🔥 TRENDING Vijay Sethupathi Becomes First South I... Ayan Mukerji Says Financial Constraint... Assam CM Himanta Biswa Sarma vows to s... Jiiva's 'Thagappan' Gets U/A 13+ Certi... Assam CM Inaugurates ₹750-Crore Pharma... Salman Khan Movie Shoot Causes Traffic...
25 Nov 2026•
ગુજરાતી मराठी ਪੰਜਾਬੀ বাংলা
Politics

ಕೆಪಿಸಿಸಿ ಅಧ್ಯಕ್ಷರ ಭೇಟಿ ಮಾಡಿದ ಜಾನಸನ್ ಘೋಡೆ

✍️ Reporter: Basavaraj pujari 🗓 25 Nov 2026, 06:47 AM 👁 13
Share: 💬 WhatsApp 📘 Facebook 𝕏 Post

ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ಯುವಕರಿಗೆ ಆದ್ಯತೆ: ಮನವಿ ಬೀದರ್: ಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯ ಟಿಕೆಟ್ ಹಂಚಿಕೆಯಲ್ಲಿ ಯುವಕರಿಗೆ ಆದ್ಯತೆ ನೀಡಬೇಕು ಎಂದು ಜಲ್ಲೆಯವರೇ ಆದ ಕಾಂಗ್ರೆಸ್ ಕಿಸಾನ್ ವ

ಕೆಪಿಸಿಸಿ ಅಧ್ಯಕ್ಷರ ಭೇಟಿ ಮಾಡಿದ ಜಾನಸನ್ ಘೋಡೆ

ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ಯುವಕರಿಗೆ ಆದ್ಯತೆ: ಮನವಿ

ಬೀದರ್: ಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯ ಟಿಕೆಟ್ ಹಂಚಿಕೆಯಲ್ಲಿ ಯುವಕರಿಗೆ ಆದ್ಯತೆ ನೀಡಬೇಕು ಎಂದು ಜಲ್ಲೆಯವರೇ ಆದ ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿದ ಅವರು, ಯುವಕರಿಗೆ ಪ್ರಾತಿನಿಧ್ಯ ಕಲ್ಪಿಸುವ ಅಗತ್ಯವನ್ನು ಮನವರಿಕೆ ಮಾಡಿದರು.
ಯುವಕರು ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪಕ್ಷವನ್ನು ಬೇರು ಮಟ್ಟದಿಂದ ಬಲಪಡಿಸಲು ಶ್ರಮಿಸುತ್ತಿದ್ದಾರೆ. ಹೀಗಾಗಿ ಯುವಕರ ರಾಜಕೀಯ ಬೆಳವಣಿಗೆಗೆ ಅವಕಾಶ ನೀಡಬೇಕು ಎಂದು ಕೋರಿದರು.
ಕೆಪಿಸಿಸಿ ಅಧ್ಯಕ್ಷರು ತಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಘೋಡೆ ತಿಳಿಸಿದ್ದಾರೆ
📲Get App