🔥 ट्रेंडिंग 15 ವರ್ಷದ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಟೈಮ... ಐರ್ಲೆಂಡ್ ಮಹಿಳಾ ಕ್ರಿಕೆಟ್ ತಂಡಕ್ಕೆ ಲಾರಾ ಡ... हजारीबाग के दनुआ घाटी में सड़क दुर्घटन... ದಕ್ಷಿಣ ಆಫ್ರಿಕಾ ಟೆಸ್ಟ್ ತಂಡಕ್ಕೆ ನಂ.1 ಸ್ಥ... ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ದಕ್ಷಿಣ ಆಫ್ರಿಕ... उमरी बाजारात अरुंद रस्ता व अतिक्रमण: द...
10 नव. 2026•
ગુજરાતી मराठी ਪੰਜਾਬੀ বাংলা

ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಜೆಡಿಎಸ್ ತೀವ್ರ ಖಂಡನೆ: ಬಹಿರಂಗ ಕ್ಷಮೆಯಾಚನೆಗೆ ಆಗ್ರಹಶಾಸಕಿ ಕರೆಮ್ಮ ಜಿ. ನಾಯಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ; ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಕೆ

✍️ रिपोर्टर: Khaja Hussain 🗓 10 नव. 2026, 03:03 PM 👁 22
शेयर करें: 💬 WhatsApp 📘 Facebook 𝕏 Post
**ದೇವದುರ್ಗ ಬ್ರೇಕಿಂಗ್ ನ್ಯೂಸ್**

# ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಜೆಡಿಎಸ್ ತೀವ್ರ ಖಂಡನೆ: ಬಹಿರಂಗ ಕ್ಷಮೆಯಾಚನೆಗೆ ಆಗ್ರಹ

### ಶಾಸಕಿ ಕರೆಮ್ಮ ಜಿ. ನಾಯಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ; ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಕೆ

**ದೇವದುರ್ಗ, ನ. 9:** ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ, ಸಚಿವರು ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ದೇವದುರ್ಗ ತಾಲೂಕು ಜನತಾದಳ (ಜಾತ್ಯತೀತ) ಘಟಕದ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ದೇವದುರ್ಗದ ಸಾರ್ವಜನಿಕ ಕ್ಲಬ್ ಮೈದಾನದಲ್ಲಿ ಜೆಡಿಎಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಜಮಾಯಿಸಿದರು. ಬಳಿಕ ಶಾಸಕಿಯವರ ನೇತೃತ್ವದಲ್ಲಿ ಅಲ್ಲಿಂದ ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ, ತಹಶೀಲ್ದಾರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ದೇವದುರ್ಗ ವಿಧಾನಸಭಾ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡು, ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿದರು.

ಮನವಿ ಪತ್ರದಲ್ಲಿ, ಗೃಹ ಸಚಿವರಾಗಿ ಕಾನೂನು ಮತ್ತು ಸುವ್ಯವಸ್ಥೆಯ ಜವಾಬ್ದಾರಿ ಹೊತ್ತಿರುವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಸ್ಥಾನಮಾನದ ಘನತೆಯನ್ನು ಮರೆತು, ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ 'ಹಳ್ಳಿ ಗುಗ್ಗು' ಎಂಬ ಅವಹೇಳನಕಾರಿ ಪದ ಬಳಕೆ ಮಾಡಿರುವುದು ಖಂಡನೀಯ ಎಂದು ಉಲ್ಲೇಖಿಸಲಾಗಿದೆ.

ಗ್ರಾಮೀಣ ಭಾಗದ ಜನರು ಹಾಗೂ ರೈತ ಸಮುದಾಯದ ಮತಗಳಿಂದಲೇ ಜನಪ್ರತಿನಿಧಿಗಳು ಅಧಿಕಾರಕ್ಕೆ ಬರುತ್ತಾರೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಜನರನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿರುವುದು ಕೇವಲ ಕುಮಾರಸ್ವಾಮಿ ಅವರಿಗೆ ಮಾಡಿದ ಅವಮಾನವಲ್ಲ, ಇಡೀ ಗ್ರಾಮೀಣ ಜನತೆ ಹಾಗೂ ರೈತ ಸಮುದಾಯಕ್ಕೆ ಮಾಡಿದ ಅಪಮಾನವಾಗಿದೆ ಎಂದು ಮನವಿಯಲ್ಲಿ ಆಕ್ಷೇಪಿಸಲಾಗಿದೆ.

ಶಾಸಕಿಯದ ಕರೆಮ್ಮ್ ಜಿ ನಾಯಕ ಮಾತನಾಡಿ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮುಖ್ಯಮಂತ್ರಿತ್ವದ ಅವಧಿಯಲ್ಲಿ ರೈತರ ಸಾಲಮನ್ನಾ ಮಾಡುವ ಮೂಲಕ ಲಕ್ಷಾಂತರ ರೈತ ಕುಟುಂಬಗಳಿಗೆ ನೆರವಾಗಿದ್ದಾರೆ. ಗ್ರಾಮೀಣ ಜನರ ಶ್ರಮದಿಂದಲೇ ದೇಶಕ್ಕೆ ಅನ್ನ ದೊರೆಯುತ್ತದೆ ಎಂಬುದನ್ನು ಸಚಿವರು ಮರೆಯಬಾರದು ಎಂದು ಹೇಳಿದರು


ಆದ್ದರಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆದು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ರಾಜ್ಯದ ಸಮಸ್ತ ರೈತರು ಹಾಗೂ ಗ್ರಾಮೀಣ ಜನರಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಜೆಡಿಎಸ್ ಮುಖಂಡರು ಒತ್ತಾಯಿಸಿದ್ದಾರೆ.

ಸಚಿವರು ತಕ್ಷಣ ಕ್ಷಮೆಯಾಚಿಸದಿದ್ದರೆ ಮುಂದಿನ ದಿನಗಳಲ್ಲಿ ದೇವದುರ್ಗ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲೂ ಜೆಡಿಎಸ್ ಪಕ್ಷದ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ದೇವದುರ್ಗ ವಿಧಾನಸಭಾ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ್, ದೇವದುರ್ಗ ತಾಲೂಕು ಜೆಡಿಎಸ್ ಅಧ್ಯಕ್ಷ ಬಸನಗೌಡ ದೇಸಾಯಿ, ಅರಕೇರಾ ತಾಲೂಕು ಜೆಡಿಎಸ್ ಅಧ್ಯಕ್ಷ ಸಿದ್ದಣ್ಣ ದಂಡಂಬಳಿ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ.**
📲Get App