ನಮ್ಮ ಬಸವಣ್ಣನವರ ಗೌರವಕ್ಕೆ ಧಕ್ಕೆಯಾದರೆ ಸರ್ಕಾರ ಸುಮ್ಮನಿರಲ್ಲ - ಬಸವಣ್ಣನವರ ಭಾವಚಿತ್ರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪಾರ್ಚನೆ - ಬಸವ ಮಂಟಪ ಲೇಖಕ ರವಿ ಹಂಜ್ ವಿರುದ್ಧ ಎಫ್ಐಆರ್
ನಮ್ಮ ಬಸವಣ್ಣನವರ ಗೌರವಕ್ಕೆ ಧಕ್ಕೆಯಾದರೆ ಸರ್ಕಾರ ಸುಮ್ಮನಿರಲ್ಲ - ಬಸವಣ್ಣನವರ ಭಾವಚಿತ್ರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪಾರ್ಚನೆ - ಬಸವ ಮಂಟಪ ಪುಸ್ತಕ ಲೇಖಕ ರವಿ ಹಂಜ್ ವಿರುದ್ಧ ಎಫ್ಐಆರ್ - ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕಠಿಣ ಕಾನೂನು ಕ್ರಮಕ್ಕೆ ನಿರ್ಧಾರ
ನಮ್ಮ ಬಸವಣ್ಣನವರ ಗೌರವಕ್ಕೆ ಧಕ್ಕೆಯಾದರೆ ಸರ್ಕಾರ ಸುಮ್ಮನಿರಲ್ಲ - ಬಸವಣ್ಣನವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪಾರ್ಚನೆ
ಬೆಂಗಳೂರು:
ಕರ್ನಾಟಕದ ಸಾಂಸ್ಕೃತಿಕ ನಾಯಕ, ಕ್ರಾಂತಿಕಾರಿ ಮಾರ್ಗದ ಹರಿಕಾರ ಜಗಜ್ಯೋತಿ ಬಸವಣ್ಣನವರು ನಮ್ಮೆಲ್ಲರ ಅಸ್ಮಿತೆ. 12ನೇ ಶತಮಾನದಲ್ಲಿಯೇ ಕರ್ನಾಟಕದ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಇತಿಹಾಸಕ್ಕೆ ಹೊಸ ದಿಕ್ಕು ನೀಡಿದ ಮಹಾನ್ ಚೇತನರು ವಿಶ್ವಗುರು ಬಸವಣ್ಣ.
ಜಗತ್ತಿಗೆ ಮೊಟ್ಟಮೊದಲ ಬಾರಿಗೆ ಅನುಭವ ಮಂಟಪದ ಮೂಲಕ ಸಂಸತ್ತು ಪರಿಕಲ್ಪನೆಯನ್ನು ನೀಡಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ಸಮಾನತೆ, ಕಾಯಕ, ದಾಸೋಹ, ಮಾನವೀಯತೆ, ಸಾಮಾಜಿಕ ನ್ಯಾಯ ಹಾಗೂ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಪ್ರತಿಪಾದಿಸಿದ ಮಹಾನ್ ಮಾನವತಾವಾದಿ ನಮ್ಮ ಬಸವಣ್ಣನವರು.
ನಮ್ಮ ಸರ್ಕಾರವು ಬಸವಣ್ಣನವರ ಇದೇ ಕಾಯಕ ತತ್ವಗಳ ಅಡಿಯಲ್ಲಿ ಜನಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಆಶಯಗಳನ್ನು ಸದಾ ಗೌರವಿಸುತ್ತಾ ಪಾಲಿಸುತ್ತಾ ಬಂದಿದೆ.
ಆದರೆ, ಇದೀಗ ರವಿ ಹಂಜ್ ಎನ್ನುವ ಲೇಖಕ ಬಸವ ಮಂಟಪ ಎಂಬ ವಿವಾದಿತ ಪುಸ್ತಕವನ್ನು ಬರೆದು, ಬಸವಣ್ಣನವರ ಬಗ್ಗೆ ಅತ್ಯಂತ ಅವಹೇಳನಕಾರಿಯಾಗಿ ನಿಂದಿಸಿರುವುದು ಖಂಡನೀಯ. ಇಡೀ ಮಾನವ ಕುಲಕ್ಕೆ ದಾರಿದೀಪವಾದಂತಹ ಮಹಾನ್ ಸಮಾಜ ಸುಧಾರಕನಿಗೆ ಮಾಡಿರುವ ಈ ಅವಮಾನವನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.
ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ನಾಡಿನ ಸಾಂಸ್ಕೃತಿಕ ನಾಯಕನಿಗೆ ಅಪಮಾನ ಎಸಗಿದ ಲೇಖಕ ರವಿ ಹಂಜ್ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ. ನಾಡಿನ ಮಹನೀಯರ ಬಗ್ಗೆ ಹಗುರವಾಗಿ ಬರೆಯುವ ಮತ್ತು ಸಮಾಜದ ಶಾಂತಿ ಕದಡುವ ಇಂತಹ ಕಿಡಿಗೇಡಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ, ಸರ್ಕಾರ ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ.
ಬಸವಣ್ಣನವರ ತತ್ವಗಳಿಗೆ ಹಾಗೂ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಪ್ರಯತ್ನಗಳನ್ನು ನಮ್ಮ ಸರ್ಕಾರ ನಿರ್ದಾಕ್ಷಿಣ್ಯವಾಗಿ ಮಟ್ಟಹಾಕಲಿದೆ ಎಂದರು