🔥 TRENDING Students Forced to Wait Until 8 PM for... ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಅಹೋರಾತ... CM Dr. Mohan Yadav virtually inaugurat... MP MLA Umang Singhar Slams Govt for Me... Madhya Pradesh Suspends TNCP Joint Dir... बरहरवा के मुंशी पोखर में न्यू स्टार क्...
17 Nov 2026•
ગુજરાતી मराठी ਪੰਜਾਬੀ বাংলা

ವಿಧಾನಸೌಧದಲ್ಲಿ ಜಲಸಂಪನ್ಮೂಲ ಸಚಿವರ ಅಧ್ಯಕ್ಷತೆಯಲ್ಲಿ ಸಭೆ - ರಾಯಚೂರು, ಕೊಪ್ಪಳ ಜಿಲ್ಲೆಯ ಬೆಳೆ, ನೀರಿನ ಸ್ಥಿತಿಗತಿ ಬಗ್ಗೆ ಚರ್ಚೆ - ಬೆಳೆ ನಷ್ಟವಾಗದಂತೆ ನೀರು ಒದಗಿಸಲು, ಬೇಸಿಗೆಗೆ ಕುಡಿಯುವ ನೀರಿನ ಮುನ್ನೆಚ್ಚರಿಕೆಗೆ ಮನವಿ

✍️ Reporter: Ningappa 🗓 17 Nov 2026, 09:56 PM 👁 14
Share: 💬 WhatsApp 📘 Facebook 𝕏 Post

ವಿಧಾನಸೌಧದಲ್ಲಿ ಜಲಸಂಪನ್ಮೂಲ ಸಚಿವ ಚೆಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ - ರಾಯಚೂರು, ಕೊಪ್ಪಳ ಜಿಲ್ಲೆಯ ಬೆಳೆ, ನೀರಿನ ಸ್ಥಿತಿಗತಿ, ಗ್ರಾಮೀಣ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಚರ್ಚೆ - ಬೆಳೆ ನಷ್ಟವಾಗದಂತೆ ನೀರು ಒದಗಿಸಲು, ಬೇಸಿಗೆಗೆ ಕುಡಿಯುವ ನೀರಿನ ಮುನ್ನೆಚ್ಚರಿಕೆಗೆ ಮನವಿ

ವಿಧಾನಸೌಧದಲ್ಲಿ ಜಲಸಂಪನ್ಮೂಲ ಸಚಿವರ ಅಧ್ಯಕ್ಷತೆಯಲ್ಲಿ ಸಭೆ - ರಾಯಚೂರು, ಕೊಪ್ಪಳ ಜಿಲ್ಲೆಯ ನೀರಿನ ಸ್ಥಿತಿಗತಿ ಬಗ್ಗೆ ಚರ್ಚೆ

ಬೆಂಗಳೂರು: ರೈತರ ಬೆಳೆಗಳ ಪ್ರಸ್ತುತ ಸ್ಥಿತಿಗತಿ, ನೀರಿನ ಲಭ್ಯತೆ ಹಾಗೂ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಇಂದು ವಿಧಾನಸೌಧದಲ್ಲಿ ಜಲಸಂಪನ್ಮೂಲ ಸಚಿವರಾದ ಶ್ರೀ ಎನ್. ಚೆಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಶ್ರೀ ಶಿವರಾಜ ತಂಗಡಗಿ ಅವರೊಂದಿಗೆ ಭಾಗವಹಿಸಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಯ ವಾಸ್ತವ ಪರಿಸ್ಥಿತಿಯನ್ನು ಸಚಿವರ ಗಮನಕ್ಕೆ ತರಲಾಯಿತು.

ಈಗಾಗಲೇ ಬೆಳೆದಿರುವ ಬೆಳೆಗಳಿಗೆ ಅಗತ್ಯ ನೀರು ಸಮರ್ಪಕವಾಗಿ ಲಭ್ಯವಾಗದ ಹಿನ್ನೆಲೆಯಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳು, ನೀರಿನ ಅಭಾವದಿಂದ ಸಂಭವಿಸಬಹುದಾದ ಬೆಳೆ ನಷ್ಟ ಹಾಗೂ ಮುಂಬರುವ ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಕೊರತೆಯ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು.

ರೈತರು ಈಗಾಗಲೇ ಬೆಳೆದಿರುವ ಬೆಳೆಗಳಿಗೆ ಅಗತ್ಯ ಪ್ರಮಾಣದ ನೀರು ಒದಗಿಸಿ, ಬೆಳೆ ನಷ್ಟವಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಮುಂಬರುವ ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸಚಿವರು ಹಾಗೂ ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಹಂಪನಗೌಡ ಬಾದರ್ಲಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಸನಗೌಡ ಬಾದರ್ಲಿ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀ ಗೌರವ್ ಗುಪ್ತ, ನೀರಾವರಿ ಇಲಾಖೆಯ ಕಾರ್ಯದರ್ಶಿ ಶ್ರೀ ಸತ್ಯನಾರಾಯಣ, ಕೆಎನ್‌ಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕ ಶ್ರೀ ಬಿ.ಎಸ್. ರಾಠೋಡ್ ಸೇರಿದಂತೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಎಂಜಿನಿಯರ್‌ಗಳು ಉಪಸ್ಥಿತರಿದ್ದರು.
📲Get App