🔥 TRENDING मथुरा बरेली हाइबे के आएराखेड़ा पर आपस म... अमरकंटक में एंबुलेंस गाड़ी अनबैलेंस हो... 🚨 હારીજ નગરપાલિકામાં રજૂઆત કરવા આવતા... जालौन पुलिस लाइन में मनाया गया पुलिस झ... Andhra CEO Reports No Complaints Over... AP and Tamil Nadu Vie for Industrial &...
23 Nov 2026•
ગુજરાતી मराठी ਪੰਜਾਬੀ বাংলা

ಆಶಾ ಕಾರ್ಯಕರ್ತೆಯರ ವೇತನ ₹15 ಸಾವಿರಕ್ಕೆ ಹೆಚ್ಚಿಸಿ: ಹನುಮಂತಪ್ಪ ಮನ್ನಾಪುರಿ ಆಗ್ರಹಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಂಟು ದಿನಗಳಿಂದ ಹಗಲು-ರಾತ್ರಿ ಪ್ರತಿಭಟನೆ; ಮುಖ್ಯಮಂತ್ರಿ ಸ್ಥಳಕ್ಕೆ ಭೇಟಿ ನೀಡಿ ಬೇಡಿಕೆ ಈಡೇರಿಸಲಿ

✍️ Reporter: Khaja Hussain 🗓 23 Nov 2026, 09:38 PM 👁 15
Share: 💬 WhatsApp 📘 Facebook 𝕏 Post
ದೇವದುರ್ಗ ಬ್ರೇಕಿಂಗ್ ನ್ಯೂಸ್

### ಆಶಾ ಕಾರ್ಯಕರ್ತೆಯರ ವೇತನ ₹15 ಸಾವಿರಕ್ಕೆ ಹೆಚ್ಚಿಸಿ: ಹನುಮಂತಪ್ಪ ಮನ್ನಾಪುರಿ ಆಗ್ರಹ

### ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಂಟು ದಿನಗಳಿಂದ ಹಗಲು-ರಾತ್ರಿ ಪ್ರತಿಭಟನೆ; ಮುಖ್ಯಮಂತ್ರಿ ಸ್ಥಳಕ್ಕೆ ಭೇಟಿ ನೀಡಿ ಬೇಡಿಕೆ ಈಡೇರಿಸಲಿ

ದೇವದುರ್ಗ ನ. 23: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನವೆಂಬರ್ 17ರಿಂದ ಆಶಾ ಕಾರ್ಯಕರ್ತೆಯರು ತಮ್ಮ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಚಳಿ, ಗಾಳಿ, ಮಳೆಯನ್ನೂ ಲೆಕ್ಕಿಸದೆ ತಮ್ಮ ಚಿಕ್ಕ ಮಕ್ಕಳೊಂದಿಗೆ ಹಗಲು-ರಾತ್ರಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಆಶಾ ಕಾರ್ಯಕರ್ತೆಯರು ಎಂಟು ದಿನಗಳಿಂದ ಹೋರಾಟ ಮುಂದುವರಿಸಿದ್ದಾರೆ.

ಪ್ರಸ್ತುತ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ತಿಂಗಳಿಗೆ ₹5 ಸಾವಿರ ಹಾಗೂ ಕೇಂದ್ರ ಸರ್ಕಾರದಿಂದ ₹2 ಸಾವಿರ ಸೇರಿದಂತೆ ಒಟ್ಟು ₹7 ಸಾವಿರ ಗೌರವಧನ ದೊರೆಯುತ್ತಿದೆ. ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ ಕೇವಲ ₹7 ಸಾವಿರದಲ್ಲಿ ಕುಟುಂಬ ನಿರ್ವಹಣೆ ಮಾಡುವುದು ಕಷ್ಟಕರವಾಗಿದೆ. ಆದ್ದರಿಂದ ಕನಿಷ್ಠ ₹15 ಸಾವಿರ ಮಾಸಿಕ ವೇತನ ನೀಡಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ ಎಂದು ಎಂ.ಆರ್.ಎಚ್.ಎಸ್. ರಾಯಚೂರು ಜಿಲ್ಲಾ ಅಧ್ಯಕ್ಷ ಹನುಮಂತಪ್ಪ ಮನ್ನಾಪುರಿ ತಿಳಿಸಿದ್ದಾರೆ.

ಇದಲ್ಲದೆ, ಪ್ರತಿಭಟನಾ ಸ್ಥಳದಲ್ಲಿ ಮಹಿಳೆಯರಿಗೆ ಬಟ್ಟೆ ಬದಲಾಯಿಸಲು, ತೊಳೆಯಲು ಹಾಗೂ ಶೌಚಾಲಯ ಬಳಸಲು ಸಮರ್ಪಕ ವ್ಯವಸ್ಥೆ ಇಲ್ಲದಿರುವುದು ತೀವ್ರ ತೊಂದರೆಯಾಗಿದೆ. ಸುಮಾರು 40 ಸಾವಿರ ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಮ್ಮ ಗಂಡಂದಿರು ಹಾಗೂ ಮಕ್ಕಳನ್ನು ಊರಿನಲ್ಲಿಯೇ ಬಿಟ್ಟು ಬೆಂಗಳೂರಿಗೆ ಬಂದು ಚಳಿಯಲ್ಲಿಯೇ ಹೋರಾಟ ನಡೆಸುತ್ತಿರುವ ಮಹಿಳೆಯರ ಸಂಕಷ್ಟವನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರತಿದಿನ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳ ಮುಂದೆ ಆಶಾ ಕಾರ್ಯಕರ್ತೆಯರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದು, ಕಣ್ಣೀರಿಡುತ್ತಾ ವೇತನ ಹೆಚ್ಚಳಕ್ಕೆ ಮನವಿ ಮಾಡುತ್ತಿದ್ದಾರೆ. ಇಷ್ಟಾದರೂ ಸರ್ಕಾರ ಸ್ಪಂದಿಸದಿರುವುದು ವಿಷಾದನೀಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತೆಯರೊಂದಿಗೆ ನೇರವಾಗಿ ಮಾತುಕತೆ ನಡೆಸಿ, ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಈ ಬೇಡಿಕೆಗಳು ಬರುವುದರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ವಿಶೇಷ ಕಾಳಜಿ ವಹಿಸಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೂ ಈ ವಿಚಾರವನ್ನು ತಂದು ಆಶಾ ಕಾರ್ಯಕರ್ತೆಯರ ಸಮಸ್ಯೆ ಪರಿಹರಿಸಲು ಮುಂದಾಗಬೇಕು. ಈ ತಾಯಂದಿರು, ಅಕ್ಕ-ತಂಗಿಯರ ಕಣ್ಣೀರು ಒರೆಸಿ, ಅವರಿಗೆ ನ್ಯಾಯ ಒದಗಿಸಿ ಗೌರವಯುತವಾಗಿ ತಮ್ಮ ತಮ್ಮ ಊರುಗಳಿಗೆ ಮರಳುವಂತೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಒಂದು ವೇಳೆ ಸರ್ಕಾರ ಕೂಡಲೇ ಸ್ಪಂದಿಸದಿದ್ದರೆ ರಾಜ್ಯದ ಪ್ರಗತಿಪರ, ಕನ್ನಡಪರ ಹಾಗೂ ದಲಿತಪರ ಸಂಘಟನೆಗಳು ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಹನುಮಂತಪ್ಪ ಮನ್ನಾಪುರಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
📲Get App