಕರು ವಾಸಿಸುವ ಸ್ಥಳಗಳಲ್ಲಿಯೇ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸರ್ಕಾರ ಈ ಕಾರ್ಯಕ್ರಮ ರೂಪಿಸಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲಿದ್ದಾರೆ. ಯಾವುದೇ ಸಮಸ್ಯೆಗಳಿದ್ದರೂ ಸಾರ್ವಜನಿಕರು ನಮ್ಮ ಗಮನಕ್ಕೆ ತಂದರೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸರ್ಕಾರದ ಇಂತಹ ಜನಪರ ಕಾರ್ಯಕ್ರಮಗಳು ಯಶಸ್ವಿಯಾಗಲು ಮಾಧ್ಯಮಗಳ ಪಾತ್ರವೂ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ವಿವಿಧ ಅಹವಾಲುಗಳನ್ನು ಸ್ವೀಕರಿಸಿ, ಅವುಗಳಿಗೆ ಪರಿಹಾರ ಕಲ್ಪಿಸುವ ಭರವಸೆ ನೀಡಲಾಯಿತು.

ಈ ಸಂದರ್ಭದಲ್ಲಿ ಗಬ್ಬೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ಅರುಣ್ ಕುಮಾರ್ ರಾಠೋಡ್, ಉಪತಹಶೀಲ್ದಾರ್ ಬಸವರಾಜ್, ಅಬಕಾರಿ ಇಲಾಖೆಯ ಉಪನಿರೀಕ್ಷಕ ಅನಿಲ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಿರುಮಲ ರೆಡ್ಡಿ, ಡಾ. ಸಿದ್ರಾಮೇಶ್ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ನಾಡಕಚೇರಿ ಮತ್ತು ಪಂಚಾಯತ್ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪಶು ಆಸ್ಪತ್ರೆ ಸಿಬ್ಬಂದಿ, ಪತ್ರಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
📲Get App