🔥 ट्रेंडिंग एमके स्टैलिन ने सोनी गांधी की पुस्तक ल... दिल्ली सरकार ने ट्रांसजेंडर समुदाय के... ಮುಳಬಾಗಿಲು TP ಮತ್ತು ZP ಚುನಾವಣೆಗಳಲ್ಲಿ ಸ್... IIIT दिल्ली की स्नातक रम्या यल्लाप्रगा... हरियाणा बनाम तमिलनाडु SMAT मैच लाइव स्... HTET 2026 पंजीकरण शुरू, ऑनलाइन आवेदन 2...
18 नव. 2026•
ગુજરાતી मराठी ਪੰਜਾਬੀ বাংলা

ದಿಢೀರ್ ಪಶು ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಪುಟ್ಟರಂಗಶೆಟ್ಟಿ - ಕರ್ತವ್ಯಕ್ಕೆ ಗೈರಾದ ಉಪನಿರ್ದೇಶಕರಿಗೆ ನೋಟಿಸ್ ನೀಡಲು ಸೂಚನೆ - ಅವ್ಯವಸ್ಥೆ, ಸ್ವಚ್ಛತೆಯಿಲ್ಲದ ಶೌಚಾಲಯ ಕಂಡು ಅಸಮಾಧಾನ

✍️ रिपोर्टर: Ningappa 🗓 18 नव. 2026, 09:28 PM 👁 21
शेयर करें: 💬 WhatsApp 📘 Facebook 𝕏 Post

ದಿಢೀರ್ ಪಶು ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಪುಟ್ಟರಂಗಶೆಟ್ಟಿ - ಬೆಂಗಳೂರಿನ ಕಂಟೋನ್ಮೆಂಟ್ ಪಶು ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ - ಕರ್ತವ್ಯಕ್ಕೆ ಗೈರಾದ ಉಪನಿರ್ದೇಶಕ ಡಾ. ಚಂದ್ರಶೇಖರ್ ಗೆ ನೋಟಿಸ್ ನೀಡಲು ಸೂಚನೆ - ಶಿಸ್ತು, ಸಮಯಪಾಲನೆಗೆ ಕಟ್ಟುನಿಟ್ಟಿನ ಸೂಚನೆ

ದಿಢೀರ್ ಪಶು ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಪುಟ್ಟರಂಗಶೆಟ್ಟಿ - ಕರ್ತವ್ಯಕ್ಕೆ ಗೈರಾದ ಉಪನಿರ್ದೇಶಕರಿಗೆ ನೋಟಿಸ್ ನೀಡಲು ಸೂಚನೆ

ಬೆಂಗಳೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಸಚಿವ ಪುಟ್ಟರಂಗಶೆಟ್ಟಿ ಅವರು ಬೆಂಗಳೂರಿನ ಕಂಟೋನ್ಮೆಂಟ್‌ನಲ್ಲಿರುವ ಪಶು ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳ ಕಾರ್ಯನಿರ್ವಹಣೆ ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.

ಆಸ್ಪತ್ರೆಯ ಸ್ಕ್ಯಾನಿಂಗ್ ಕೊಠಡಿ, ಶಸ್ತ್ರಚಿಕಿತ್ಸಾ ಕೊಠಡಿ ಹಾಗೂ ಔಷಧ ವಿತರಣಾ ವಿಭಾಗಗಳಿಗೆ ಭೇಟಿ ನೀಡಿದ ಸಚಿವರು, ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಅವ್ಯವಸ್ಥೆ, ನಿಂತುಹೋಗಿರುವ ಗಡಿಯಾರ ಹಾಗೂ ಸ್ವಚ್ಛತೆಯಿಲ್ಲದ ಶೌಚಾಲಯಗಳನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ, ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗದ ಉಪನಿರ್ದೇಶಕ ಡಾ. ಚಂದ್ರಶೇಖರ್ ಅವರ ಗೈರುಹಾಜರಿಯನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಕರ್ತವ್ಯ ನಿರ್ಲಕ್ಷ್ಯದ ಕುರಿತು ನೋಟಿಸ್ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವುದರ ಜೊತೆಗೆ ಜಾನುವಾರುಗಳಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು. ಇಲಾಖೆಯಲ್ಲಿ ಶಿಸ್ತು, ಸಮಯಪಾಲನೆ ಹಾಗೂ ಜವಾಬ್ದಾರಿಯುತ ಕಾರ್ಯನಿರ್ವಹಣೆ ನಮ್ಮ ಆದ್ಯತೆಯಾಗಬೇಕು ಎಂದು ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಚಿವರ ಭೇಟಿಯ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಆಯುಕ್ತ ಲಿಂಗರಾಜು, ಆಪ್ತ ಕಾರ್ಯದರ್ಶಿ ಡಾ. ರಾಜೀವ್ ಎನ್. ಕೂಲೇರ ಹಾಗೂ ಆಸ್ಪತ್ರೆಯ ಪಶುವೈದ್ಯರು ಉಪಸ್ಥಿತರಿದ್ದರು.
📲Get App