🔥 ट्रेंडिंग ਪੰਜਾਬ ਅਤੇ ਹਰਿਆਣਾ ਹਾਈ ਕੋਰਟ ਵਿੱਚ 18 ਵਕੀਲ... संघ स्वास्थ्य मंत्रालय ने संविधान दिवस... सोलापूर सदर बाजार पोलीस ठाण्यात नागरिक... बिहार में फर्जी दस्तावेज़ों से जमीन हड... त्रिपुरा में शुरू हुए नगर निगम चुनाव हिमाचल प्रदेश में पानी की बिक्री ₹100...
27 नव. 2026•
ગુજરાતી मराठी ਪੰਜਾਬੀ বাংলা
राजनीति

ಬೆಲೆ ಏರಿಕೆ, ಕಬ್ಬಿಗೆ ಸೂಕ್ತ ಬೆಲೆ ನಿಗದಿಗೆ ಆಗ್ರಹಿಸಿ ಬಿಜೆಪಿ ಬೃಹತ್ ಪಾದಯಾತ್ರೆ; ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

✍️ रिपोर्टर: Basavaraj pujari 🗓 27 नव. 2026, 09:54 AM 👁 25
शेयर करें: 💬 WhatsApp 📘 Facebook 𝕏 Post

ಈಶ್ವರಸಿಂಗ್ ಠಾಕೂರ್ ನೇತೃತ್ವದಲ್ಲಿ ಚಿಲ್ಲರ್ಗಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಬೀದರ್: ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು ಹಾಗೂ ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನಿಗದಿಪಡಿಸ

ಬೆಲೆ ಏರಿಕೆ, ಕಬ್ಬಿಗೆ ಸೂಕ್ತ ಬೆಲೆ ನಿಗದಿಗೆ ಆಗ್ರಹಿಸಿ ಬಿಜೆಪಿ ಬೃಹತ್ ಪಾದಯಾತ್ರೆ; ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ
ಈಶ್ವರಸಿಂಗ್ ಠಾಕೂರ್ ನೇತೃತ್ವದಲ್ಲಿ ಚಿಲ್ಲರ್ಗಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ

ಬೀದರ್: ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು ಹಾಗೂ ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಬೀದರ್ ಕ್ಷೇತ್ರದ ಮುಖಂಡ ಈಶ್ವರಸಿಂಗ್ ಠಾಕೂರ್ ಅವರ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಯಿತು.

ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಚಿಲ್ಲರ್ಗಿ ಗ್ರಾಮದಿಂದ ಆರಂಭವಾದ ಪಾದಯಾತ್ರೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ಭಾಗವಹಿಸಿ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಬೆಲೆ ಏರಿಕೆ ಹಾಗೂ ರೈತರ ಸಮಸ್ಯೆಗಳ ಕುರಿತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ದಿನದಿಂದ ದಿನಕ್ಕೆ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆಗಳಿಂದ ಜನಸಾಮಾನ್ಯರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕುಟುಂಬ ನಿರ್ವಹಣೆ ಕಷ್ಟಕರವಾಗಿದ್ದು, ಬೆಲೆ ಏರಿಕೆಗೆ ಕಡಿವಾಣ ಹಾಕುವ ಮೂಲಕ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕಬ್ಬು ಬೆಳೆಗಾರರು ಬೆಳೆ ಬೆಳೆಯಲು ಅಪಾರ ಶ್ರಮ ಹಾಗೂ ಹಣ ಹೂಡಿಕೆ ಮಾಡುತ್ತಿದ್ದಾರೆ. ಆದರೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುತ್ತಿಲ್ಲ. ಆದ್ದರಿಂದ ಕಬ್ಬಿಗೆ ಸೂಕ್ತ ಹಾಗೂ ನ್ಯಾಯಯುತ ಬೆಲೆ ನಿಗದಿಪಡಿಸಿ ರೈತರ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಈಶ್ವರಸಿಂಗ್ ಠಾಕೂರ್, ರೈತರ ಹಿತಾಸಕ್ತಿ ಮತ್ತು ಜನಸಾಮಾನ್ಯರ ಬದುಕಿನ ಸಮಸ್ಯೆಗಳ ಪರಿಹಾರಕ್ಕಾಗಿ ಬಿಜೆಪಿ ನಿರಂತರವಾಗಿ ಧ್ವನಿ ಎತ್ತುತ್ತಿದೆ. ಸರ್ಕಾರ ಜನರ ಹಾಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯ ಒದಗಿಸಬೇಕು. ಬೇಡಿಕೆಗಳು ಈಡೇರುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಶೈಲೇಂದ್ರ ಬೆಲ್ದಾಳೆ, ಮಾಜಿ ಸಂಸದ ಭಗವಂತ ಖೂಬಾ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಬಾಬು ವಾಲಿ, ಬಾಬು ಮಲ್ಕಾಪೂರ, ಪೀರಪ್ಪ ಔರಾದೆ, ರಾಜೇಂದ್ರ ಪೂಜಾರಿ, ಲುಂಬಿಣಿ ಗೌತಮ, ಉಲ್ಲಾಸಿನಿ ಮುದಾಳೆ, ಗೀತಾ ಠಾಕೂರ್, ಅಶೋಕ ಪಾಟೀಲ್ ಅಲಿಯಾಬಾದ, ದೀಪಕ ಗಾದಗೆ, ರಾಜಕುಮಾರ ಪಾಟೀಲ್ ನೇಮತಾಬಾದ, ಉಪೇಂದ್ರ ದೇಶಪಾಂಡೆ, ನಿಜಲಿಂಗಪ್ಪ ಪಾಟೀಲ್, ನಾಗೇಂದ್ರ ಪಾಟೀಲ್, ಸುರಜಸಿಂಗ್ ಠಾಕೂರ್, ಭೀಮಣ್ಣ ಚಿಕಪೇಟ, ಪ್ರಕಾಶ ಕೋಳಿ, ರವಿ ನಿಜಾಂಪೂರೆ, ಜೈಭೀಮ ಬಂಧು ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
📲Get App