🔥 TRENDING Union Health Minister Mansukh Mandaviy... Kia India to Invest $2 Billion in New... Study Finds Shimla Monkeys Prefer Ice... Himachal High Court Bars Post‑Graduati... Himachal Pradesh Receives 306,000 Appl... Uttarakhand’s Kashi Pur & Rudrapur Top...
12 Nov 2026•
ગુજરાતી मराठी ਪੰਜਾਬੀ বাংলা

ದೇವದುರ್ಗದಲ್ಲಿ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ಅಧಿಕಾರಿಗಳಿಗೆ PSR ಮಾನವ ಹಕ್ಕುಗಳ ಸಂರಕ್ಷಣಾ ಪರಿಷತ್ ಮನವಿ!

✍️ Reporter: MAHAMAD WALI QURESHI 🗓 12 Nov 2026, 01:04 PM 👁 13
Share: 💬 WhatsApp 📘 Facebook 𝕏 Post
ದೇವದುರ್ಗದಲ್ಲಿ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ಅಧಿಕಾರಿಗಳಿಗೆ PSR ಮಾನವ ಹಕ್ಕುಗಳ ಸಂರಕ್ಷಣಾ ಪರಿಷತ್ ಮನವಿ!

ನೀಡ್ 24 ನ್ಯೂಸ್

ದೇವದುರ್ಗ, ನ.12: ಪಟ್ಟಣದ ಬಾಪೂಜಿ ವಾರ್ಡ್‌ನಲ್ಲಿ ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಈ ಕುರಿತು ಸಂಬಂಧಪಟ್ಟ ವಿದ್ಯುತ್ ಇಲಾಖೆಯ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಪಟ್ಟಣದ ಬಾಪೂಜಿ ವಾರ್ಡ್‌ನಲ್ಲಿ ವಿದ್ಯುತ್ ಕಂಬಗಳ ಸಮಸ್ಯೆಯಿಂದ ಸಾರ್ವಜನಿಕರಿಗೆ ಅಪಾಯ ಎದುರಾಗುವ ಸಾಧ್ಯತೆಯಿದ್ದು, ಈ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು PSR ಮಾನವ ಹಕ್ಕುಗಳ ಸಂರಕ್ಷಣಾ ಪರಿಷತ್ ಭ್ರಷ್ಟಾಚಾರ ವಿರೋಧಿ ಘಟಕ ಆಕ್ಷೇಪ ವ್ಯಕ್ತಪಡಿಸಿದೆ.

ಈ ಹಿನ್ನೆಲೆಯಲ್ಲಿ PSR ಮಾನವ ಹಕ್ಕುಗಳ ಸಂರಕ್ಷಣಾ ಪರಿಷತ್‌ನ ಪದಾಧಿಕಾರಿಗಳು ದೇವದುರ್ಗದ KEB ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

ಮನವಿಯಲ್ಲಿ, ಹಾನಿಗೊಳಗಾದ ವಿದ್ಯುತ್ ಕಂಬಗಳನ್ನು ಪರಿಶೀಲಿಸಿ, ಅವುಗಳಿಂದ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ತುರ್ತು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಒತ್ತಾಯಿಸಲಾಗಿದೆ.

ಸಾರ್ವಜನಿಕರು ವಿದ್ಯುತ್ ಸಮಸ್ಯೆಗಳ ಕುರಿತು ದೂರು ನೀಡಿದಾಗ ಅಧಿಕಾರಿಗಳು ಜವಾಬ್ದಾರಿಯುತವಾಗಿ ಸ್ಪಂದಿಸಬೇಕು. ಜನರ ಸಮಸ್ಯೆಗಳನ್ನು ನಿರ್ಲಕ್ಷಿಸದೆ ತಕ್ಷಣ ಪರಿಹಾರ ಕಲ್ಪಿಸಬೇಕು. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಸಿಬ್ಬಂದಿ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ PSR ಮಾನವ ಹಕ್ಕುಗಳ ಸಂರಕ್ಷಣಾ ಪರಿಷತ್‌ನ ಮಹಿಳಾ ಜಿಲ್ಲಾ ಅಧ್ಯಕ್ಷೆ ಕೌಸರ್ ಗೋಕುಲ್ ಬುವಾಜಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಿಬೂಬ್, ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಮಹಾದೇವಪ್ಪ, ಖಾಲಿದ್ ಖುರೇಷಿ, ಮುಜಮ್ಮಿಲ್ ಖುರೇಷಿ, ಅಬ್ದುಲ್ ರಜಾಕ್ ಪಾಷಾ, ನೈಸ್ ಬಾಬ್ಲು ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
📲Get App