🔥 TRENDING Vedant Sehwag Claims 7 Wickets as Delh... Bikash Singh to Launch Book on Assam’s... खरगोन के बड़वाह में सट्टे के अवैध कारो... Assam to Host Three New Airtel Data Ce... Assam Transporters Launch Indefinite S... Jharkhand CM tables resolution against...
26 Nov 2026•
ગુજરાતી मराठी ਪੰਜਾਬੀ বাংলা
Politics

ರೈತರ ಸಾಲಮನ್ನಾ, ಕೃಷಿ ಕಲ್ಯಾಣ ಪ್ರಾಧಿಕಾರ ರಚನೆಗೆ ಆಗ್ರಹ; ಎಸ್‌ಐಆರ್ ರದ್ದುಪಡಿಸಿ ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಲು ಒತ್ತಾಯ

✍️ Reporter: Basavaraj pujari 🗓 26 Nov 2026, 04:49 PM 👁 28
Share: 💬 WhatsApp 📘 Facebook 𝕏 Post

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಂವಿಧಾನ ದಿನದಂದು ಜಂಟಿ ಸಮಿತಿಯಿಂದ ಹಕ್ಕೊತ್ತಾಯ ಮನವಿ ಬೀದರ್: ರೈತರ ಹಾಗೂ ಕೃಷಿ ಕಾರ್ಮಿಕರ ಸಂಪೂರ್ಣ ಸಾಲಮನ್ನಾ ಮಾಡಬೇಕು, ಕೇಂದ್ರ ಮಟ್ಟದಲ್ಲಿ ರೈತರ ಕ್ಷೇಮಾಭಿವೃದ್ಧಿ ಪ್ರಾಧಿ

ರೈತರ ಸಾಲಮನ್ನಾ, ಕೃಷಿ ಕಲ್ಯಾಣ ಪ್ರಾಧಿಕಾರ ರಚನೆಗೆ ಆಗ್ರಹ; ಎಸ್‌ಐಆರ್ ರದ್ದುಪಡಿಸಿ ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಲು ಒತ್ತಾಯ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಂವಿಧಾನ ದಿನದಂದು ಜಂಟಿ ಸಮಿತಿಯಿಂದ ಹಕ್ಕೊತ್ತಾಯ ಮನವಿ

ಬೀದರ್: ರೈತರ ಹಾಗೂ ಕೃಷಿ ಕಾರ್ಮಿಕರ ಸಂಪೂರ್ಣ ಸಾಲಮನ್ನಾ ಮಾಡಬೇಕು, ಕೇಂದ್ರ ಮಟ್ಟದಲ್ಲಿ ರೈತರ ಕ್ಷೇಮಾಭಿವೃದ್ಧಿ ಪ್ರಾಧಿಕಾರ ರಚಿಸಬೇಕು, ಎಸ್‌ಐಆರ್ ಪ್ರಕ್ರಿಯೆ ರದ್ದುಪಡಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಎಸ್‌ಐಆರ್ ವಿರೋಧಿ ಒಕ್ಕೂಟ ಮತ್ತು ಎದ್ದೇಳು ಕರ್ನಾಟಕ ಜಂಟಿ ಸಮಿತಿ, ಬೀದರ್ ವತಿಯಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಲಾಯಿತು.

ನಾಗರಿಕ ಮತಕಾವಲು ಸಮಿತಿಯ ಗೌರವಾಧ್ಯಕ್ಷರಾದ ಡಾ. ಮಕ್ಸೂದ್ ಚಂದಾ ಅವರು ಮಾತನಾಡಿ ನವೆಂಬರ್ 26ರ ಸಂವಿಧಾನ ದಿನಾಚರಣೆಯ ಅಂಗವಾಗಿ ಬೀದರ್ ಸಹಾಯಕ ಆಯುಕ್ತರ ಮೂಲಕ ರಾಷ್ಟ್ರಪತಿಗಳಿಗೆ ಸಲ್ಲಿಸಿದ ಈ ಹಕ್ಕೊತ್ತಾಯ ಮತ್ತು ಪ್ರತಿರೋಧ ಅರ್ಜಿಯಲ್ಲಿ ದೇಶದ ರೈತರ ಸಮಸ್ಯೆಗಳು, ಕೃಷಿ ಕ್ಷೇತ್ರದ ಬಿಕ್ಕಟ್ಟು ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಹಲವು ಗಂಭೀರ ವಿಷಯಗಳನ್ನು ಪ್ರಸ್ತಾಪಿಸಲಾಯಿತು.

ಬಾಬುರಾವ ಹೊನ್ನಾ ಅವರು ಮಾತನಾಡಿ ಜಾಗತೀಕರಣ ಮತ್ತು ಖಾಸಗೀಕರಣದ ಪರಿಣಾಮವಾಗಿ ಕೃಷಿ ಕ್ಷೇತ್ರ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ರೈತರು, ಕೃಷಿ ಕಾರ್ಮಿಕರು ಹಾಗೂ ಇತರ ಕಾರ್ಮಿಕರು ಪ್ರತಿವರ್ಷ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. 1991ರಿಂದ ಆರಂಭವಾದ ಖಾಸಗೀಕರಣದ ಪರಿಣಾಮವಾಗಿ ಐದು ಲಕ್ಷಕ್ಕೂ ಅಧಿಕ ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ದೇಶದಲ್ಲಿ ಸಂಪತ್ತಿನ ಕೇಂದ್ರೀಕರಣ, ನಿರುದ್ಯೋಗ ಮತ್ತು ಬಡತನ ಹೆಚ್ಚಾಗುತ್ತಿದ್ದು, ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳು ಇದಕ್ಕೆ ಕಾರಣವಾಗಿವೆ ಎಂದು ಆರೋಪಿಸಿದ್ದರು.

ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ಓಂಪ್ರಕಾಶ ರೊಟ್ಟೆ ಅವರು ಮಾತನಾಡಿ ಅವರು ಕೇಂದ್ರ ಸರ್ಕಾರ ಸುಮಾರು 30 ದೇಶಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಂಡಿರುವುದನ್ನು ಪ್ರಶ್ನಿಸಿರುವ ಸಮಿತಿಯು, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರವು ಭಾರತೀಯ ಉತ್ಪನ್ನಗಳ ಮೇಲೆ ಶೇ.18ರಷ್ಟು ಸುಂಕ ವಿಧಿಸುತ್ತಿದ್ದರೆ, ಅಮೆರಿಕದಿಂದ ಆಮದಾಗುವ ಉತ್ಪನ್ನಗಳಿಗೆ ಭಾರತ ಶೂನ್ಯ ಸುಂಕ ವಿಧಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ಷೇಪಿಸಿದೆ.

ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಮಸೂದೆ ಹಾಗೂ ಬೀಜ ಕಾಯ್ದೆಗಳು ಬಹುರಾಷ್ಟ್ರೀಯ ಕಂಪನಿಗಳಿಗೆ ಅನುಕೂಲವಾಗುವಂತಿವೆ. ಇದರಿಂದ ಮುಂದಿನ ದಿನಗಳಲ್ಲಿ ಜನಸಾಮಾನ್ಯರು ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.

ಬಹುರಾಷ್ಟ್ರೀಯ ಕಂಪನಿಗಳ ಮಾಲೀಕರ ಸಾಲಗಳನ್ನು ಎನ್‌ಪಿಎ ಹೆಸರಿನಲ್ಲಿ ಮನ್ನಾ ಮಾಡಲಾಗುತ್ತಿರುವಾಗ ರೈತರು ಮತ್ತು ಕೃಷಿ ಕಾರ್ಮಿಕರ ಸಾಲವನ್ನೂ ಸಂಪೂರ್ಣವಾಗಿ ಮನ್ನಾ ಮಾಡಬೇಕು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಕೇಂದ್ರ ಮಟ್ಟದಲ್ಲಿ ರೈತರ ಕ್ಷೇಮಾಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಒತ್ತಾಯಿಸಲಾಯಿತು.

ಇದೇ ವೇಳೆ, ಕೇಂದ್ರ ಚುನಾವಣಾ ಆಯೋಗವು ಸ್ವತಂತ್ರವಾಗಿ ಕಾರ್ಯನಿರ್ವಹಿಸದೆ ಕೇಂದ್ರ ಸರ್ಕಾರದ ಕೈಗೊಂಬೆಯAತೆ ವರ್ತಿಸುತ್ತಿದೆ ಎಂದು ಆರೋಪಿಸಲಾಗಿದೆ. ಬಿಹಾರ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ. ದೇಶಾದ್ಯಂತ ಹತ್ತು ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆತಂಕ ವ್ಯಕ್ತಪಡಿಸಿರುವ ಸಮಿತಿಯು, ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣ ರದ್ದುಪಡಿಸಬೇಕು ಹಾಗೂ ಕರ್ನಾಟಕದಲ್ಲಿ ಪ್ರಕಟಿಸಿರುವ ಅಂತಿಮ ಎಸ್‌ಐಆರ್ ಮತದಾರರ ಪಟ್ಟಿಯನ್ನೂ ರದ್ದುಪಡಿಸಬೇಕು ಎಂದು ಆಗ್ರಹಿಸಿದೆ.

ಮತದಾರರ ಪಟ್ಟಿಯಲ್ಲಿನ ಅಕ್ರಮಗಳಿಗೆ ಹೊಣೆಗಾರರಾದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಅವರ ಸಹಚರರನ್ನು ಹುದ್ದೆಯಿಂದ ತೆಗೆದುಹಾಕಬೇಕು. ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಹಾಗೂ ಹುದ್ದೆಗೆ ಸಂಬAಧಿಸಿದAತೆ 2023ರಲ್ಲಿ ಮಾಡಲಾದ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

2020ರಲ್ಲಿ ಜಾರಿಗೆ ತರಲು ಉದ್ದೇಶಿಸಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸಿದ ಹೋರಾಟದ ಮುಂದುವರಿದ ಭಾಗವಾಗಿ, ಸಂವಿಧಾನ ದಿನದಂದು ಈ ಹಕ್ಕೊತ್ತಾಯ ಮತ್ತು ಪ್ರತಿರೋಧ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಜಂಟಿ ಸಮಿತಿ ತಿಳಿಸಿದೆ.

ಈ ಸಂದರ್ಭದಲಿ ನಿಜಾಮೋದ್ದಿನ್, ಸಂತೋಷ ಜೋಳದಾಪಕೆ, ನಜೀರ್ ಅಹ್ಮದ್ ಚೊಂಡಿ, ಪ್ರಭು ಹೊಚಕನಳ್ಳಿ, ಪ್ರಭು ತಗಣಿಕರ್, ಎಂ.ಡಿ. ಖಮರ್ ಪಟೇಲ್, ಎಂ.ಡಿ. ಶಫಾಯತ್ ಅಲಿ, ಶಫಿಯೋದ್ದಿನ್ ಗೋಲ್ಡ್, ಮಾಣಿಕ ಖಾನಾಪುರ ಸೇರಿದಂತೆ ಜಂಟಿ ಸಮಿತಿಯ ಮುಖಂಡರು ಉಪಸ್ಥಿತರಿದ್ದರು.
📲Get App